ಬೆಂಗಳೂರು:ದೇಶದಲ್ಲಿ ಪಾಳೆಗಾರಿಕೆ ತೆಗೆದು ಪ್ರಜಾಪ್ರಭುತ್ವವನ್ನು ಸ್ಥಾಪನೆ ಮಾಡಲಾಗಿದೆ. ಆದರೂ ಕಳೆದ 75 ವರ್ಷಗಳಲ್ಲಿ ರಾಜಕೀಯದ ಬಗ್ಗೆ ಪ್ರಧಾನ ಚರ್ಚೆ ನಡೆದಿದೆಯೇ ಹೊರತು ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯದ ಬಗ್ಗೆ ಗಂಭೀರವಾಗಿ ಚರ್ಚೆ ನಡೆಯದೆ ಇರುವುದು ವಿಷಾದಕರ ಎಂದು ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಎಚ್.ಎನ್‌. ನಾಗಮೋಹನದಾಸ್ ಅವರು ಅಭಿಪ್ರಾಯಪಟ್ಟರು.
ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘ (ಕೆಯುಡಬ್ಲ್ಯುಜೆ) ಶುಕ್ರವಾರ ‘ಚುನಾವಣೆ-ಪತ್ರಕರ್ತರು ಮತ್ತು ಸಾಮಾಜಿಕ ಜವಾಬ್ದಾರಿ’ ಎಂಬ ವಿಷಯದ ಬಗ್ಗೆ ಏರ್ಪಡಿಸಿದ್ದ ಸಂವಾದದಲ್ಲಿ ಅವರು ಮಾತನಾಡಿದರು.
ನಾವು ಮಾಡಿದ ದೊಡ್ಡ ತಪ್ಪು ಅಂದರೆ ಕೇವಲ ರಾಜಕೀಯ ಪ್ರಜಾಪ್ರಭುತ್ವದ ವಿಚಾರದ ಬಗ್ಗೆ ಮಾತ್ರ ಚರ್ಚೆ ಮಾಡುತ್ತಿದ್ದೇವೆ. ಆದರೆ ದೇಶದ ಸಂವಿಧಾನದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಪ್ರಜಾಪ್ರಭುತ್ವ ಎಂಬ ಮೂರು ಅಂಶಗಳಿವೆ. ಉಳಿದವುಗಳ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿಲ್ಲ ಎಂದು ಹೇಳಿದರು. ಹಲವಾರು ಸಂದರ್ಭದಲ್ಲಿ ಬರೀ ರಾಜಕೀಯ ವಿಚಾರವೇ ಪ್ರಧಾನವಾಗಿದೆ. ರೈತರ ಆತ್ಮಹತ್ಯೆ, ಇಂಧನ ದರ ಏರಿಕೆ ಮತ್ತಿತರ ದೈನಂದಿನ ವಿಚಾರಗಳು ಮುನ್ನಲೆಗೆ ಬರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇದನ್ನೂ ಓದಿ:ಗೂಂಡಾ ಕಾಯ್ದೆಯಡಿ ಬಂಧಿತ ಆಪ್ತನ ಮನೆಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಭೇಟಿ!
