ಬೆಂಗಳೂರು: ದೇಶದ ಕೀರ್ತಿ ಪತಾಕೆಯನ್ನು ಪ್ರಪಂಚದೆಲ್ಲೆಡೆ ಹಾರಿಸಿದ ಇಸ್ರೋದ ವಿಜ್ಞಾನಿಗಳ ತಂಡವನ್ನು ರಾಜ್ಯ ಸರ್ಕಾರದ ವತಿಯಿಂದ ಕಾರ್ಯಕ್ರಮವನ್ನು ಹಮ್ಮಿಕೊಂಡು ಅಭಿನಂದಿಸಿ ಗೌರವಿಸಬೇಕು ಎಂದು ವಿಧಾನ ಪರಿಷತ್​ ಸದಸ್ಯ ದಿನೇಶ್​ ಗೂಳಿಗೌಡ ಕೋರಿದ್ದಾರೆ.
ಚಂದ್ರಯಾನ ಯಶಸ್ವಿಯಾದ ಹಿನ್ನೆಲೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಚಂದ್ರನ ಅಂಗಳಕ್ಕೆ ಕಾಲಿಡುವಲ್ಲಿ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿದೆ. ಇದು ಭಾರತದ ಹಾಗೂ ಭಾರತೀಯರ ಗೆಲುವಾಗಿದೆ. ಈ ಐತಿಹಾಸಿಕ ಸಾಧನೆ ಮಾಡಿದ ಇಸ್ರೋದ ಎಲ್ಲ ವಿಜ್ಞಾನಿಗಳ ತಂಡಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ಈ ತಂಡವನ್ನು ರಾಜ್ಯ ಸರ್ಕಾರ ಕರೆದು ಗೌರವಿಸಬೇಕೆಂದು ಮನವಿ ಸಲ್ಲಿಸಿದ್ದಾರೆ.
ಚಂದ್ರಯಾನ – 3 ವೈಜ್ಞಾನಿಕ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲನ್ನು ಬರೆದಿದೆ. ಛಲ ಬಿಡದೆ ಅಂದುಕೊಂಡಿದ್ದನ್ನು ಇಸ್ರೋ ಸಾಧಿಸಿದೆ. ಈ ಮೂಲಕ ಇಡೀ ತಂಡವನ್ನು ಮುನ್ನಡೆಸಿದ ಇಸ್ರೋ ಅಧ್ಯಕ್ಷ ಸೋಮನಾಥ್ ಹಾಗೂ ಅವರ ತಂಡಕ್ಕೆ ರಾಜ್ಯದ ಜನತೆಯ ಪರವಾಗಿ ಅಭಿನಂದನೆಯನ್ನು ಹೇಳಬಯಸುತ್ತೇನೆ ಎಂದಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:two − 1 =
Remember me
