ಬೆಂಗಳೂರು:ರಾಜ್ಯಾದ್ಯಂತ ಹಲವು ಮೆಡಿಕಲ್ ಕಾಲೇಜು ಶಿಕ್ಷಣ ಸಂಸ್ಥೆಗಳ ಬುಧವಾರ ಬೆಳ್ಳಂಬೆಳಗ್ಗೆ ಏಕಕಾಲದಲ್ಲಿ ಐಟಿ ದಾಳಿ ನಡೆದಿದೆ.
ಬೆಂಗಳೂರಿನ ಕುಂಬಳಗೋಡಿನ ಬಿಜಿಎಸ್, ದೇವನಹಳ್ಳಿಯ ಆಕಾಶ್ ಮೆಡಿಕಲ್ ಕಾಲೇಜು, ಹೆಸರುಘಟ್ಟದ ಸಪ್ತಗಿರಿ ಕಾಲೇಜು, ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜು ಹಾಗೂ ಮಂಗಳೂರಿನ ಹಲವು ಆಸ್ಪತ್ರೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರಿನ ಪ್ರತಿಷ್ಟಿತ ಆಸ್ಪತ್ರೆಗಳ ಮಾಲೀಕರ ಮನೆ ಮೇಲೂ ಐಟಿ ದಾಳಿ ಆಗಿದೆ. ಎ‌.ಜೆ. ಆಸ್ಪತ್ರೆ, ಯೆನೆಪೋಯ ಆಸ್ಪತ್ರೆ ಮಾಲೀಕರ ಮನೆಗಳನ್ನು ಪರಿಶೀಲನೆ ಮಾಡಲಾಗಿದೆ. ಶ್ರೀನಿವಾಸ ಮೆಡಿಕಲ್​ ಕಾಲೇಜು, ಕಣಚೂರು ಆಸ್ಪತ್ರೆ ಮೇಲೂ ದಾಳಿ ಆಗಿದೆ.
ತುಮಕೂರು ನಗರದ ಶ್ರೀದೇವಿ ಶಿಕ್ಷಣ ಸಂಸ್ಥೆ ಮೇಲೆ ಐಟಿ ಅಧಿಕಾರಿಯಾಗಿದ್ದು, 9 ಇನ್ನೊವಾ ಕಾರಿನಲ್ಲಿ ಆಗಮಿಸಿರುವ ಅಧಿಕಾರಿಗಳು ಏಕಕಾಲದಲ್ಲಿ ವಿವಿಧೆಡೆ ದಾಳಿ ನಡೆಸಿ ತಪಾಸಣೆ ಕೈಗೊಂಡಿದ್ದರೆ. ಶ್ರೀದೇವಿ ವಿದ್ಯಾ ಸಂಸ್ಥೆ ಬಿಜೆಪಿ ಮುಖಂಡ, ಮಾಜಿ ಶಾಸಕ ಡಾ.ಎಂ.ಆರ್.ಹುಲಿನಾಯ್ಕರ್ ಒಡೆತನದ್ದು.
ಬೆಂಗಳೂರಿನ ಸಪ್ತಗಿರಿ ಮೆಡಿಕಲ್ ಕಾಲೇಜು ಒಡೆತನದ ಮಾಲಿಕ ದಯಾನಂದ್ ಮನೆ ಮೇಲೂ ಐಟಿ ದಾಳಿಒ ಆಗಿದೆ. ಮನೆಯ ಇಂಚಿಂಚು ಬಿಡದೆ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ
ಈಗಾಗಲೇ ಬಹುತೇಕ ಕಡೆ ಅಡ್ಮಿಷನ್ ಆಗಿದೆ. ಡೊನೇಶನ್ ರೂಪದಲ್ಲಿ ಕೋಟ್ಯಂತರ ರೂಪಾಯಿ ಸಂಗ್ರಹ ಆಗಿದೆ ಎನ್ನಲಾಗಿದೆ. ಅಕ್ರಮವಾಗಿ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಅಕ್ರಮ ಹಣದ ವಹಿವಾಟು ಆರೋಪ ಕೇಳಿಬಂದಿದ್ದು. ತೆರಿಗೆ ವಂಚನೆ ಆರೋಪದಲ್ಲಿ ಐಟಿ ದಾಳಿ ಮಾಡಲಾಗಿದೆ.
ಹತ್ತು ಆನೆ ಬೇಕಾದ್ರು ಸಾಕ್ತೀನಿ.. ನಮ್ಮಪ್ಪ ಮದ್ವೆ ಆಗು ಅಂತಿದ್ದಾರೆ.. ಏನು ಮಾಡಲಿ?: ಪ್ರಜ್ವಲ್​ ರೇವಣ್ಣ

ನಾಯಿ ಮೇಲೆ ಅತ್ಯಾಚಾರ! ಬೆಚ್ಚಿಬೀಳಿಸುತ್ತೆ ಮೈಸೂರಲ್ಲಿ ಕಾಮುಕನ ಪೈಶಾಚಿಕ ಕೃತ್ಯ

ಪತ್ನಿಯ ಕುಟುಂಬಸ್ಥರಿಂದಲೇ ಗಂಡನ ಹತ್ಯೆ! ಪ್ರೀತಿಯ ಗಂಡನ ಬರ್ತ್​ ಡೇ ಸಂಭ್ರಮದಲ್ಲಿದ್ದವಳಿಗೆ ಆಘಾತ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 8 =
Remember me
