ಚಿಕ್ಕಬಳ್ಳಾಪುರ: ಗ್ರಾಮೀಣ ಭಾಗದ ಜನರಲ್ಲಿ ಹುರುಪು ತುಂಬುವ ಉದ್ದೇಶದಿಂದ ಈಶ ಫೌಂಡೇಷನ್ ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಆ.12 ರಿಂದ ಸೆ.23 ರವರೆಗೆ ಗ್ರಾಮೋತ್ಸವವನ್ನು ಕೈಗೊಂಡಿದೆ.ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಶಿವಮೊಗ್ಗ ಸೇರಿದಂತೆ ರಾಜ್ಯದ 13 ಜಿಲ್ಲೆಗಳ 3200 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲು ಈಗಾಗಲೇ ಸಿದ್ಧತೆ ಕೈಗೊಂಡಿದ್ದು ಇದರಡಿ ಕ್ಲಸ್ಟರ್ ಮಟ್ಟದ ಕ್ರೀಡಾ ಪಂದ್ಯಾವಳಿಗಳು ಆ.12 ರಿಂದ ಪ್ರಾರಂಭವಾಗಲಿದ್ದು ಸೆ.3 ರಂದು ಗೆದ್ದ ತಂಡಗಳು ವಿಭಾಗ ಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ. ಇದರ ಮಾದರಿಯಲ್ಲಿ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಪಾಂಡಿಚೇರಿಯಲ್ಲೂ ಸ್ಪರ್ಧೆಗಳು ನಡೆಯಲಿದ್ದು ಕೊಯಮತ್ತೂರಿನ ಈಶ ಯೋಗ ಕೇಂದ್ರದಲ್ಲಿರುವ 112 ಅಡಿ ಎತ್ತರದ ಆದಿಯೋಗಿ ಎದುರು ಅಂತಿಮ ಪಂದ್ಯಾವಳಿಗಳು ನಡೆಯಲಿವೆ.ಗ್ರ‍್ರಾಮೀಣ ಭಾರತದ ಚೈತನ್ಯವನ್ನು ಪುನರುಜ್ಜೀವನಗೊಳಿಸಿ, ಸಮುದಾಯ, ಸಂಪ್ರದಾಯ ಮತ್ತು ಆರೋಗ್ಯಕರ ಸ್ಪರ್ಧೆಯ ಪ್ರಜ್ಞೆಯನ್ನು ಬೆಳೆಸುವುದೇ ಕಾರ್ಯಕ್ರಮದ ಪ್ರಮುಖ ಉದ್ದೇಶ. ಇದರಲ್ಲಿ ಕ್ರೀಡಾ ವೃತ್ತಿಪರರನ್ನು ಹೊರತುಪಡಿಸಿದಂತೆ ಯಾರೂ ಬೇಕಾದರೂ ಭಾಗವಹಿಸಬಹುದು. ಪ್ರತಿನಿತ್ಯ ಕ್ರೀಡೆಗಳನ್ನು ಆಡಲು ಅವಕಾಶ ಇಲ್ಲದಿರುವರಿಗೆ ಆದ್ಯತೆ ನೀಡಲಾಗುತ್ತದೆ. ಇನ್ನು ತಂಡದಲ್ಲಿ ಒಂದೇ ಗ್ರಾಮದವರು ಮಾತ್ರ ಇರುವುದು ವಿಶೇಷವಾಗಿದೆ.
*ಪಂದ್ಯಾವಳಿಗಳುಮೊದಲನೇ ಹಂತದ (ಕ್ಲಸ್ಟರ್) ಪಂದ್ಯಾವಳಿಗಳು ಆ.12 ಹಾಗೂ ಆ.13 ರಂದು ಚಿಕ್ಕಬಳ್ಳಾಪುರ, ವಿಜಯಪುರ, ಕೋಲಾರ , ವಿಜಯನಗರ, ಶಿವಮೊಗ್ಗ, ಮೈಸೂರು,ದಕ್ಷಿಣ ಕನ್ನಡ, ಉಡುಪಿ, ಆ.19 ಹಾಗೂ ಆ.20 ರಂದು ಬೆಂಗಳೂರು ಗ್ರಾಮಾಂತರ, ತುಮಕೂರು, ಕೊಡಗು, ಚಾಮರಾಜನಗರ, ಆ.26 ಹಾಗೂ ಆ.27 ರಂದು ಚಿಕ್ಕಮಗಳೂರು, ಎರಡನೇ ಹಂತದ ಪಂದ್ಯಾವಳಿಗಳು ಸೆ.3 ರಂದು ಚಿಕ್ಕಬಳ್ಳಾಪುರ ಹಾಗೂ ಮೈಸೂರು ಜಿಲ್ಲೆ, ಸೆ.23 ರಂದು ಕೊಯಮತ್ತೂರಿನ ಈಶ ಯೋಗ ಕೇಂದ್ರದಲ್ಲಿ ಅಂತಿಮ ಪಂದ್ಯಾವಳಿಗಳು ನಡೆಯಲಿವೆ.
