ಬೆಂಗಳೂರು:ಕಳೆದ ಎರಡು ಮೂರು ವರ್ಷಗಳಿಂದ ಕುಮಾರಸ್ವಾಮಿ ಅವರ ಟೀಕೆಗಳನ್ನು ಸಹಿಸಿಕೊಂಡಿದ್ದೆ. ಮಗನ ಸೋಲಿನ ನಂತರ ಅವರ ಮಾತು ಮಿತಿ ಮೀರಿದೆ. ನಾನು ಎಷ್ಟು ದಿನ ಸಹಿಸಲಿ. ಅವರ ಹೇಳಿಕೆಗಳಿಗೆ ನಾನು ಉತ್ತರ ನೀಡಿದ್ದೇನೆ. ನನ್ನ ವಿರುದ್ಧ ಇರುವ ದಾಖಲೆಗಳನ್ನು ಬಿಡುಗಡೆ ಮಾಡಲಿ. ಅವರ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:ಕೇಂದ್ರ ಸಂಪುಟ ಕಾರ್ಯದರ್ಶಿ ಐಎಎಸ್​ ಅಧಿಕಾರಿ ಟಿವಿ ಸೋಮನಾಥನ್ ನೇಮಕ
ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಹಾಗೂ ನಿಮ್ಮ ನಡುವೆ ವೈಯಕ್ತಿಕ ನಿಂದನೆಗಳು ಹೆಚ್ಚುತ್ತಿವೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸದ ಅವರು, ಇದನ್ನು ಆರಂಭಿಸಿದ್ದು ಯಾರು? ಕುಮಾರಸ್ವಾಮಿ ಅವರು ಮೊದಲು ನನ್ನ ಬಗ್ಗೆ ಏನೆಲ್ಲಾ ಹೇಳಿದರು? ಸಂಸತ್ ಚುನಾವಣೆ ಸೋತ ಬಳಿಕ ಕುಮಾರಸ್ವಾಮಿ ಏನ್ನೆಲ್ಲಾ ಮಾತನಾಡಿದ್ದಾರೆ ಎಂದು ಮಾಧ್ಯಮಗಳೇ ತೋರಿಸಲಿ. ಅವರು ಹೇಳಿರುವುದಕ್ಕೆ ನಾನು ಪ್ರತಿಕ್ರಿಯೆ ನೀಡಿದ್ದೇನೆ. ಅವರು ಮುಖ್ಯಮಂತ್ರಿಯಾಗಿದ್ದಾಗ ನಾನು ಅವರ ಜತೆ ಕೆಲಸ ಮಾಡಿದ್ದೇನೆ ಎಂಬ ಕಾರಣಕ್ಕೆ ಕಳೆದ ಎರಡು ಮೂರು ವರ್ಷಗಳಿಂದ ನಾನು ಬಹಳ ತಾಳ್ಮೆಯಿಂದ ಇದ್ದೆ. ಅವರನ್ನು ಅಣ್ಣ ಎಂದು ಸ್ವೀಕಾರ ಮಾಡಿದ್ದೆ. ಅವರು ಈ ರೀತಿ ಮಾತನಾಡಿದರೆ ನಾನು ಹೆದರಿ ಕೂರಲು ಸಾಧ್ಯವೇ? ಅಧಿಕಾರ ಬರುತ್ತದೆ, ಅಧಿಕಾರ ಹೋಗುತ್ತದೆ. ನನ್ನದು ಹೆದರಿ ಕೂರುವ ರಕ್ತವಲ್ಲ” ಎಂದರು.
