ಬೆಂಗಳೂರುದೇವರು ಪ್ರತಿಯೊಬ್ಬರಿಗೂ ಪ್ರತಿಭೆ ನೀಡಿದ್ದು, ಬೇರೆಯವರನ್ನು ಅನುಕರಿಸುವ ಬದಲಾಗಿ ತಮ್ಮದೇ ರೀತಿಯಲ್ಲಿ ಆಲೋಚನೆ ಮಾಡುವ ಮೂಲಕ ಹೊಸತನ ರೂಢಿಸಿಕೊಳ್ಳುವಂತೆ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ(ಯುಜಿಸಿ) ಅಧ್ಯಕ್ಷ ಪ್ರೊ.ಮಾಮಿದಾಳ ಜಗದೀಶ್ ಕುಮಾರ್ ಹೇಳಿದರು.
ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ನೃಪತುಂಗ ವಿಶ್ವವಿದ್ಯಾಲಯದ ಪ್ರಥಮ ವರ್ಷದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, 2050ರ ವೇಳೆಗೆ ಜಾಗತಿಕವಾಗಿ 9.7 ಬಿಲಿಯನ್ ಜನಸಂಖ್ಯೆಯಾಗಲಿದ್ದು, ಲಭ್ಯವಿರುವ ಸಂಪನ್ಮೂಲದಲ್ಲಿಯೇ ಭವಿಷ್ಯದ ಸವಾಲುಗಳನ್ನು ಎದುರಿಸಬೇಕಿದೆ. ಈ ಸವಾಲುಗಳಿಗೆ ಪರಿಹಾರ ಕಲ್ಪಿಸುವತ್ತ ಯುನ ಜನರು ಚಿಂತನೆ ನಡೆಸಬೇಕಿದೆ ಎಂದರು.
ವಿಜ್ಞಾನಿ ಜಗದೀಶ್ ಚಂದ್ರ ಬೋಸ್ ಅವರು ಮೊದಲಿಗೆ ರೇಡಿಯೋ ಕುರಿತು ಸಂಶೋಧನೆ ನಡೆಸಿದರು. ವೃತ್ತಿಯಿಂದ ನಿವೃತ್ತಿ ಹೊಂದಿದ ಬಳಿಕ ‘ಸಸ್ಯಕ್ಕೂ ಜೀವವಿದೆ’ ಎಂಬುದನ್ನು ಕಂಡುಹಿಡಿದರು. ಈ ರೀತಿ ಕಲಿಕೆ ಎಂಬುದು ನಿರಂತರ. ಆದ್ದರಿಂದ ಕಲಿಕೆಯನ್ನು ಮರೆಯಬೇಡಿ ಎಂದು ಎಂದು ಹೇಳಿದರು.
ಮೂವರಿಗೆ ಗೌರವ ಡಾಕ್ಟರೇಟ್:
ಸಮಾರಂಭದಲ್ಲಿ ಇಸ್ರೋ ವಿಜ್ಞಾನಿ ನಂದಿನಿ ಹರಿನಾಥ, ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್‌ನ ಡಾ.ರಾಮಸ್ವಾಮಿ ಬಾಲಸುಬ್ರಮಣಿಯನ್, ಇನ್ಫೋಸಿಸ್ ಸಹ ಸಂಸ್ಥಾಪಕ ಕೆ. ದಿನೇನ್ ಅವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
792 ವಿದ್ಯಾರ್ಥಿಗಳಿಗೆ ಪದವಿ:
16 ಚಿನ್ನದ ಪದಕ ಸೇರಿ ಒಟ್ಟು ಪದವಿ ಮತ್ತು ಸ್ನಾತಕೋತ್ತರ ಪದವಿಯ 792 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ವಿವಿ ಕುಲಪತಿ ಪ್ರೊ. ಶ್ರೀನಿವಾಸ ಬಳ್ಳಿ, ವಿವಿಯ ಕುಲಸಚಿವ ಶಿವಾನಂದ ಬ.ಕರಾಳೆ ಮತ್ತು ಮೌಲ್ಯಮಾಪನ ಕುಲಸಚಿವೆ ಪ್ರೊ. ಎ.ಸಿ. ಮಂಜುಳಾ ಭಾಗವಹಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