ಪ್ರಜಾಪ್ರಭುತ್ವದಲ್ಲಿ ಚುನಾವಣೆ ಅರಿತು ನಾಗರಿಕರು ಮಾಧ್ಯಮಗಳಿಂದ ಮಾಹಿತಿ ಪಡೆದು ಜಾಗೃತರಾಗಿ ಮತದಾನ ಮಾಡುತ್ತಾರೆ. ಅಷ್ಟರಮಟ್ಟಿಗೆ ಮಾಧ್ಯಮಗಳು ಜನರಿಗೆ ಚರ್ಚೆ ಮಾಡಲು, ಮಾಹಿತಿ ನೀಡಲು ಅನುಕೂಲ ಕಲ್ಪಿಸಿವೆ. ಚುನಾವಣೆ ಸಂದರ್ಭದಲ್ಲಿ ನಿರುದ್ಯೋಗ, ಬೆಲೆ ಏರಿಕೆ, ಕೃಷಿ ಬಿಕ್ಕಟ್ಟು, ರೈತರು, ಕಾರ್ಮಿಕರು, ಆರ್ಥಿಕತೆ, ಜನರ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ಈ ನಿಟ್ಟಿನಲ್ಲಿ ಮಾಧ್ಯಮಗಳು ಜನರು ಮತ್ತು ಸರ್ಕಾರದ ಮಧ್ಯೆ ಸೇತುವೆಯಂತೆ ಕೆಲಸ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ಪ್ರತಿಯೊಬ್ಬರೂ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಒಂದು ಲಕ್ಷ ರೂ.ನಂತೆ ವರ್ಷಕ್ಕೆ ಒಟ್ಟಾರೆ ರಾಜ್ಯದ ಜನರು ಏಳೂವರೆ ಲಕ್ಷ ಕೋಟಿ ರೂ. ತೆರಿಗೆ ಕಟ್ಟುತ್ತಾರೆ. ಆದರೆ ದುರ್ದೈವದ ಸಂಗತಿ ಎಂದರೆ ರಾಜ್ಯದ ಬಜೆಟ್ ಗಾತ್ರ ಎರಡೂವರೆ ಲಕ್ಷ ರೂ. ದಾಟಿಲ್ಲ. ಯಾವ ಪಕ್ಷವೂ ತನ್ನ ಪ್ರಣಾಳಿಕೆಯಲ್ಲಿ ಸಾಲ, ತೆರಿಗೆ ಮತ್ತು ಆರ್ಥಿಕತೆ ಬಗ್ಗೆ ವಾಸ್ತವ ತಿಳಿಸಿಲ್ಲ. ಜನರ ಅಭಿಪ್ರಾಯ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳ‌ ಮೇಲೆ ಒತ್ತಡ ಹಾಕುವ ಕೆಲಸ ಮಾಧ್ಯಮಗಳು ಮಾಡಬೇಕಿದೆ ಎಂದು‌ ನ್ಯಾ. ಎಚ್.ಎನ್‌. ನಾಗಮೋಹನದಾಸ್ ಹೇಳಿದರು.
ಇದನ್ನೂ ಓದಿ:ತಾನೂ ಕೋಟ್ಯಧಿಪತಿ, ಮಕ್ಕಳಿಬ್ಬರೂ ಕೋಟ್ಯಧಿಪತಿ, ಹೆಂಡತಿಯೂ ಕೋಟಿ ರೂ. ಮೌಲ್ಯದ ಚಿನ್ನಾಭರಣದ ಒಡತಿ, ಆದ್ರೆ ಸ್ವಂತ ಕಾರಿಲ್ಲ!
ಕಾರ್ಯಕ್ರಮವನ್ನು ಉದ್ಘಾಟಿಸಿದ ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿ ಡಾ.ಬಿ.ಕೆ.ರವಿ, ಪತ್ರಕರ್ತರಾದವರು ತಮ್ಮ ಸ್ವಂತ ಜ್ಞಾನದ ಮೇಲೆ ಅವಲಂಬಿತರಾಗಿರಬೇಕೇ ವಿನಃ ತಂತ್ರಜ್ಞಾನದ ಮೇಲೆ ಅವಲಂಬಿತರಾಗಿರಬಾರದು. ಪರಿಶ್ರಮ, ಬದ್ಧತೆ ವೃತ್ತಿಗೆ ಮುಖ್ಯ ಎಂದು ಕಿವಿಮಾತು ಹೇಳಿದರು. ಯಾವ ಮಾಧ್ಯಮ ಜನರ ನಂಬಿಕೆ ಉಳಸಿಕೊಳ್ಳುವುದೋ ಅಲ್ಲಿಯವರೆಗೆ ಆ ಮಾಧ್ಯಮ ಉಳಿದುಕೊಳ್ಳುವುದು. ಈ ನಿಟ್ಟಿನಲ್ಲಿ ಪತ್ರಕರ್ತರು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದರು.
