ಬೆಂಗಳೂರು:ಗ್ಯಾರಂಟಿಯೂ ಸಮರ್ಪಕ ಜಾರಿ ಆಗಿಲ್ಲ. ಸರ್ಕಾರದ ಗ್ಯಾರಂಟಿಗಳಿಂದ ಎಷ್ಟು ಜನರಿಗೆ ಫಲ ಸಿಕ್ಕಿದೆ? ಆರ್ಥಿಕವಾಗಿ ಹೊರೆ ಎಷ್ಟು ಬಿದ್ದಿದೆ? ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಗ್ಯಾರಂಟಿಗಳು ಹಳ್ಳ ಹಿಡಿದು ವಿಫಲವಾಗಿವೆ. ಅನುಮಾನವೇ ಇಲ್ಲ. ಚರ್ಚೇಗೆ ನಾನು ತಯಾರಿದ್ದೇನೆ. ಅಧಿವೇಶನದಲ್ಲೂ ದಾಖಲೆ ಸಮೇತ ಚರ್ಚೆಗೆ ಸಿದ್ಧನಿದ್ದೇನೆ ಎಂದು ಸವಾಲು ಹಾಕಿದ್ದಾರೆ.
ಚನ್ನಪಟ್ಟಣದ ನನ್ನ ಜನರೂ ಮಾಹಿತಿ ನೀಡಿದ್ದಾರೆ, ರಾಜ್ಯದ ಉಳಿದ 223 ಕ್ಷೇತ್ರಗಳ ಜನರು ಕೊಟ್ಟ ವಿವರವೂ ನನ್ನಲ್ಲಿದೆ. ನೀವು ಒಳಗೊಳಗೆ ಮಾಡುತ್ತಿರುವ ಗಿಲೀಟುಗಳ ಮಾಹಿತಿಯೂ ಇದೆ. ಚರ್ಚೆ ಮಾಡೋಣ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ರನ್ನು ಆಹ್ವಾನಿಸಿದ್ದಾರೆ.ಗ್ಯಾರಂಟಿಗಳಿಗೂ ಕುಮಾರಸ್ವಾಮಿಗೂ ಏನು ಸಂಬಂಧ ಎಂದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ತೀಕ್ಷ್ಣ ತಿರುಗೇಟು ಕೊಟ್ಟಿರುವ ಕುಮಾರಸ್ವಾಮಿ, ಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನರು ಆಡಳಿತ ಪಕ್ಷದಲ್ಲಿ ಕೂರಿಸಿದ್ದಾರೆ ಎಂದಷ್ಟಕ್ಕೇ ಇವರ ತಲೆ ನಿಲ್ಲುತ್ತಿಲ್ಲ. ಚಕ್ರ ತಿರುಗಲು ಶುರು ಮಾಡಿದೆ. ಅದು ಕೆಳಕ್ಕೆ ಬಂದೇ ಬರುತ್ತದೆ. ಸ್ವಲ್ಪ ಸಮಯ ಬೇಕಷ್ಟೇ, ಆಗ ತಿರುಗುವ ತಲೆ ತಾನಾಗಿಯೇ ನಿಲ್ಲುತ್ತದೆ ಎಂದು ಮಾರ್ಮಿಕವಾಗಿ ಚುಚ್ಚಿದ್ದಾರೆ.
ಡೂಪ್ಲಿಕೇಟ್ ಸಿಎಂ ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ! ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ. ಎಚ್.ಡಿ.ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೂ ಏನು ಸಂಬಂಧ? ಎಂಬ ಆಣಿಮುತ್ತು ಉದುರಿಸಿದ್ದಾರೆ. ಅಧಿಕಾರದ ಪಿತ್ತ ನೆತ್ತಿಗೇರಿ ಮಿದುಳು ಕೆಲಸ ಮಾಡದಿದ್ದರೆ ನಾಲಿಗೆ ಹೀಗೆ ಮಾತನಾಡುತ್ತದೆ. ಅಚ್ಚರಿಯೇನೂ ಇಲ್ಲ ಎಂದು ಹೇಳಿದ್ದಾರೆ.
ಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್ ಅಲ್ಲ. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ಪ್ರತಿಪಕ್ಷ ಇರುತ್ತವೆ. ಇದು ಗೊತ್ತಿಲ್ಲದಷ್ಟು ಅಜ್ಞಾನವೇ? ಪ್ರಶ್ನೆ ಮಾಡಬೇಕು ಎಂತಲೇ ಜನ ನನ್ನನ್ನು ವಿರೋಧಪಕ್ಷದಲ್ಲಿ ಕೂರಿಸಿದ್ದಾರೆ ಎಂದು ಕುಟುಕಿದ್ದಾರೆ.
ಪಂಚರತ್ನಗಳು ರಾಜ್ಯದ ಸಮಗ್ರ ಅಭಿವೃದ್ಧಿಗೆ ನಾನು ರೂಪಿಸಿದ್ದ ಪಂಚಸೂತ್ರಗಳು. ಕಾಂಗ್ರೆಸ್ ಗ್ಯಾರಂಟಿಗಳು ಜನರನ್ನು ಶಾಶ್ವತ ಆರ್ಥಿಕವೈಕಲ್ಯರನ್ನಾಗಿಸುವ ತಾತ್ಕಾಲಿಕ ತಂತ್ರಗಳಷ್ಟೇ ಎಂದು ಟಾಂಗ್ ಕೊಟ್ಟಿದ್ದಾರೆ.
ಕೋಟಿ ರೂಪಾಯಿ ಕೊಟ್ಟು ಗ್ಯಾರಂಟಿ ಸ್ಕೀಮುಗಳ ಬಗ್ಗೆ ಸಮೀಕ್ಷೆ ಮಾಡಿಸಿಕೊಂಡರಲ್ಲ, ಕೂಸು ಹುಟ್ಟುವ ಮುನ್ನವೇ ಕುಲಾವಿಯೇ? ಗ್ಯಾರಂಟಿ ಜಾರಿಗೆ ಮೊದಲೇ ಸಮೀಕ್ಷೆ ಪ್ಲ್ಯಾನ್ ಮಾಡಿಕೊಂಡಿದ್ದರಲ್ಲ, ಯಾಕೆ? ನಿಮ್ಮ ಯೋಗ್ಯತೆಗೆ ಇನ್ನು ಯುವನಿಧಿ ಬಂದೇ ಇಲ್ಲ. ಅದು ಬರುತ್ತೋ ಇಲ್ಲವೋ ಗೊತ್ತಿಲ್ಲ. ಅದನ್ನು ಚನ್ನಪಟ್ಟಣದ ಜನರನ್ನೇ ಕೇಳಬೇಕೆ? ಇವರ ರಾಜಕೀಯ ಸ್ವಾರ್ಥಕ್ಕೆ ರಾಮನಗರ, ಚನ್ನಪಟ್ಟಣ, ಮಾಗಡಿ ಕ್ಷೇತ್ರಗಳನ್ನು ಬಲಿಗೊಟ್ಟು, ರಾಮನಗರ ಹೆಸರಿಗೇ ಕೋಕ್ ಕೊಡಲು ಹೊರಟಿದ್ದಾರೆ. ಆಯ್ಯೋ ದೇವೆರೇ, ಈ ಸರ್ಕಾರದಲ್ಲಿ ರಾಮನ ಹೆಸರಿಗೂ ಗ್ಯಾರಂಟಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 3 =
Remember me