ಗನ್ ಪಾಯಿಂಟ್ ನಲ್ಲಿಟ್ಟು ಆಸ್ತಿ ಬರೆಸಿಕೊಂಡಿದ್ದೇನೆ:“ಕುಮಾರಸ್ವಾಮಿ ಅವರು ನನಗೆ ಎಚ್ಚರಿಕೆ ಕೊಟ್ಟಿದ್ದಾರಲ್ಲ. ಇಂತಹ ಬೆದರಿಕೆಗೆ ಈ ಡಿ.ಕೆ.ಶಿವಕುಮಾರ್ ಹೆದರುವುದಿಲ್ಲ. ನನ್ನ ವಿರುದ್ಧ ಇರುವ ದಾಖಲೆ ಗೌಪ್ಯವಾಗಿ ಇರಬಾರದು. ಅದನ್ನು ಬಿಚ್ಚಿಡಲಿ. ಅವರ ಬುಟ್ಟಿಯಲ್ಲಿ ಹಾವಿದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ನಾನು ವಿಧವೆಯರಿಗೆ ಗನ್ ಪಾಯಿಂಟ್ ನಲ್ಲಿಟ್ಟು ಈ ಆಸ್ತಿ ಬರೆಸಿಕೊಂಡಿದ್ದೇನೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಹಾಗಿದ್ದರೆ ಅವರನ್ನು ಕರೆದುಕೊಂಡು ಬಂದು ನನ್ನ ವಿರುದ್ಧ ದೂರು ನೀಡಿ ಎಫ್ಐಆರ್ ದಾಖಲಿಸಲಿ” ಎಂದು ಸವಾಲು ಹಾಕಿದರು.
ದಲಿತರ ಭೂಮಿ ಲೂಟಿ ಮಾಡಿದ್ದಾರೆ: “ನಾನು ಕೇವಲ ವ್ಯವಸಾಯದಲ್ಲಿ ಆಸ್ತಿ ಮಾಡಿದ್ದೇನೆ ಎಂದು ಹೇಳುವುದಿಲ್ಲ. ನಾನು ಎಷ್ಟು ರಾಜಕಾರಣಿಯೋ, ಅಷ್ಟೇ ಉದ್ಯಮಿಯೂ ಹೌದು. ನಾನು ಯಾರಿಗೆ ಗನ್ ಪಾಯಿಂಟ್ ಇಟ್ಟು ಆಸ್ತಿ ಬರೆಸಿಕೊಂಡಿದ್ದೇನೆ ಹೇಳಲಿ. ಕುಮಾರಸ್ವಾಮಿ ಕೇತಗಾನಹಳ್ಳಿಯಲ್ಲಿ ದಲಿತರ ಭೂಮಿ ಲೂಟಿ ಮಾಡಿದ್ದಾರೆ ಎಂದು ಯೋಗೇಶ್ವರ್ ಮಾತನಾಡಿದ್ದಾರೆ. ಅಲ್ಲಂ ವೀರಭದ್ರಪ್ಪ ಖರೀದಿ ಮಾಡಿದ್ದ ಆಸ್ತಿಯನ್ನು ನನ್ನ ಮಗಳು ಖರೀದಿ ಮಾಡಿದ್ದಾಳೆ. ನನ್ನ ಸಾಮರ್ಥ್ಯಕ್ಕೆ ಅನುಸಾರವಾಗಿ ನಾನು ಆಸ್ತಿ ಖರೀದಿ ಮಾಡುತ್ತೇನೆ. ಇನ್ನು ಮಾರಟಾವಾಗಲು ಸಿದ್ಧವಿರುವ ಜಾಗಗಳಿದ್ದರೆ ಹೇಳಿ ಖರೀದಿ ಮಾಡುತ್ತೇನೆ” ಎಂದರು.
ಕುಮಾರಸ್ವಾಮಿ ಒಬ್ಬರೇ ಗಂಡಸು:ಗಂಡಸ್ಥನ ಹಾಗೂ ನಪುಂಸಕ ರಾಜಕಾರಣದ ಬಗ್ಗೆ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ನಾನು ಗಮನಿಸಿಲ್ಲ. ಅವರೋಬ್ಬರೇ ಗಂಡಸು. ಅವರು ಈ ಹಿಂದೆ ಏನು ಮಾತನಾಡಿದ್ದಾರೆ ಒಮ್ಮೆ ನೋಡಿ. ನನ್ನನ್ನು ಮಿಲಿಟರಿ ಬಂದು ಕರೆದುಕೊಂಡು ಹೋಗುತ್ತೆ ಎಂದು ಹೇಳಿದ್ದಾರೆ. ಅಂದರೆ ನಾನು ಮತ್ತೆ ಜೈಲಿಗೆ ಹೋಗುತ್ತೇನೆ ಎಂದು ಹೇಳಿದ್ದಾರೆ. ನಾನು ಜೈಲು ನೋಡಿರುವವನು. ನಾನು ಜೈಲಲ್ಲಿ ಇದ್ದಾಗ ಅವರು ಬಂದು ನನ್ನ ನೋಡಿದ್ದರು. ಜೈಲಿನ ಒಳಗೆ ನಾನು ಎಷ್ಟು ಶಕ್ತಿಯಲ್ಲಿದ್ದೆ ಎಂದು ನೋಡಿದ್ದಾರೆ” ಎಂದರು ತಿರುಗೇಟು ನೀಡಿದರು.
