ಬೆಂಗಳೂರು:ರಾಜ್ಯ ಸರ್ಕಾರದ ಕರೊನಾ ಸೋಂಕಿತರ ಚಿಕಿತ್ಸೆ ಉಪಕರಣ ಖರೀದಿಯಲ್ಲಿ ಅಕ್ರಮ ನಡೆದಿದ್ದು, ತನಿಖೆ ನಡೆಸಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಉಪಕರಣಗಳ ಖರೀದಿಯಲ್ಲಿ 2200 ಕೋಟಿ ರೂ. ಅವ್ಯವಹಾರವಾಗಿದೆ. ದುಪ್ಪಟ್ಟು ಹಣ ನೀಡಿ ಖರೀದಿಸಲಾಗಿದೆ. ಅವ್ಯವಹಾರದಲ್ಲಿ ಭಾಗಿಯಾದವ ರನ್ನು ತನಿಖೆ ಮೂಲಕ ಪತ್ತೆ ಮಾಡಿ ಕ್ರಮ ಕೖಗೊಳ್ಳಬೇಕೆಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯಲ್ಲಿ ಸಮಿತಿಯ ಅಧ್ಯಕ್ಷ ಎಚ್.ಕೆ.ಪಾಟೀಲ್ ಈ ಕುರಿತು ಮಾತನಾಡಿದರೆ ಸಭಾಧ್ಯಕ್ಷರು ಅವರಿಗೆ ಪತ್ರ ಬರೆಯುತ್ತಾರೆ. ತಪಾಸಣೆ ಮಾಡಬಾರದು ಎಂದು ತಡೆಯಾಜ್ಞೆ ಕೊಡುತ್ತಾರೆ. ಇದು ಭ್ರಷ್ಟಾಚಾರ ಮುಚ್ಚಿ ಹಾಕುವ ಪ್ರಯತ್ನ ಎಂದು ಟೀಕಿಸಿದರು. ಉಪಕರಣಗಳ ಖರೀದಿ ಕುರಿತು ಹಣಕಾಸು ಇಲಾಖೆಯೇ ಆಕ್ಷೇಪ ವ್ಯಕ್ತಪಡಿಸಿದೆ. ಹೆಚ್ಚಿನ ದರ ನೀಡಿ ಏಕೆ ಉಪಕರಣಗಳನ್ನು ಖರೀದಿ ಮಾಡಿದಿರಿ ಎಂದು ಪ್ರಶ್ನೆ ಮಾಡಿದೆ. ಕರೊನಾದಿಂದ ಜನ ನರಳುತ್ತಿರುವ ಸಂದರ್ಭದಲ್ಲಿ ಭ್ರಷ್ಟಾಚಾರ ನಡೆಸು ತ್ತಿರುವ ಇವರು ಮನುಷ್ಯರೇ, ಅಧಿಕಾರ ನಡೆಸುತ್ತಿರುವವರಿಗೆ ಮಾನವೀಯತೆ ಎಂಬುದಿದೆಯೇ ಎಂದು ಪ್ರಶ್ನಿಸಿದರು.
ಕರೊನಾ ಸೋಂಕಿನಿಂದ ಮೃತರಾದವರ ಶವಸಂಸ್ಕಾರ ಹೇಗೆ ನಡೆಸಬೇಕು ಎಂಬುದರ ಬಗ್ಗೆ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಆದರೂ, ಸರ್ಕಾರ ಶವಗಳನ್ನು ಅಮಾನವೀಯವಾಗಿ ಎಸೆಯುತ್ತಿದೆ. ಮನುಕುಲಕ್ಕೆ ಅಗೌರವ ಆಗುವ ರೀತಿ ಬಳ್ಳಾರಿ, ಯಾದಗಿರಿ ಮತ್ತಿತರ ಕಡೆಗಳಲ್ಲಿ ಶವಗಳ ಅಂತ್ಯಸಂಸ್ಕಾರ ನಡೆಸಿದೆ. ಆರೋಗ್ಯ ಸಚಿವರ ಸ್ವಂತ ಜಿಲ್ಲೆಯಲ್ಲಿಯೇ ಈ ರೀತಿಯಾದರೆ ಹೇಗೆ? ಈಗ ತಪ್ಪಾಗಿದೆ. ಮುಂದೆ ಸರಿ ಮಾಡಿಕೊಳ್ಳುತ್ತೇವೆ ಎಂಬುದು ಪರಿಹಾರ ಅಲ್ಲ ಎಂದರು.
ಹಾಸಿಗೆ ಎಲ್ಲಿವೆ?:ಸರ್ಕಾರದ ಮಾಹಿತಿ ಪ್ರಕಾರ, ಕರೊನಾ ಸೋಂಕಿತರಿಗೆ 4663 ಬೆಡ್​ಗಳು ನಿಗದಿಯಾಗಿದೆ. ಈವರೆಗೆ 2694 ಹಾಸಿಗೆಗಳನ್ನು ಒದಗಿಸಲಾಗಿದೆ. ಹೀಗಿರುವಾಗ ಸೋಂಕಿತರು ಬೆಡ್ ಸಿಗದೆ ಏಕೆ ಪರದಾಡಬೇಕು? ನಿತ್ಯವೂ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಈ ಬೆಡ್​ಗಳ ಸಂಖ್ಯೆ ಯಾವುದಕ್ಕೂ ಸಾಕಾಗುವುದಿಲ್ಲ ಎಂದರು.
