ಬೆಂಗಳೂರು:ಲೋಕಸಭೆ ಚುನಾವಣೆಗೆ ಇನ್ನೇನು ಮೂರು ತಿಂಗಳು ಬಾಕಿ ಇವೆ. ರಾಜ್ಯದಲ್ಲೂ ಲೋಕ ಸಮರವನ್ನು ಎದುರಿಸಲು ಕಾಂಗ್ರೆಸ್ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟ ಸಿದ್ದತೆಗಳನ್ನು ನಡೆಸುತ್ತಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿದ್ದ ಕಾಂಗ್ರೆಸ್‌ ತನ್ನ ಗ್ಯಾರಂಟಿ ಯೋಜನೆಗಳು ಲೋಕಸಬೆ ಚುನಾವಣೆಯಲ್ಲಿ ಕೈ ಹಿಡಿಯುವ ಆಲೋಚನೆಯಲ್ಲಿದೆ.
ಇದನ್ನೂ ಓದಿ:370 ಸೀಟ್‌ ಗೆದ್ದರೆ ಶ್ಯಾಮ್‌ ಪ್ರಸಾದ್‌ ಮುಖರ್ಜಿಗೆ ಸೂಕ್ತ ಶ್ರದ್ಧಾಂಜಲಿ: ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ತಿರುಗೇಟು ನೀಡಲು ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದೆ. ಕಾಂಗ್ರೆಸ್‌ ಮುಂದಿನ ಲೋಕಸಭಾ ಚುಣಾವಣೆಯನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಕನಿಷ್ಠ 15 ಸ್ಥಾನಗಳನ್ನು ಗೆಲ್ಲುವ ಹುಮ್ಮಸ್ಸಿನಲ್ಲಿದೆ ಕಾಂಗ್ರೆಸ್​.
ಮೈಸೂರು-ಕೊಡುಗು ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು ದೊಡ್ಡದೊಂದು ಸಂಚಲನ ಸೃಷ್ಟಿ ಮಾಡಲು ಕಾರ್ಯತಂತ್ರ ರೂಪಿಸಿದ್ದಾರೆ.ʻಬಡವರ ಮಕ್ಕಳು ಬೆಳೀಬೇಕುʼ ಖ್ಯಾತಿಯ ಡಾಲಿ ಧನಂಜಯ್ ಅವರು ಸಾಮಾಜಿಕ ಕಳಕಳಿ ಉಳ್ಳ ನಟ. ಡಾ.ಬಾಬು ಜಗಜೀವನ ರಾಮ್‌ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ (ಲಿಡ್ಕರ್‌) ಉತ್ಪನ್ನಗಳಿಗೆ ರಾಯಭಾರಿಯಾಗಿದ್ದು ಅರ್ಥಪೂರ್ಣವಾಗಿದೆ ಎಂದು ಈ ಹಿಂದೆ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈಗಾಗಲೇ ನಟ ಡಾಲಿ ಧನಂಜಯ ಅವರನ್ನು ರಾಜಕೀಯಕ್ಕೆ ತರುವ ಪ್ರಯತ್ನಗಳು ನಡೆಯುತ್ತಿದೆಯಂತೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಸಂಸದರಾಗಿರುವವರು ಪ್ರತಾಪ್‌ ಸಿಂಹ ಅವರು ಸಿಎಂ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ನೇರವಾದ ಠಕ್ಕರ್‌ ಕೊಡುತ್ತಿದ್ದಾರೆ. ಒಂದು ಹಂತದಲ್ಲಿ ಪ್ರತಾಪ್‌ ಸಿಂಹ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ಅವರೇ ಕಣಕ್ಕಿಳಿಯುತ್ತಾರೆ ಎಂಬ ಚರ್ಚೆ ನಡೆದಿತ್ತು.
ಪುತ್ರನನ್ನ ಲೋಕಸಭಾ ಕಣಕ್ಕಿಳಿಸುವ ನಿಟ್ಟಿನಲ್ಲಿ ಮೈಸೂರು ಜಿಲ್ಲೆ ಶಾಸಕರು, ಸಚಿವರು ಹಾಗೂ ಮುಖಂಡರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿದ್ದರು. ಆದರೆ, ಸಭೆಯಲ್ಲಿ ಒಮ್ಮತ್ತದ ಅಭಿಪ್ರಾಯ ಕೇಳಿ ಬರದ ಹಿನ್ನೆಲೆ ಡಾಲಿ ಧನಂಜಯ ಅವರ ಹೆಸರು ಕೇಳಿ ಬಂದಿದೆ.
ಒಂದು ವೇಳೆ ಡಾಲಿ ಧನಂಜಯ ಅವರು ಮೈಸೂರು ಕ್ಷೇತ್ರದಲ್ಲಿ ಕಣಕ್ಕಿಳಿದರೆ ದೊಡ್ಡ ಮಟ್ಟದ ಸಂಚಲನವಂತೂ ಕ್ರಿಯೇಟ್ ಆಗಲಿದೆ. ಸಿದ್ದರಾಮಯ್ಯ ಜತೆ ಆಪ್ತ ಒಡನಾಟ ಹೊಂದಿರುವ ಡಾಲಿ ಅವರು ಜನಪ್ರಿಯ ನಟ ಆಗಿರುವ ಕಾರಣಕ್ಕೆ ಪ್ರಚಾರ ನಿರಾಯಾಸವಾಗಿ ನಡೆಯುತ್ತದೆ.
ಕ್ರಿಕೆಟಿಗ ಸರ್ಫರಾಜ್ ಖಾನ್ ತಂದೆಗೆ ಥಾರ್ ಬಹುಮಾನ: ಆನಂದ್ ಮಹೀಂದ್ರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + eight =
Remember me
