ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿ ಬಂಧನಕ್ಕೊಳಗಾಗಿ ಜೈಲು ಸೇರಿದ್ದ ಐಪಿಎಸ್ ಅಧಿಕಾರಿ ಅಮೃತ್ ಪೌಲ್‌ಗೆ ಸೋಮವಾರ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಈ ಕುರಿತಂತೆ ಕಾಯ್ದಿರಿಸಿದ ಆದೇಶವನ್ನು ಕಲಬುರಗಿ ನ್ಯಾಯಪೀಠದಲ್ಲಿರುವ ನ್ಯಾಯಮೂರ್ತಿ ಪಿ.ಎಂ. ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿದೆ. ತನಿಖೆಗೆ ಸಹಕರಿಸಬೇಕು, ಅನುಮತಿ ಇಲ್ಲದೇ ವಿದೇಶಕ್ಕೆ ಹೋಗುವಂತಿಲ್ಲ ಇತ್ಯಾದಿ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ.
ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಡೆದಿದ್ದ 545 ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಅಮೃತ್ ಪೌಲ್‌ ಮಾರ್ಚ್‌ನಲ್ಲಿ ಜೈಲು ಸೇರಿದ್ದರು. ಅವರ ಮೇಲೆ ಆರೋಪ ಕೇಳಿ ಬಂದ ತಕ್ಷಣ ಆಗಿನ ಸರ್ಕಾರ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಿತ್ತು. ನೇಮಕಾತಿ ಅಕ್ರಮದ ಸಮಯದಲ್ಲಿ ಅವರು ರಾಜ್ಯ ಪೊಲೀಸ್ ಇಲಾಖೆಯ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದರು.
ಹಗರಣದಲ್ಲಿ ಪೊಲೀಸ್ ನೇಮಕಾತಿ ವಿಭಾಗದ ಡಿವೈಎಸ್​ಪಿ ಶಾಂತಕುಮಾರ್ ಸೇರಿ ಹಲವು ನೌಕರರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಅವರೆಲ್ಲರ ವಿಚಾರಣೆಯಿಂದ ಅಮೃತ್ ಪೌಲ್ ಸಹ ಅಕ್ರಮದಲ್ಲಿ ಭಾಗಿಯಾಗಿದ್ದು ಮೇಲ್ನೋಟಕ್ಕೆ ಕಂಡುಬಂದಿತ್ತು. ಕಳೆದ ಆರು ತಿಂಗಳಿಗೂ ಹೆಚ್ಚು ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.
ಹಾವು ಕಚ್ಚಿದೆ ಅಂತ ಆಸ್ಪತ್ರೆಗೆ ಕರೆ ತಂದರೂ ‘ಇಲ್ಲ ಕಚ್ಚಿಲ್ಲ’ ಎಂದು ವಾಪಸ್ ಕಳಿಸಿದ ಡಾಕ್ಟರ್; ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಸಾವು

ಸಿಎಂ ಸಿದ್ದರಾಮಯ್ಯ, ಪುತ್ರ ಯತೀಂದ್ರ ವಿರುದ್ಧ ದೂರು ದಾಖಲು: ಆರೋಪವೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − one =
Remember me