ಸುಧಾಕರ್ ಪರ ಬ್ಯಾಟಿಂಗ್
ಸಿಎಂ ಮಾತನ್ನು ಮಂತ್ರಿಗಳು ಕೇಳುತ್ತಿಲ್ಲ. ಸಚಿವರೇ ಪರಸ್ಪರ ಕಿತ್ತಾಡುತ್ತಿದ್ದಾರೆ. ಇದುವರೆಗೆ ಸಚಿವ ಸುಧಾಕರ್ ಕರೊನಾ ನಿರ್ವಹಣೆಯ ಉಸ್ತುವಾರಿ ಹೊತ್ತಿದ್ದರು. ಮತ್ತೆ ಸುರೇಶ್​ಕುಮಾರ್ ಅವರಿಗೆ, ಆ ಬಳಿಕ ಅಶೋಕ್​ಗೆ,
ಇದೀಗ ಮತ್ತೆ ಸುಧಾಕರ್​ಗೆ ಹೊಣೆಗಾರಿಕೆ ನೀಡಲಾಗಿದೆ. ಸುಧಾಕರ್ ವೈದ್ಯಕೀಯ ಪದವೀಧರರು. ಅವರಿಗೆ ತಿಳಿವಳಿಕೆ ಇರುತ್ತದೆ. ಸರ್ಕಾರದಲ್ಲಿ ಪರಸ್ಪರ ಹೊಂದಾಣಿಕೆ ಇಲ್ಲ ಎಂಬುದು ಇದರಿಂದಲೇ ಗೊತ್ತಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಯಾವುದೇ ತನಿಖೆಗೆ ಸಿದ್ಧ
ಬೆಂಗಳೂರು: ಕರೊನಾ ಉಪಕರಣ ಖರೀದಿಯಲ್ಲಿ ಅಕ್ರಮ ನಡೆದಿದ್ದರೆ ಯಾವುದೇ ತನಿಖೆಗೂ ಸಿದ್ಧರಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ಕರೊನಾ ಉಪಕರಣ ಖರೀದಿಯಲ್ಲಿ ಭ್ರಷ್ಟಾಚಾರ ನಡೆಸಿದವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇರಲು ನಾಲಾಯಕ್. ನಾವು ಪ್ರತಿಯೊಂದು ಉಪಕರಣ ಖರೀದಿಯ ಲೆಕ್ಕ ಕೊಡ್ತೇವೆ. ಇಂಥಹ ಸಂದರ್ಭದಲ್ಲಿ ರಾಜಕಾರಣ ಮಾಡಬೇಕಾ? ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈ ರೀತಿ ಆರೋಪ ಮಾಡಿರುವುದು ದುರದೃಷ್ಟಕರ ಎಂದು ಸುದ್ದಿಗಾರರಿಗೆ ತಿಳಿಸಿದರು. ಪ್ರಾರಂಭದ ದಿನಗಳಲ್ಲಿ ಪಿಪಿಇ ಕಿಟ್ ದೇಶದಲ್ಲಿ ಲಭ್ಯವಿರಲಿಲ್ಲ. ಆಗ ಅಧಿಕಾರಿಗಳು ಬೆಲೆ ನಿಗದಿ ಮಾಡಿ ಖರೀದಿ ಮಾಡಿದ್ದಾರೆ. ನಂತರ ಕಡಿಮೆ ದರಕ್ಕೂ ಸಿಗುತ್ತಿವೆ. ಎಲ್ಲ ಖರೀದಿಯೂ ಉನ್ನತ ಮಟ್ಟದ ಅಧಿಕಾರಿಗಳ ಕಣ್ಗಾವಲಿನಲ್ಲಿ ಪಾರದರ್ಶಕವಾಗಿಯೇ ನಡೆದಿದೆ ಎಂದು ಸ್ಪಷ್ಟಪಡಿಸಿದರು. ಸಚಿವರ ಮಧ್ಯೆ ಸಮನ್ವಯತೆ ಕೊರತೆ ಇಲ್ಲ ಎಂಬ ಪ್ರತಿಪಕ್ಷ ನಾಯಕರ ಆರೋಪಕ್ಕೆ, ನಾವು ಬಾಕ್ಸಿಂಗ್ ಮಾಡಿದ್ದೀವಾ? ಎಂದು ಪ್ರತಿಕ್ರಿಯಿಸಿದರು.
ನಿಮ್ಮ ಕಣ್ಣಿಗೊಂದು ಸವಾಲ್: ಈ ಚಿತ್ರದಲ್ಲಿ ಅಡಗಿ ಕುಳಿತಿರೋ ಬೆಕ್ಕನ್ನು ಗುರುತಿಸಿದ್ರೆ ನೀವೇ ಗ್ರೇಟ್​!​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
