ಕಲಾಕ್ಷೇತ್ರದಲ್ಲಿ ಗುರುವಿನ ಮಹತ್ವ ಬಹಳವಿದೆ. ಪುರಂದರದಾಸರು ಗುರುವಿನ ಗುಲಾಮನಾಗುವತನಕ ದೊರೆಯದಣ್ಣ ಮುಕುತಿ ಎಂದಿದ್ದಾರೆ. ತಂದೆಯೇ ಗುರುವಾಗಿ ಲಭಿಸಿದ್ದು ನನ್ನ ಸುಕೃತ ಫಲ. ಕೀರ್ತನಾಚಾರ್ಯ ಲಕ್ಷ್ಮಣದಾಸ ವೇಲಣಕರ್ ಖ್ಯಾತ ಹರಿದಾಸರು, ಅನುವಾದಕರು ಮತ್ತು ಪ್ರವಚನಕಾರರು. ಸಂತ ಭದ್ರಗಿರಿ ಅಚ್ಯುತದಾಸರು ಮತ್ತು ಸಂತ ಭದ್ರಗಿರಿ ಕೇಶವದಾಸರ ಶಿಷ್ಯರಾಗಿದ್ದರು. ನೂರಾರು ಗ್ರಂಥಗಳನ್ನು ಬರೆದು ಅನುವಾದಿಸಿ ಸಾಹಿತ್ಯ ಲೋಕಕ್ಕೆ ಕೊಡುಗೆ ಕೊಟ್ಟಿದ್ದಾರೆ. ಅಂತಹ ಪುಣ್ಯಪುರುಷರ ಮಗನಾಗಿ ಜನಿಸಿದ್ದು ನನ್ನ ಭಾಗ್ಯ. ಹರಿಕಥೆ ಕಲೆಯನ್ನು ನನಗೆ ಕಲಿಸಿದರು. ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಲಿಯಲು ಪ್ರೋತ್ಸಾಹಿಸಿದರು. ತಂದೆ- ಮಗನ ಸಂಬಂಧವು ವರ್ಣನಾತೀತವಾಗಿದ್ದು, ಜೀವನದ ಪ್ರತಿಯೊಂದು ಘಟ್ಟದಲ್ಲೂ ಬೆನ್ನಿಗೆ ಆಸರೆಯಾಗಿ ನಮ್ಮ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ.
| ಡಾ. ದತ್ತಾತ್ರೇಯ ಎಲ್. ವೇಲಣಕರ್
ಇಂದು ಅಪ್ಪನ ದಿನ: ಅಪ್ಪ ಇದ್ದಾರೆಂಬ ಭರವಸೆಯೇ ನನಗೆ ಶಕ್ತಿ, ಸ್ಫೂರ್ತಿ

ನನ್ನ ಪ್ರೀತಿಯ ಅಪ್ಪ ಹೆಣ್ಣುಮಗುವಿಗಾಗಿ ಹರಕೆ ಕಟ್ಟಿದ್ದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 10 =
Remember me
