ಬೆಂಗಳೂರು:ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಎಷ್ಟು ಹದಗೆಟ್ಟು ಹೋಗಿದೆ ಎಂದರೆ, ಹೋಮ್ ಮಿನಿಸ್ಟರ್ ಯಾರು ಅನ್ನೋದೇ ಗೊತ್ತಾಗುತ್ತಿಲ್ಲ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.
ಜೆ.ಪಿ.ಭವನದಲ್ಲಿ ಮೈತ್ರಿ ಪಕ್ಷಗಳ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ಹೆಣ್ಣು ಮಕ್ಕಳು ಶಾಲೆಗೆ ಹೋದರೆ, ಮಹಿಳೆಯರು ಕೆಲಸಕ್ಕೆ ಹೋದರೆ ಮನೆಗೆ ವಾಪಸ್ ಬರುವ ಗ್ಯಾರಂಟಿಯೇ ಇಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸರಿಯಿಲ್ಲ. ಹೋ ಮಿನಿಸ್ಟರ್ ಬಿಟ್ಟು ಎಲ್ಲರು ಹ್ಯಾಂಡಲ್ ಮಾಡುತ್ತಿದ್ದಾರೆ. ಪೊಲೀಸ್ ಸ್ಟೇಷನ್‌ಗೆ ನುಗ್ಗಿ ಹೊಡೆಯುತ್ತಿದ್ದಾರೆ. ಉಡುಪಿಯಲ್ಲಿ ಮಚ್ಚು ಲಾಂಗ್ ವಾರ್ ಮಾಡುತ್ತಿದ್ದಾರೆ. ಇದನ್ನು ಕೇಳುವವರೇ ಇಲ್ಲ ಎಂದು ಹರಿಹಾಯ್ದರು.
ಶಿವರಾಮೇಗೌಡ ನಮ್ಮ ಪಾರ್ಟಿಯಲ್ಲಿ ಇಲ್ಲ. ಯಾವ ಪಾರ್ಟಿಗೆ ರಾಜೀನಾಮೆ ಕೊಟ್ಟಿದ್ದಾರೊ ಗೊತ್ತಿಲ್ಲ. ಮೋದಿಯವರಿಗೆ ಹೇಳಿ ಬಿಜೆಪಿ-ಜೆಡಿಎಸ್ ಭಾಗ ಮಾಡುತ್ತೇನೆ ಎಂದು ಹೇಳುತ್ತಾರೆ. ಇವರೆಂಥಾ ಚಂಡಾಳರು ಎನ್ನುವುದು ಇದರಿಂದ ಗೊತ್ತಾಗುತ್ತದೆ. ನಾವು ಜೆಡಿಎಸ್ ಒಟ್ಟಾಗಿ ಮುಂದಿನ ವಿಧಾನಸಭಾ ಎಲೆಕ್ಷನ್‌ಗೆ ಹೋದರೆ ಕಾಂಗ್ರೆಸ್‌ಗೆ ಚೊಂಬೆ ಸಿಗೋದು ಎಂದು ವ್ಯಂಗ್ಯವಾಡಿದರು.ಕುಮಾರಸ್ವಾಮಿ ಅವರು ಒಂದು ವರ್ಷ ಈ ಪಾಪಿಗಳ ಜತೆ ಕ್ಲರ್ಕ್ ಆಗಿದ್ದೆ ಎಂದು ಹೇಳುತ್ತಲೇ ಇರುತ್ತಾರೆ. ನಿಜವಾಗಿ ಸಿಎಂ ಆಗಿ ಕೆಲಸ ಮಾಡಿದ್ದು ಬಿಜೆಪಿ ಸರ್ಕಾರದಲ್ಲಿ ಎಂದು ಹಲವು ಬಾರಿ ಹೇಳಿದ್ದಾರೆ. ಕೆಲಸ ಆಗಬೇಕಾದರೆ ಜೋಡೆತ್ತು, ಕೆಲಸ ಆದ ಮೇಲೆ ಚೂರಿ ಹಾಕು ಅನ್ನೋದು ಕಾಂಗ್ರೆಸ್ ಕೆಲಸ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ವಿರುದ್ಧ ಹೋರಾಟ ನಮ್ಮ ರಕ್ತದಲ್ಲೇ ಬಂದಿದೆ. ವರ್ಷದ ಮೊದಲೇ ಹೊಂದಾಣಿಕೆ ಆಗಿದ್ದರೆ ಈ ದರಿದ್ರ ಸರ್ಕಾರ ಬರುತ್ತಿರಲಿಲ್ಲ ಎಂದು ಹೇಳಿದರು.ಮೇಲ್ಮನೆ ಚುನಾವಣೆಯಲ್ಲಿ ಅ.ದೇವೇಗೌಡರನ್ನು ಗೆಲ್ಲಿಸಬೇಕು. ಕಾಂಗ್ರೆಸ್ ಅಭ್ಯರ್ಥಿ ಮಹಾರಾಷ್ಟ್ರದಿಂದ ಬಂದವರು ಎಂದು ಮುನಿರತ್ನ ಮಾಹಿತಿ ನೀಡಿದ್ದಾರೆ. ನೀವೆಲ್ಲ ಕೆಲಸ ಮಾಡಿ ಅ.ದೇವೇಗೌಡರನ್ನು ಗೆಲ್ಲಿಸಿದ್ರೆ ಎಲ್ಲವು ಸಾರ್ಥಕವಾಗುತ್ತದೆ ಎಂದು ಅಶೋಕ್ ಮನವಿ ಮಾಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + eight =
Remember me