“ನಾನು ಅವರ ಕುಟುಂಬದಲ್ಲಿ ಅವರ ಸಹೋದರನ ಆಸ್ತಿ ವಿವರ ಕೇಳಿದ್ದೇನೆ ನಿಜ. ಇವರು ಮುಖ್ಯಮಂತ್ರಿಯಾಗಿದ್ದಾಗ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ನನ್ನ ಮೇಲೆ, ನನ್ನ ಸಹೋದರ, ತಂಗಿ, ಪತ್ನಿ ಮೇಲೆ ಅದಿರು ಕಳ್ಳತನದ ಸುಳ್ಳು ಕೇಸ್ ಹಾಕಿಸಿದ್ದರು. ಎಫ್ಐಆರ್ ದಾಖಲಿಸಿದ್ದರು. ಅದೆಲ್ಲವನ್ನು ಮರೆತು ನಾನು ಅವರು ಮುಖ್ಯಮಂತ್ರಿಯಾಗಲು ನೆರವಾಗಿದ್ದೆ. ಆನಂತರ ನಡೆದ ಬೆಳವಣಿಗೆ ಎಲ್ಲರಿಗೂ ಗೊತ್ತಿದೆ. ಅವರು ಸಿಎಂ ಆಗಿದ್ದಾಗ ಪ್ರಾಮಾಣಿಕವಾಗಿ, ನಿಷ್ಠೆಯಿಂದ ಕೆಲಸ ಮಾಡಿದ್ದೆ. ನಾನು ಅವರ ಸುದ್ದಿಗೆ ಹೋಗುತ್ತಿರಲಿಲ್ಲ” ಎಂದು ತಿಳಿಸಿದರು.
ಕುಮಾರಸ್ವಾಮಿ ನನ್ನ ವಿರುದ್ಧ ಎಲ್ಲಾ ಅಸ್ತ್ರ ಪ್ರಯೋಗಿಸಲಿ:“ನಾನು ಪ್ರಧಾನಮಂತ್ರಿ, ಮುಖ್ಯಮಂತ್ರಿಯ ಮಗನಾಗಿ ರಾಜಕೀಯಕ್ಕೆ ಬಂದಿಲ್ಲ. ನಾನು ಬಡವನಲ್ಲದಿದ್ದರೂ ಮಧ್ಯಮ ವರ್ಗದ ರೈತ ಕುಟುಂಬದಿಂದ ಬಂದವನು. ನನ್ನ ಆಸ್ತಿ ಮಾಹಿತಿ ತೆರೆದ ಪುಸ್ತಕದಂತೆ. ನಾನು ಬದುಕಲು ಸಾಧ್ಯವಾಗದಂತಹ ದಾಖಲೆ ಏನಿದೆಯೋ ಅದನ್ನು ಬಿಚ್ಚಿಡಲಿ. ನಾನು ಅಂತಹ ಮಾಡಬಾರದ ತಪ್ಪು ಏನು ಮಾಡಿದ್ದೇನೆ ತಿಳಿಯಲಿ. ದಾಖಲೆ ಬಿಚ್ಚಿಡಲು ನಿಮ್ಮನ್ನು ತಡೆದಿರುವವರು ಯಾರು? ದಾಖಲೆ ಸಮೇತ ಸದನದಲ್ಲಿ ಚರ್ಚೆಗೆ ಬನ್ನಿ ಎಂದು ನೀವು ಶಾಸಕರಾಗಿದ್ದಾಗಲೆ ನಾನು ಎರಡು ಬಾರಿ ಆಹ್ವಾನ ಕೊಟ್ಟಿದ್ದೇನೆ. ನೀನು ಯಾಕೆ ಬರಲಿಲ್ಲ? ಚರ್ಚೆ ಮಾಡಲಿಲ್ಲ? ಈಗಲೂ ನಿಮ್ಮ ಶಾಸಕರ ಕೈಗೆ ದಾಖಲೆ ಕೊಟ್ಟು ಚರ್ಚೆಗೆ ಕಳಿಸು. ನಾನು ಚರ್ಚೆಗೆ ಸಿದ್ಧನಿದ್ದೇನೆ” ಎಂದು ತಿರುಗೇಟು ನೀಡಿದರು.
