ಬೆಂಗಳೂರುರಾಜ್ಯದ ಆರ್ಥಿಕ ನೀತಿ ಮತ್ತು ಗ್ಯಾರಂಟಿ ಯೋಜನೆಯನ್ನು ಟೀಕಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ನೇರ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರಧಾನ ಮಂತ್ರಿಗಳಿಗೆ ಆರ್ಥಿಕತೆ ಬಗ್ಗೆ ಚಿಂತೆ ಬಂದಿದೆ. ಆದರೆ, ಅವರು ಅಧಿಕಾರಕ್ಕೆ ಬಂದು 9 ವರ್ಷ ತುಂಬಿದೆ. ಬರೋಬ್ಬರಿ ಒಂದು ದಶಕವಾಗುತ್ತಿದೆ. ಈ 10 ವರ್ಷಗಳಲ್ಲಿ ಎಷ್ಟು ಸಾಲ ಮಾಡಿದ್ದಾರೆ, ಎಷ್ಟು ಉದ್ಯೋಗ ಸೃಷ್ಟಿಸಿದ್ದಾರೆ. ಬಡತನ ರೇಖೆಯಿಂದ ಎಷ್ಟು ವಾಪಸ್ ಬಂದಿದ್ದಾರೆ ಎಂಬುದರ ಬಗ್ಗೆ ಚರ್ಚೆಗೆ ಬರುತ್ತಾರಾ? ಎಂದು ಸವಾಲು ಹಾಕಿದ್ದಾರೆ.
ನಗರದ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೋದಿ ಅವರು ಕೇವಲ ಮನ್ ಕಿ ಬಾತ್‌ನಲ್ಲಿ ಮಾತನಾಡಿದರೆ ಸಾಲದು. ದೇಶದ ಆರ್ಥಿಕ ಪರಿಸ್ಥಿತಿ ಕುರಿತ ಕೇವಲ ಒಂದು ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಲಿ. ಈ ಬಗ್ಗೆ ಕುರಿತು ಶ್ವೇತ ಪತ್ರ ಹೊರಡಿಸಲಿ ಎಂದು ನಾನು ಬಿಜೆಪಿ ಅವರಿಗೆ ಸವಾಲು ಹಾಕುತ್ತಿದ್ದೇನೆ ಎಂದರು.
ಆರ್ಥಿಕ ನೀತಿಯಲ್ಲಿ ಅವರಿಂದ ಪಾಠ ಕಲಿಯುವ ಅಗತ್ಯವಿಲ್ಲ. ರಾಜ್ಯವು ಆರ್ಥಿಕವಾಗಿ ಸುಭದ್ರವಾಗಿದೆ. ಈ ಕಾರಣದಿಂದಲೇ ಉತ್ತರ ಪ್ರದೇಶ, ಬಿಹಾರ ಮತ್ತು ಮಧ್ಯಪ್ರದೇಶಗಳಿಂದ ಉದ್ಯೋಗ ಅರಸಿ ಕರ್ನಾಟಕಕ್ಕೆ ಬರುತ್ತಿದ್ದಾರೆಯೇ ಹೊರತು, ಇಲ್ಲಿಂದ ಉತ್ತರ ಭಾರತಕ್ಕೆ ಹೋಗುತ್ತಿಲ್ಲ. ಇದು ನಮ್ಮ ಆರ್ಥಿಕ ಪರಿಸ್ಥಿತಿಯನ್ನು ತೋರಿಸಲಿದೆ ಎಂದು ಸಮರ್ಥಿಸಿಕೊಂಡರು.
ಬಿಜೆಪಿ ಅವರಿಗೆ ಸ್ಪಷ್ಟವಾದ ನಿಲುವಿಲ್ಲ. ಒಂದೆಡೆ ಪುಕ್ಕಟೆ ಸಂಸ್ಕಾರವೆನ್ನುತ್ತಿರಿ, ಮತ್ತೊಂದೆಡೆ ಅಡುಗೆ ಅನಿಲ 200 ರೂ.ಗಳನ್ನು ಇಳಿಕೆ ಮಾಡುತ್ತೀರಿ. ಗ್ಯಾರಂಟಿಗಳಿಂದ ಆರ್ಥಿಕ ದಿವಾಳಿತನವಾಗಲಿದೆ ಎನ್ನುತ್ತೀರಿ ಇನ್ನೊಂದೆಡೆ ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯನ್ನು ನಕಲು ಮಾಡಿ ಮಧ್ಯಪ್ರದೇಶದಲ್ಲಿ ೋಷಣೆ ಮಾಡುವುದರ ಅರ್ಥವೇನು ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ 14 ಬಜೆಟ್ ಮಂಡಿಸಿರುವ ಹಾಗೂ ಆರ್ಥಿಕ ಪರಿಸ್ಥಿತಿಯನ್ನು ಚೆನ್ನಾಗಿ ಅರಿತಿರುವ ಅನುಭವಿ ಸಿದ್ದರಾಮಯ್ಯ ಅವರಿದ್ದಾರೆ. ಈ ಬಗ್ಗೆ ಸದನಕ್ಕೆ ಶ್ವೇತ ಪತ್ರವನ್ನು ಕೂಡ ನೀಡಿದ್ದಾರೆ. ದೇಶದ ಆರ್ಥಿಕತೆ ಬಗ್ಗೆ ಶ್ವೇತ ಪತ್ರ ಹೊರಡಿಸುವುದಾದರೆ ಚರ್ಚೆಗೆ ನಾವು ಸಿದ್ಧರಿದ್ದೇವೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − 1 =
Remember me