*ಗ್ರಾಮೋತ್ಸವ ಹಿನ್ನೆಲೆ2004 ರಲ್ಲಿ ಸದ್ಗುರುಗಳಿಂದ ಪ್ರಾರಂಭವಾದ ಗ್ರಾಮೋತ್ಸವದಡಿ ಈ ವರ್ಷ ಪುರುಷರಿಗಾಗಿ ವಾಲೀಬಾಲ್, ಮಹಿಳೆಯರಿಗಾಗಿ ಥ್ರೋಬಾಲ್ ಮತ್ತು ತಮಿಳುನಾಡಿನ ಗ್ರಾಮೀಣ ಆಟಗಳು, ಕಬಡ್ಡಿ ಸ್ಪರ್ಧೆಯನ್ನು ಕೈಗೊಂಡಿದ್ದು ಇದರಲ್ಲಿ 65 ಸಾವಿರಕ್ಕೂ ಹೆಚ್ಚು ಆಟಗಾರರು ಭಾಗವಹಿಸುವ ನಿರೀಕ್ಷೆ ಇದೆ. 56 ಲಕ್ಷ ರೂ ಮೌಲ್ಯದ ಬಹುಮಾನಗಳನ್ನು ನೀಡಲಾಗುತ್ತದೆ. ವಾಲೀಬಾಲ್ ಪಂದ್ಯಾವಳಿಯಲ್ಲಿ ವಿಜೇತರಿಗೆ 5 ಲಕ್ಷ ರೂ, ಕಬ್ಬಡಿ ಮತ್ತು ಥ್ರೋಬಾಲ್‌ನಲ್ಲಿ ಗೆದ್ದ ತಂಡಗಳಿಗೆ ತಲಾ 2 ಲಕ್ಷ ರೂಗಳನ್ನು ನೀಡಲಾಗುತ್ತದೆ.
*ಹಿಂದಿನ ಗ್ರಾಮೋತ್ಸವಈಶ ಗ್ರಾಮೋತ್ಸವದ ಹಿಂದಿನ ಆವೃತ್ತಿಗಳಲ್ಲಿ 8,412 ತಂಡಗಳು ಸಾಕ್ಷಿಯಾಗಿದ್ದು ಇದರಲ್ಲಿ 1,00,167 ಆಟಗಾರರು ಭಾಗವಹಿಸಿದ್ದರು. ಕ್ರೀಡೆ ಮತ್ತು ಯುವ ವ್ಯವಹಾರಗಳ ಸಚಿವಾಲಯವು ಈಶ ಔಟ್‌ರೀಚ್ ಅನ್ನು ರಾಷ್ಟ್ರೀಯ ಕ್ರೀಡಾ ಪ್ರಚಾರ ಸಂಸ್ಥೆ ಎಂಬುದಾಗಿ ಗುರುತಿಸಿದೆ. 2018 ರಲ್ಲಿ ರಾಷ್ಟ್ರಪತಿಗಳಿಂದ ಕ್ರೀಡಾ ಅಭಿವೃದ್ಧಿಗಾಗಿ “ರಾಷ್ಟ್ರೀಯ ಖೇಲ್ ಪ್ರೋತ್ಸಾಹನ್ ಪುರಸ್ಕಾರ್” ಎಂಬ ಪ್ರಶಸ್ತಿಯನ್ನು ಪಡೆದಿದೆ.
ಸದ್ಗುರು,ಈಶ ಫೌಂಡೇಷನ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