“ನೀನು ದೆಹಲಿಯಲ್ಲಿ ನನ್ನ ವಿರುದ್ಧ ಯಾರಿಗೆ ಯಾವ ಪತ್ರ ನೀಡಿದ್ದೀರಿ ಎಂದು ನನಗೆ ಗೊತ್ತಿದೆ. ನಿಮ್ಮ ತಂದೆ ಏನೆನು ಬರೆದಿದ್ದಾರೆ ಎಂದು ನನಗೆ ಮಾಹಿತಿ ಇದೆ. ದೆಹಲಿಯಲ್ಲಿ ಏನೆಲ್ಲಾ ಪ್ರಯತ್ನ ನಡೆಯುತ್ತಿದೆ ಎಂದು ತಿಳಿದಿದೆ. ಅವರ ಸಹೋದರ ಇದ್ದಾನಲ್ಲ ಅಬ್ಬಾಬ್ಬಾ. ಅವನ ಹೆಸರಲ್ಲಿ ಎಷ್ಟು ಸಾವಿರ ಕೋಟಿ ಆಸ್ತಿ ಇದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಅವರ ಮಗನ ಸೋಲಿನ ನಂತರ ಅವರು ನನ್ನ ಮೇಲೆ ಇಲ್ಲಸಲ್ಲದ ವಾಗ್ದಾಳಿ ನಡೆಸಿದ್ದಾರೆ. ಅವರು ನನ್ನ ಬಗ್ಗೆ ಏನೆಲ್ಲಾ ಮಾತನಾಡಿದ್ದಾರೆ ಎಂದು ನೀವೇ ನೋಡಿ. ಎಷ್ಟು ದಿನ ಸಹಿಸಲು ಸಾಧ್ಯ. ಅವರು ನನ್ನ ವಿರುದ್ಧ ಏನೇನು ದಾಖಲೆಗಳಿವೆಯೋ ಬಿಚ್ಚಿಡಲಿ. ಅವರ ಅಸ್ತ್ರಗಳನ್ನೆಲ್ಲಾ ಪ್ರಯೋಗಿಸಲಿ. ಅವರ ಗೊಡ್ಡು ಬೆದರಿಕೆಗಳಿಗೆ ನಾನು ಹೆದರುವುದಿಲ್ಲ. ನಾನು ಯೂಟರ್ನ್ ಹೇಳಿಕೆ ನೀಡುವುದಿಲ್ಲ. ನಾನು ಏನಿದ್ದರೂ ನೇರವಾಗಿ ಹೋರಾಟ ಮಾಡುತ್ತೇನೆ” ಎಂದು ತಿಳಿಸಿದರು.
“ಕುಮಾರಸ್ವಾಮಿ ಅವರು ಯಾವ ಆಧಾರದ ಮೇಲೆ ಹಾಸನದಲ್ಲಿ ನಾನು ಪೆನ್ ಡ್ರೈವ್ ಹಂಚಿದ್ದೇನೆ ಎಂದು ಆರೋಪ ಮಾಡಿದರು? ನಾನು ಅಂತಹ ಕೆಲಸ ಮಾಡಲು ಮೂರ್ಖನಲ್ಲ. ನಾನು ಅದನ್ನು ಚುನಾವಣೆಗೆ ಬಳಸಿಕೊಳ್ಳುವುದಾದರೆ, ನೇರವಾಗಿಯೇ ಬಳಸಿಕೊಳ್ಳುತ್ತಿದೆ. ಕುಮಾರಸ್ವಾಮಿ ಅವರ ಹೇಳಿಕೆ ಯೂಟರ್ನ್ ಅಲ್ಲವೇ?” ಎಂದರು.
