ಬೆಂಗಳೂರು:ಕೆ.ಎಸ್.ಈಶ್ವರಪ್ಪ ಬಂಧನ ಆಗೋವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ನೀಡುವುದಾಗಿ ತಿಳಿಸಿರುವ ಈಶ್ವರಪ್ಪ ಹೇಳಿಕೆಗೆ ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಪ್ರತಿಕ್ರಿಯೆ ನೀಡಿದರು.
24 ಗಂಟೆ ಆಹೋರಾತ್ರಿ ಧರಣಿ ನಡೆಸಲು ನಾವು ಈಗಾಗಲೇ ತೀರ್ಮಾನಿಸಿದ್ದೇವೆ. ಈಗ ಕೇವಲ ರಾಜೀನಾಮೆ ಘೋಷಣೆ ಮಾತ್ರ ಆಗಿದ್ದು, ಈಶ್ವರಪ್ಪ ಬಂಧನ ಆಗುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಈಶ್ವರಪ್ಪನವರು ಇಲ್ಲಿಯವರೆಗೂ ಸುಳ್ಳು ಹೇಳಿಕೊಂಡು ಬರುತ್ತಿದ್ದರು. ನಮ್ಮ ಹೋರಾಟ ಚುರುಕು ಆದ ಬಳಿಕ ನಾಳೆ ರಾಜೀನಾಮೆ ಕೊಡುವುದಾಗಿ ಅವರು ಘೋಷಣೆ ಮಾಡಿದ್ದಾರೆ. 40 ಪರ್ಸೆಂಟ್ ಕಮಿಷನ್ ಬೇಡಿಕೆಯನ್ನು ಈಶ್ವರಪ್ಪ ಕೇಳಿದ್ದಾರೆ ಎಂದು ಸಂತೋಷ ಪಾಟೀಲ್ ಆರೋಪ ಮಾಡಿದ್ದರು.
ನಮ್ಮ ಹೋರಾಟ ರಾಜೀನಾಮೆ ಕೇಳುವುದು ಒಂದೇ ಅಲ್ಲ. ಭ್ರಷ್ಟಾಚಾರ ಸೆಕ್ಷನ್ 13ರ ಅಡಿ ಈಶ್ವರಪ್ಪ ಮೇಲೆ ಎಫ್ ಐ ಆರ್ ಹಾಕ್ಬೇಕು. ಈಶ್ವರಪ್ಪ ಅವ್ರನ್ನು ಕೂಡಲೇ ಬಂಧಿಸಬೇಕು. ಕಾನೂನು ಎಲ್ಲರಿಗೂ ಒಂದೇ ಅಲ್ವಾ? ಎಂದರು.
ಕೊನೆಗೂ ರಾಜೀನಾಮೆ ಘೋಷಿಸಿದ ಈಶ್ವರಪ್ಪ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − twelve =
Remember me
