ಬೆಂಗಳೂರು: ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್ ಸುರಕ್ಷಿತವಾಗಿ ಇಳಿಸಿ ಐತಿಹಾಸಿಕ ಸಾಧನೆ ಮಾಡಿದ ಇಸ್ರೋ ವಿಜ್ಞಾನಿಗಳನ್ನು ವಿಧಾನಸೌಧಕ್ಕೆ ಕರೆಸಿ ಸನ್ಮಾನಿಸಲು ಸರ್ಕಾರ ಬಯಸಿದೆ.ವಿಜ್ಞಾನಿಗಳು ಹಗಲು ಇರುಳು ಎನ್ನದೆ ಇದಕ್ಕಾಗಿ ಶ್ರಮಿಸಿದ್ದಾರೆ. ದೇಶದ ಒಟ್ಟು ಒಂದು ಸಾವಿರ ವಿಜ್ಞಾನಿಗಳು ಇದರಲ್ಲಿ ತೊಡಗಿಸಿಕೊಂಡಿದ್ದಾರೆ, ಬೆಂಗಳೂರಿನಿಂದಲೇ 500 ಜನ ಪಾಲ್ಗೊಂಡಿದ್ದಾರೆ. ಇವರಿಗೆ ಸೆಪ್ಟೆಂಬರ್ 2ರ ನಂತರ ಸನ್ಮಾನ ಕಾರ್ಯಕ್ರಮ ನಡೆಸಲು ಉದ್ದೇಶಿಸಿದ್ದು, ದಿನಾಂಕ ಶೀಘ್ರ ನಿಗದಿಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ವಿಧಾನ ಸೌಧದ ಬ್ಯಾಂಕ್ವೆಟ್‌ಹಾಲ್ ನಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿ ಇಸ್ರೋ ವಿಜ್ಞಾನಿಗಳನ್ನು ಸರ್ಕಾರ ಗೌರವಿಸಲಿದೆ ಎಂದಿರುವ ಅವರು ಇಸ್ರೋ ಅಧ್ಯಕ್ಷ ಸೋಮನಾಥ್ ಸೇರಿದಂತೆ ಕರ್ನಾಟಕದ 500 ವಿಜ್ಞಾನಿಗಳು ಇದರಲ್ಲಿ ಪಾಲ್ಗೊಂಡಿದ್ದು, ಅವರೆಲ್ಲರಿಗೂ ಸನ್ಮಾನಿಸಲಾಗುವುದು ಎಂದರು. 3 ಲಕ್ಷ 84 ಕಿಮೀ ಪ್ರಯಾಣ ಮಾಡಿರುವ ವಿಕ್ರಂ ಸಾಧನೆ ಕಡಿಮೆಯಲ್ಲ. ಸರ್ಕಾರದ ಸಹಕಾರ ಬೆಂಬಲ ಇರಲಿದೆ. ಇದು ದೇಶದ ಹೆಮ್ಮೆ ಎಂದರು.ಇಸ್ರೋ ವಿಜ್ಞಾನಿಗಳಿಗೆ ಸರ್ಕಾರದಿಂದ ಸನ್ಮಾನ ಕಾರ್ಯಕ್ರಮ ಏರ್ಪಡಿಸಿ ಗೌರವಿಸಬೇಕೆಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯವರನ್ನು ಬುಧವಾರ ಆಗ್ರಹಿಸಿದ್ದರು. ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್‌ಬಾಬು ಸಹ ಸಿಎಂ ಮತ್ತು ಡಿಸಿಎಂಗೆ ಪತ್ರ ಬರೆದು ಒತ್ತಾಯಿಸಿದ್ದರು.ಗುರುವಾರ ಬೆಳಿಗ್ಗೆ ಇಸ್ರೋ ಸಂಸ್ಥೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಸಂಸ್ಥೆಯ ಅಧ್ಯಕ್ಷ ಎಸ್.ಸೋಮನಾಥ್ ಹಾಗೂ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದರು.ಇಸ್ರೋ ಸಾಧನೆಯಿಂದ ಇಡೀ ಜಗತ್ತು ಭಾರತದ ಕಡೆಗೆ ನೋಡುವಂಥ ಕೆಲಸವಾಗಿದೆ . ಜಗತ್ತಿನಲ್ಲಿಯೇ ರಷ್ಯಾ, ಅಮೆರಿಕ, ಚೈನಾ ದೇಶಗಳನ್ನು ಬಿಟ್ಟರೆ ಚಂದ್ರನ ದಕ್ಷಿಣ ಭಾಗದಲ್ಲಿ ಕಾಲಿರಿಸಿರುವ ನಾಲ್ಕನೇ ದೇಶ ಭಾರತ. ನಾವೆಲ್ಲರೂ ಇಸ್ರೋ ಸಾಧನೆಯನ್ನು ಮೆಚ್ಚಿ ಅಭಿನಂದಿಸಬೇಕು ಎಂದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fifteen + five =
Remember me