“ಪಾದಯಾತ್ರೆ ಮುಂಚೆ ಹಾಗೂ ಪಾದಯಾತ್ರೆ ನಂತರ ಅವರು ಮಾತುಗಳು ಹೇಗಿವೆ? ಅಶ್ವತ್ಥ್ ನಾರಾಯಣ ಅವರೇ ಬಿಚ್ಚಿಡುವ ವಿಚಾರದಲ್ಲಿ ಕುಮಾರಸ್ವಾಮಿ ಬಗ್ಗೆ ಏನೆಲ್ಲಾ ಹೇಳಿದ್ದಾರೆ. ವಿಜಯೇಂದ್ರ, ಯಡಿಯೂರಪ್ಪ ಇವರ ಬಗ್ಗೆ ಏನೆಲ್ಲಾ ಹೇಳಿದ್ದಾರೆ. ಇವರು ಅವರ ಬಗ್ಗೆ ಏನೆಲ್ಲಾ ಹೇಳಿದ್ದಾರೆ. ಮೋದಿ, ಅಮಿತ್ ಶಾ ಬಗ್ಗೆ ಕುಮಾರಸ್ವಾಮಿ ಚುನಾವಣೆಗೂ ಮುಂಚೆ ಏನೆಲ್ಲಾ ಮಾತನಾಡಿದ್ದರು. ಈಗ ಏನು ಮಾತನಾಡುತ್ತಿದ್ದಾರೆ ಇದು ಯೂಟರ್ನ್ ಅಲ್ಲವೇ?” ಎಂದು ತಿಳಿಸಿದರು.
ಸಿಎಂ ರಾಜೀನಾಮೆ ಕೊಡುವ ಪ್ರಶ್ನೆ, ಪರಿಸ್ಥಿತಿ ಇಲ್ಲ:ಮೈಸೂರಿನಲ್ಲಿ ದಾಖಲೆ ಬಿಡುಗಡೆ ಮಾಡಲಿಲ್ಲ ಎಂಬ ಪ್ರಶ್ನೆಗೆ, “ದಾಖಲೆಗಳನ್ನು ಎಲ್ಲಿ ಇಡಬೇಕು ಎಲ್ಲಿ ಚರ್ಚೆ ಮಾಡಬೇಕೋ ಮಾಡುತ್ತೇನೆ. ನಾನು ಇಂತಿತಹ ವಿಚಾರ ಇದೆ ಎಂದು ಹೇಳಿದ್ದೇನೆ. ಸದನದಲ್ಲಿ ದಾಖಲಾಗಲಿ ಎಂಬುದು ನಮ್ಮ ಉದ್ದೇಶ”. ಸಿಎಂ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಸುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಸಿಎಂ ರಾಜೀನಾಮೆ ಕೊಡುವ ಪ್ರಶ್ನೆ, ಪರಿಸ್ಥಿತಿ ಇಲ್ಲ. ಇದು ರಾಜಕೀಯ ಷಡ್ಯಂತ್ರ. ಕುಮಾರಸ್ವಾಮಿ, ಯಡಿಯೂರಪ್ಪನವರಿಗೆ ಅಶೋಕ್, ವಿಜಯೇಂದ್ರ ಅವರಿಗೆ ಭ್ರಮೆ, ಹಗಲುಗನಸು ಕಾಣುತ್ತಿದ್ದಾರೆ. ಇದು ಸಾಧ್ಯವಿಲ್ಲ” ಎಂದು ತಿಳಿಸಿದರು.
ಬಿಜೆಪಿ- ಜೆಡಿಎಸ್​ನ ಸುಳ್ಳು ಆರೋಪಗಳಿಗೆ ಹೆದರುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:two × 5 =
Remember me
