ಬೆಂಗಳೂರು: ಎದೆಹಾಲು ಸಂಗ್ರಹ ಹಾಗೂ ಮಾರಾಟ ನಿಯಂತ್ರಣಕ್ಕೆ ಕಾನೂನು ಜಾರಿಯಲ್ಲಿದೆಯೇ ಎಂಬ ಬಗ್ಗೆ ಅಧ್ಯಯನ ನಡೆಸಿ ಮಾಹಿತಿ ನೀಡುವಂತೆ ಅರ್ಜಿದಾರ ಪರ ವಕೀಲರಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಎದೆಹಾಲನ್ನು ವಾಣಿಜ್ಯೀಕರಣಕ್ಕೆ ಕಡಿವಾಣ ಹಾಕಲು ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಬೆಂಗಳೂರಿನ ಮರಳಕುಂಟೆ ನಿವಾಸಿ ಮುನೇಗೌಡ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಬಹುರಾಷ್ಟ್ರೀಯ ಕಂಪನಿಗಳು ಎದೆಹಾಲು ವಾಣಿಜ್ಯೀಕರಣ ಮಾಡುತ್ತಿವೆ. ಅನೈತಿಕವಾಗಿರುವ ಈ ವ್ಯಾಪಾರವನ್ನು ತಡೆಯಬೇಕು. ಆ ಸಂಬಂಧ ನಿರ್ದಿಷ್ಟ ಕಾನೂನು ರೂಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರ ಪರ ವಕೀಲ ಬಿ. ವಿಶ್ವೇಶ್ವರಯ್ಯ ಕೋರಿದರು.
ಯಾವುದೇ ಕಾನೂನುಗಳು ಇಲ್ಲದೇ ನಿಮ್ಮ ಮನವಿ ಪರಿಗಣಿಸಿ ಕ್ರಮ ಜರುಗಿಸುವಂತೆ ಪ್ರತಿವಾದಿಗಳಿಗೆ ನಿರ್ದೇಶಿಸಲು ಸಾಧ್ಯವೇ? ಎಂದು ಪೀಠ ಪ್ರಶ್ನಿಸಿತು. ಅಲ್ಲದೆ, ಯಾವುದಾದರೂ ಕಾನೂನಿನ ಚೌಕಟ್ಟು ಇರಬೇಕಲ್ಲವೇ? ಇಲ್ಲವಾದರೆ ಕಾನೂನು ರೂಪಿಸುವಂತೆ ನಿರ್ದೇಶಿಸಲು ಪಿಐಎಲ್ ವ್ಯಾಪ್ತಿಯಲ್ಲಿ ನ್ಯಾಯಾಲಯಕ್ಕೆ ಹೇಗೆ ಸಾಧ್ಯ? ಕೇಳಿತು.
ಅರ್ಜಿಯಲ್ಲಿ ಪ್ರಮುಖ ವಿಚಾರ ಎತ್ತಲಾಗಿದೆ. ಅದರಲ್ಲಿ ಯಾವುದೇ ಸಂಶಯವಿಲ್ಲ. ಹೀಗಾಗಿ, ಪ್ರಕರಣ ಸಂಬಂಧ ಮತ್ತಷ್ಟು ಅಧ್ಯಯನ ನಡೆಸಿ ನ್ಯಾಯಾಲಯಕ್ಕೆ ಮಾಹಿತಿ ನೀಡುವಂತೆ ಅರ್ಜಿದಾರ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಜೂ.10ಕ್ಕೆ ಮುಂದೂಡಿತು
ಪ್ರಕರಣದ ಹಿನ್ನೆಲೆ ?:ಕೆಲ ಖಾಸಗಿ ಸಂಸ್ಥೆಗಳು ಗ್ರಾಮಾಂತರ ಪ್ರದೇಶದಲ್ಲಿ ತಾಯಿಗೆ ಹಣ ನೀಡಿ ಎದೆಹಾಲು ಸಂಗ್ರಹಿಸಿ, ನಂತರ ಅದನ್ನು ಪೌಡರ್ ರೂಪದಲ್ಲಿ ದೇಶದಾದ್ಯಂತ ಮಾರಾಟ ಮಾಡುತ್ತಿವೆ. ಎದೆಹಾಲನ್ನು ನವಜಾತ ಶಿಶುಗಳಿಗೆ ಉಣಿಸಲು ಮಾತ್ರ ಬಳಸಬಹುದು. ವಾಣಿಜ್ಯ ಉದ್ದೇಶಕ್ಕೆ ಬಳಸಬಾರದು ಎಂದು 2017ರಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ಹಾಲು ಸಂಗ್ರಹಣಾ ಕೇಂದ್ರಗಳಿಗೆ ಮಾರ್ಗಸೂಚಿ ಹೊರಡಿಸಲಾಗಿದೆ.
ತಾಯಿ ಎದೆಹಾಲನ್ನು ಮಾರಾಟ ಮಾಡಿದರೆ, ಶಿಶುಗಳ ಆರೋಗ್ಯ ಮತ್ತು ಬೆಳವಣಿಗೆ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಆಯುಷ್, ಕಾನೂನು, ಆರೋಗ್ಯ ಹಾಗೂ ಕುಟುಂಬ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಮುಖ್ಯಸ್ಥರನ್ನು ಪ್ರತಿವಾದಿ ಮಾಡಲಾಗಿದೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 4 =
Remember me