ಪ್ರಜಾಪ್ರಭುತ್ವದ ಹಬ್ಬವಾದ ಈ ವಿಧಾನಸಭಾ ಚುನಾವಣೆಯಲ್ಲಿ ಜನರು ಹೆಚ್ಚು‌ ಮತದಾನ ಮಾಡುವ ಮೂಲಕ‌ ತಮ್ಮ ಹಕ್ಕು ಚಲಾಯಿಸಬೇಕು. ಆರೋಗ್ಯಕಾರಿ ಮಾಧ್ಯಮದಿಂದ ಆರೋಗ್ಯಕಾರಿ ಸಮಾಜ ನಿರ್ಮಾಣ ಸಾಧ್ಯ ಎಂದು ಅವರು ತಿಳಿಸಿದರು.
ಮೈಸೂರಿನಲ್ಲಿ‌ ನಡೆದ ಕೆಯುಡಬ್ಲ್ಯುಜೆ ದತ್ತಿ ಪ್ರಶಸ್ತಿಯನ್ನು ಪಡೆಯಲು ಸಾಧ್ಯವಾಗದ ಕಾರಣ ಹಿರಿಯ ಪತ್ರಕರ್ತರಾದ ಮುಂಜಾನೆ ಸತ್ಯ ಅವರಿಗೆ ಪಿ.ಆರ್. ರಾಮಯ್ಯ ಹೆಸರಿನ ಪ್ರಶಸ್ತಿಯನ್ನು ಇಂದು ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ಅವರು, ಪತ್ರಕರ್ತರ ಪ್ರಾತಿನಿಧಿಕ ಸಂಸ್ಥೆ ಕೆಯುಡಬ್ಲ್ಯುಜೆಗೆ ಶಿವಾನಂದ ತಗಡೂರು ಅಧ್ಯಕ್ಷರಾದ ಮೇಲೆ ಹೊಸ ರೂಪ ನೀಡಿದ್ದಾರೆ ಎಂದು ಶ್ಲಾಘಿಸಿದರು. ಪತ್ರಕರ್ತರಾದವರಿಗೆ ಬದ್ಧತೆ ಮುಖ್ಯ ಎಂದು ತಮ್ಮ ಸುದೀರ್ಘ ಪತ್ರಕರ್ತ ಜೀವನದ ಅನುಭವವನ್ನು ಹಂಚಿಕೊಂಡರು.
ಇದನ್ನೂ ಓದಿ:ಶ್ರೀರಾಮುಲು ಮಾತ್ರವಲ್ಲ, ಅವರ ಪತ್ನಿ ಮತ್ತು ಮಕ್ಕಳಿಬ್ಬರೂ ಕೋಟ್ಯಧಿಪತಿಗಳು!
ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪತ್ರಕರ್ತರಿಗೆ ವಿಶ್ವಾಸಾರ್ಹತೆಯೇ ಮುಖ್ಯ. ಕೆಯುಡಬ್ಲ್ಯುಜೆ ಸಂವಾದ ಸರಣಿ ರೂಪದಲ್ಲಿ ಮುಂದುವರಿಯಲಿದೆ ಎಂದು ಹೇಳಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಾರ್ತಾ ಇಲಾಖೆ ನಿರ್ದೇಶಕ ಡಿ.ಪಿ.ಮುರಳೀಧರ್, ಉಪ ನಿರ್ದೇಶಕ ಕೆ.ಪಿ. ಪುಟ್ಟಸ್ವಾಮಯ್ಯ ಅವರ ಸುಧೀರ್ಘ ಸೇವೆಯನ್ನು ಸ್ಮರಿಸಿ ಕೆಯುಡಬ್ಲ್ಯುಜೆ ಇದೇ ಸಂದರ್ಭದಲ್ಲಿ ಸನ್ಮಾನಿಸಿತು. ಕೆಯುಡಬ್ಲ್ಯೂಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಸ್ವಾಗತಿಸಿದರು. ಖಜಾಂಚಿ ವಾಸುದೇವ ಹೊಳ್ಳ ವಂದಿಸಿದರು.
ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಕೆ.ರವಿ ಅವರು ವಿತರಕರ ಪ್ರಶ್ನೆ ಬಗ್ಗೆ ಮಾತನಾಡಿ, ಇದೇ ಮೊದಲ ಬಾರಿಗೆ ವಿತರಕರ ಬಗ್ಗೆ ಪ್ರಶ್ನೆ ಬಂದಿದೆ. ಮುಂದೆ ಪತ್ರಿಕೋದ್ಯಮ ಪಾಠದಲ್ಲಿ ವಿತರಕರ ಪಾತ್ರದ ಬಗ್ಗೆ ಸೇರಿಸಲು ಸೂಕ್ತ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಪತ್ರಕರ್ತರ ಸಭಾಂಗಣದಲ್ಲಿ ‌ಚರ್ಚೆ ನಡೆಸುತ್ತಿದ್ದ ವೇಳೆ, ಪತ್ರಿಕಾ ವಿತರಕರ ಸಂಘದ ರಾಜ್ಯಾಧ್ಯಕ್ಷ ಕೆ.ಶಂಭುಲಿಂಗ ಅವರು ಪ್ರಶ್ನೆ ಕೇಳಿದ್ದರು. ಸುದ್ದಿಮನೆಯಲ್ಲಿ ವಿತರಕರಿಗೆ ಸರಿಯಾದ ಸ್ಥಾನಮಾನ ಮತ್ತು ಸೌಲಭ್ಯ ಸಿಗುತ್ತಿಲ್ಲ. ಈ ಬಗ್ಗೆ ಗಮನಹರಿಸಬೇಕು ಎಂದು ಸಲಹೆ ನೀಡಿದ್ದರು.
ಪತ್ರಕರ್ತರು ಕೊಟ್ಟ ವರದಿ ಪತ್ರಿಕೆಯಲ್ಲಿ ಪ್ರಕಟಗೊಂಡರೆ ಸಾಲದು. ಅದು ಜನರಿಗೆ ತಲುಪಿದಾಗ ಮಾತ್ರ ಅದರಲ್ಲಿರುವ ವಿಚಾರಧಾರೆ ಸಮಾಜಕ್ಕೆ ತಿಳಿಯಲು ಸಾಧ್ಯ. ಆದ ಕಾರಣ ಪತ್ರಿಕಾ ವಿತರಕರ ಪಾತ್ರವೂ ಮಹತ್ವದ್ದು ಎಂದು ಶ್ಲಾಘಿಸಿದರು. ಅಲ್ಲದೆ ಇನ್ನು ಮುಂದೆ ಮಾಧ್ಯಮಕ್ಕೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಭಾಗವಹಿದಾಗಲೆಲ್ಲ ಪತ್ರಿಕಾ ವಿತರಣಾ ವ್ಯವಸ್ಥೆ ಪ್ರಾಮುಖ್ಯತೆ ಕುರಿತು ಮಾತನಾಡುವ ಭರವಸೆಯನ್ನು ಅವರು ನೀಡಿದರು.
‘ಈ ಸಲ ಯಾರಿಗೆ ಮತ ಹಾಕಲಿ?’ ಎಂದು ಕೇಳಿದರೆ ಇದು ಏನನ್ನುತ್ತೆ?: ಕೃತಕ ಬುದ್ಧಿಮತ್ತೆಯ ಬುದ್ಧಿಮಾತು!

ದ್ವಿತೀಯ ಪಿಯುಸಿ ದಾಖಲೆಯ ಫಲಿತಾಂಶ; ದಾಖಲೆಗೆ ಕಾರಣವೇನು? ಈ ಸಲದ ರಿಸಲ್ಟ್​ ವಿಶೇಷಗಳೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 7 =
Remember me
