ಬೆಂಗಳೂರುವೈದ್ಯಕೀಯ ಪ್ರವೇಶಕ್ಕಾಗಿ ಈ ಬಾರಿ ನಡೆಸಿದ ನೀಟ್ ಪರೀಕ್ಷೆ ಪ್ರಕ್ರಿಯೆ ಮತ್ತು ಫಲಿತಾಂಶವನ್ನು ಸಿಬಿಐ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಎಬಿವಿಪಿ ಸಂಘಟನೆಯು ಆಗ್ರಹಿಸಿದೆ.
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಒತ್ತಾಯಿಸಿತು. ಯಾವ ಉದ್ದೇಶದಿಂದ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು (ಎನ್‌ಟಿಎ) ಲೋಕಸಭಾ ಚುನಾವಣೆಯ ದಿನವೇ ನೀಟ್ ಲಿತಾಂಶವನ್ನು ಪ್ರಕಟಿಸಿತು ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.ಆದ್ದರಿಂದ ನೀಟ್ ಪರೀಕ್ಷೆಯ ಸಂಪೂರ್ಣ ಪ್ರಕ್ರಿಯೆಯನ್ನು ಸಿಬಿಐನಿಂದ ತನಿಖೆ ನಡೆಸಬೇಕು. ದೇಶದ ಹಲವು ಪ್ರದೇಶಗಳಿಂದ ಪರೀಕ್ಷಾ ಅಕ್ರಮವು ವರದಿಯಾಗಿದೆ. ಈ ನಿಟ್ಟಿನಲ್ಲಿ ಅನ್ಯಾಯದ ವಿರುದ್ಧ ಎಬಿವಿಪಿ ಹೋರಾಟ ನಡೆಸಲಿದೆ ಎಂದು ಒಕ್ಕೋರಲವಾಗಿ ಆಗ್ರಹಿಸಿದರು.
ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳದಿರುವುದರಿಂದ ವಿದ್ಯಾರ್ಥಿಗಳು ಯಾವ ರೀತಿಯಲ್ಲಿ ಎನ್‌ಟಿಎ ಅನ್ನು ನಂಬುವುದು ಎಂಬ ಅನುಮಾನ ವ್ಯಕ್ತವಾಗಿದೆ. ಈ ಅಕ್ರಮವನ್ನು ಬಯಲಿಗೆಳೆದು ಅರ್ಹರಿಗೆ ನ್ಯಾಯ ಒದಗಿಸಲು ಸಿಬಿಐನಿಂದ ಮಾತ್ರ ಸಾಧ್ಯವಾಗಿದೆ. ಹೀಗಾಗಿ ಸಿಬಿಐ ತನಿಖೆ ಅನಿವಾರ್ಯ ಎಂದು ಒತ್ತಾಯಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 11 =
Remember me
