ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ದೇವೇಗೌಡರ ಕುಟುಂಬವನ್ನು ಬಿಟ್ಟು ಯಾರನ್ನು ಬೇಕಾದರೂ ಖರೀದಿ ಮಾಡುವ ಶಕ್ತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.
ಯಶವಂತಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಗಹಿಸುವುದಕ್ಕೆ ಮುನ್ನ ಮಾಧ್ಯಮಗಳ ಜತೆ ಮಾತನಾಡಿದರು ಅವರು. ಈ ಸಂದರ್ಭದಲ್ಲಿ ಅವರು ಡಿ.ಕೆ.ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ತಮ್ಮ ವಿರುದ್ಧ ದಾಖಲೆ ಬಿಡುಗಡೆ ಮಾಡಿದರೆ ಭಯ ಇಲ್ಲ ಎಂದು ಭಂಡತನದ ಹೇಳಿಕೆ ನೀಡಿದ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಅವರು; ” ಅವರು ಯಾರಿಗೂ ಹೆದರಲ್ಲ. ಅವರು ಯಾರನ್ನು ಬೇಕಾದರೂ ಖರೀದಿ ಮಾಡುತ್ತಾರೆ. ಬಿಜೆಪಿಯ ದೆಹಲಿಯ ನಾಯಕರನ್ನೇ ಖರೀದಿ ಮಾಡಿದ್ದರೂ ಅಚ್ಚರಿ ಇಲ್ಲ. ಯಾರನ್ನು ಬೇಕಾದರೂ ಅವರು ಖರೀದಿ ಮಾಡಬಹುದು, ಅವರಿಗೆ ಆ ಶಕ್ತಿ ಇದೆ ಎಂದು ಹೇಳಿದರು.
ಬಿಚ್ಚೊದು ಬಿಚ್ಚೊದು ಎಂದು ಅವರು ಪದೇಪದೆ ಹೇಳುತ್ತಿದ್ದಾರೆ. ಹೊರಗೆ ಬರಬೇಕಾದದ್ದು ಬಂದೇ ಬರುತ್ತದೆ. ಈವರೆಗೂ ಮಾಡಿಕೊಂಡಿದ್ದು ಸಾಕು. ಇನ್ನಾದರೂ ಲೂಟಿ ಹೊಡೆಯೊದು ನಿಲ್ಲಿಸಿ, ಅಣ್ಣ ಅಂತಿರಲ್ಲ. ಅಣ್ಣನಾಗಿ ಹೇಳುತ್ತೇನೆ. ಇನ್ನಾದರೂ ಈ ಲೂಟಿ ನಿಲ್ಲಿಸಿ. ಈ ಕಿವಿಮಾತು ಕೇಳಿದರೆ ನಿಮ್ಮನ್ನು ತಮ್ಮ ಎಂದು ಒಪ್ಪಿಕೊಳ್ಳುತ್ತೇನೆ ಎಂದು ಡಿಸಿಎಂ ಡಿಕೆಶಿ ಅವರ ವಿರುದ್ಧ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಪಕ್ಷ ಜೆಡಿಎಸ್ ಪಕ್ಷದ ಶಾಸಕರನ್ನು ಸೆಳೆಯುತ್ತಿದೆಯಲ್ಲ ಎನ್ನುವ ಪ್ರಶ್ನೆಗೆ ಖಾರವಾಗಿ ಉತ್ತರಿಸಿದ ಅವರು, ನಮ್ಮ ಶಾಸಕರು ಪಕ್ಷ ಬಿಡುವ ಸಾಧ್ಯತೆ ಇಲ್ಲ. ಕಾಂಗ್ರೆಸ್ ನವರು ಯಾಕೆ ಈ ರೀತಿಯ ಚರ್ಚೆ ಹುಟ್ಟುಹಾಕಿದ್ದಾರೆ ಎಂದರೇ ಅವರದೇ ಪಕ್ಷದ 30 ಶಾಸಕರು ಪಕ್ಷ ಬಿಡಲು ಮುಂದಾಗಿದ್ದಾರೆ. ಅದನ್ನು ಸರಿ ಮಾಡಿಕೊಳ್ಳಲು ಸಾಧ್ಯ ಅಗದ ಕಾಂಗ್ರೆಸ್ ನವರು ಬೇರೆ ಪಕ್ಷಗಳ ಶಾಸಕರು ಬರುತ್ತಿದ್ದಾರೆ ಎಂದು ಗುಲ್ಲು ಹಬ್ಬಿಸುತ್ತಿದ್ದಾರೆ. ಕಾಂಗ್ರೆಸ್ ಶಾಸಕರು ಪಕ್ಷ ಬಿಡುವುದನ್ನ ತಡೆಯಲು ಈ ಗುಮ್ಮ ಬಿಟ್ಟುಕೊಂಡು ತಿರುಗಾಡುತ್ತಿದ್ದಾರೆ ಎಂದು ತಿರುಗೇಟು ಕೊಟ್ಟರು.
ಇಂಥ ವಾತಾವರಣದಲ್ಲಿ ಮೊದಲನೇ ಘರ್ ವಾಪಸ್ಸಿ ಮಾಡಿಕೊಂಡಿದ್ದಾರೆ. ಆದರೆ, ನಾನು ಹೋಗಲ್ಲ ಎಂದ ಸೋಮಶೇಖರ್ ಹೇಳುತ್ತಿದ್ದಾರೆ. ಅವರು ಮೈಸೂರು ಉಸ್ತುವಾರಿ ಸಚಿವರಾಗಿದ್ದರು. ಮಂತ್ರಿಯಾಗಿ ಅವರು ಕಲ್ಲೇಳಿದ್ದಕ್ಕೆಲ್ಲಾ ಸಹಿ ಹಾಕಿದ್ದರು ಅಲ್ಲವೇ? ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆ ಹೋಗ್ತಾ ಇದ್ದೀನಿ ಅಂತ ಹೇಳ್ತಾ ಇದ್ದಾರೆ. ಹಾಗಾದರೆ ಇವರು ಸಂಪೂರ್ಣವಾಗಿ ಅಭಿವೃದ್ಧಿ ಕೆಲಸ ಮಾಡಿಲ್ಲ ಅಂತ ಆಯ್ತು ಅಲ್ಲವೇ?ಮೂರು ವರ್ಷಗಳಿಂದ‌ ಈ ಕ್ಷೇತ್ರಕ್ಕೆ ಅವರು ಏನು ಮಾಡಿದರು? ಕ್ಷೇತ್ರದ ಅಭಿವೃದ್ಧಿ ಮಾಡಿಲ್ಲ ಅಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಅವರು ಟಾಂಗ್ ಕೊಟ್ಟರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × 5 =
Remember me
