ಬೆಂಗಳೂರು:ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿರುವ ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಗಳ ಛಾಯಾಪ್ರತಿ (ಸ್ಕ್ಯಾನ್​ ಕಾಪಿ) ಪಡೆಯಲು ಆನ್‌ಲೈನ್ ಮೂಲಕ ಮೇ14ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಮೇ 15ರಿಂದ 21ರವರೆಗೆ ಮರು ಎಣಿಕೆ/ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಮೇ 15ರ ವರೆಗೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಛಾಯಾಪ್ರತಿಯನ್ನು ಪಡೆಯಬೇಕು. ನಂತರ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬೇಕು. ಮರು ಎಣಿಕೆ ಉಚಿತವಾಗಿರುತ್ತದೆ.
ಇದನ್ನೂ ಓದಿ:ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿ SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ
ಪ್ರತಿ ವಿಷಯದ ಸ್ಕ್ಯಾನ್​ ಪ್ರತಿ ಪಡೆಯಲು 410 ರೂ. ಮತ್ತು ಮರು ಮೌಲ್ಯಮಾಪನಕ್ಕೆ 810 ರೂ.ಗಳನ್ನು ನಿಗದಿ ಮಾಡಲಾಗಿದೆ. ಸ್ಕ್ಯಾನ್​ ಪ್ರತಿ ಕಳುಹಿಸಿರುವ ಬಗ್ಗೆ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ. ಬಳಿಕ ಮಂಡಳಿ ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಪೂರಕ ಪರೀಕ್ಷೆಗೆ ಒಂದು ವಿಷಯಕ್ಕೆ 370 ರೂ., 2 ವಿಷಯಕ್ಕೆ 461 ರೂ. ಮತ್ತು ಮೂರಕ್ಕಿಂತ ಹೆಚ್ಚಿನ ವಿಷಯಗಳಿಗೆ 620 ರೂ.ಗಳನ್ನು ನಿಗದಿ ಮಾಡಲಾಗಿದೆ. ಈ ಬಗ್ಗೆ ಸಂದೇಹಗಳಿದ್ದರೆ ಮಾಹಿತಿ ಪಡೆಯಲು ಸಹಾಯವಾಣಿ 080- 23310075/76 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.
Karnataka Assembly Election; ರಾಜಧಾನಿಯಲ್ಲಿ 4 ಕಡೆ ಮತ ಎಣಿಕೆ ವ್ಯವಸ್ಥೆ


ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:four × 3 =
Remember me
