ಬೆಂಗಳೂರು:ಶಕ್ತಿ ಯೋಜನೆ ದುರ್ಬಳಕೆ ಆಗದಂತೆ ತಡೆಯಲು ಮುಂದಾಗಿರುವ ಸಾರಿಗೆ ಇಲಾಖೆ, ಯಾವ ಯಾವ ಅಪರಾಧಗಳಿಗೆ ಯಾವ್ಯಾವ ಕ್ರಮಗಳನ್ನು ಕೈಗೊಳ್ಳಲಾಗುವುದು ಎನ್ನುವುದನ್ನು ವಿವರಿಸಿ ಸುತ್ತೋಲೆ ಹೊರಡಿಸಿದೆ.
ಸಾರಿಗೆ ಸಿಬ್ಬಂದಿಗಳು ಪ್ರಯಾಣಿಕರ ಸಂಖ್ಯೆಯಲ್ಲಿ ಗೋಲ್ಮಾಲ್ ಮಾಡುತ್ತಿರುವ ಆರೋಪ ಕೇಳಿಬಂದಿದ್ದು ಕಠಿಣ ಕ್ರಮದ ಎಚ್ಚರಿಕೆಯನ್ನು ನಿಗಮದ ಅಧಿಕಾರಿಗಳು ಕೊಟ್ಟಿದ್ದಾರೆ.
ಇದನ್ನೂ ಓದಿ:ಶಕ್ತಿ ಯೋಜನೆ; ರಾಜ್ಯ ಸರ್ಕಾರಕ್ಕೆ ತಗುಲಿದ ಒಟ್ಟು ವೆಚ್ಚವೆಷ್ಷು ಗೊತ್ತಾ?
ಯೋಜನೆ ಜಾರಿಯಾದಾಗಿನಿಂದಲೂ ನಿರೀಕ್ಷೆಗೂ ಮೀರಿ ಮಹಿಳಾ ಪ್ರಯಾಣಿಕರ ಓಡಾಟ ಮಾಡುತ್ತಿದ್ದು 18 ದಿನದಲ್ಲೇ 339 ಕೋಟಿ ಮೊತ್ತದ ಟಿಕೆಟ್ ಮಹಿಳಾ ಪ್ರಯಾಣಿಕರಿಗೆ ನೀಡಲಾಗಿದೆ. ಎರಡು ದಿನದ ಹಿಂದೆ ಈ ಸುತ್ತೋಲೆಯನ್ನು ಹೊರಡಿಸಿರುವುದು ಶಕ್ತಿ ಯೋಜನೆ ಹೆಸರಲ್ಲಿ ಪ್ರಯಾಣಿಕರಿಗಿಂತ ಹೆಚ್ಚಿನ ಟಿಕೆಟ್ ನೀಡಲಾಗುತ್ತಿದೆಯಾ ಎನ್ನುವ ಅನುಮಾನ ಮೂಡುವಂತೆ ಮಾಡಿದೆ.
ಬಸ್ಸಿನಲ್ಲಿ ವಾಸ್ತವ ಮಹಿಳಾ ಪ್ರಯಾಣಿಕರ ಸಂಖ್ಯೆಗಿಂತ ಹೆಚ್ಚಿನ ಟಿಕೆಟ್ ಇರಬಾರದು. ನಿರ್ವಾಹಕರು ಹೆಚ್ಚಿನ ಟಿಕೆಟ್ ನೀಡಿರುವುದು ಕಂಡು ಬಂದರೆ ಗಂಭೀರ ಪ್ರಕರಣವೆಂದು ಪರಿಗಣನೆ ಮಾಡಲಾಗುವುದು ಎನ್ನುವ ಎಚ್ಚರಿಕೆ ನೀಡಲಾಗಿದ್ದು ವಾಸ್ತವ ಪ್ರಯಾಣಿಕರ ಸಂಖ್ಯೆಗಿಂತ ಹೆಚ್ಚಿನ ಟಿಕೆಟ್ ನೀಡಿದ್ದರೆ ನಿರ್ವಾಹಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ:ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್: 8 ದಿನದಲ್ಲಿ 3.63 ಕೋಟಿಗೂ ಅಧಿಕ ಮಹಿಳೆಯರ ಪ್ರಯಾಣ, ಖರ್ಚಾಗಿದ್ದೆಷ್ಟು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − eight =
Remember me
