ಬೆಂಗಳೂರುಬಾಹ್ಯಾಕಾಶ ತಂತ್ರಜ್ಞಾನದ ಪ್ರಯೋಜನವು ಜನಸಾಮಾನ್ಯರಿಗೆ ತಲುಪಿಸಬೇಕು ಎಂಬುದು ನಮ್ಮ ಉದ್ದೇಶ. ನಮ್ಮ ಚಂದ್ರಯಾನ-3ರ ಯಶಸ್ಸು ಬಾಹ್ಯಕಾಶ ಕ್ಷೇತ್ರದಲ್ಲಿ ಭಾರತದ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿದೆ ಎಂದು ಇಸ್ರೋದ ಮುಖ್ಯಸ್ಥ ಎಸ್. ಸೋಮನಾಥ್ ತಿಳಿಸಿದರು.
ಜ್ಞಾನಜ್ಯೋತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಬೆಂಗಳೂರು ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವದಲ್ಲಿ ವಿಡಿಯೋ ಸಂದೇಶ ನೀಡಿದ ಗೌರವ ಡಾಕ್ಟರೇಟ್ ಪುರಸ್ಕೃತ ಎಸ್. ಸೋಮನಾಥ್ ಮಾತನಾಡಿದರು.
ಈ ಗೌರವ ಡಾಕ್ಟರೇಟ್ ನನ್ನ ವೈಯಕ್ತಿಕ ಸಾಧನೆಗಿಂತಲೂ ಇಸ್ರೋದ ಸಾಧನೆಗೆ ಸಂದ ಗೌರವ ಎಂದು ಭಾವಿಸುತ್ತೇನೆ. ಬೆಂಗಳೂರು ವಿವಿ ಕಲೆ, ವಿಜ್ಞಾನ, ಇಂಜಿನಿಯರಿಂಗ್, ತಂತ್ರಜ್ಞಾನ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದೆ. ಬೆಂಗಳೂರು ವಿವಿಯನ್ನು ನಮ್ಮ ಹೊಸ ಶಿಕ್ಷಣ ನೀತಿ ಮತ್ತು ಉದಯೋನ್ಮುಖ ಭಾರತದ ಭವಿಷ್ಯವೆಂದು ಭಾವಿಸುತ್ತೇನೆ ಎಂದು ಹೇಳಿದರು.
28,871 ವಿದ್ಯಾರ್ಥಿಗಳಿಗೆ ಪದವಿ:
ಇದೇ ವೇಳೆ 13,707 ಪುರುಷ ಮತ್ತು 15,164 ಮಹಿಳಾ ಅಭ್ಯರ್ಥಿಗಳಿಗೆ 299 ಚಿನ್ನದ ಪದಕ, 204 ಪಿಎಚ್.ಡಿ., ಪದವಿ ಸೇರಿ 28,871 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಬೆಂ.ವಿವಿ ಕುಲಪತಿ ಡಾ. ಎಸ್.ಎಂ. ಜಯಕರ್, ಕುಲಸಚಿವ ಶೇಖ್ ಲತ್ೀ, ಮೌಲ್ಯಮಾಪನ ಕುಲಸಚಿವ ಪ್ರೊ. ಸಿ. ಶ್ರೀನಿವಾಸ್ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − fourteen =
Remember me
