ಬೆಂಗಳೂರು:ತೆರಿಗೆ ವಂಚನೆ ಆರೋಪದ ಮೇಲೆ ರಾಜಧಾನಿಯಲ್ಲಿ ಕಳೆದ ಒಂದು ವಾರದಲ್ಲಿ 30ಕ್ಕೂ ಅಧಿಕ ಕಡೆಗಳಲ್ಲಿ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ತೆರಿಗೆ ಕಳ್ಳರು ಮತ್ತು ಹವಾಲಾ ದಂಧೆಕೋರರಲ್ಲಿ ನಡುಕು ಹುಟ್ಟಿದೆ. ಅ.4ರಂದು ಬೆಂಗಳೂರು ಮತ್ತು ಚೆನ್ನೈ ಐಟಿ ಇಲಾಖೆ ಅಧಿಕಾರಿಗಳ ಪ್ರತ್ಯೇಕ ತಂಡಗಳು ಚಿನ್ನದ ವ್ಯಾಪಾರಿಗಳು, ಮೆಡಿಕಲ್ ಶಾಪ್, ಆಸ್ಪತ್ರೆ ಮಾಲೀಕರು, ಲೆಕ್ಕಪರಿಶೋಧಕರಿಗೆ ಸೇರಿದ ಜಯನಗರ, ಬಿಟಿಎಂ ಲೇಔಟ್, ಸದಾಶಿವನಗರ, ಪ್ರಶಾಂತನಗರ, ಸದಾಶಿವನಗರದಲ್ಲಿ ಇರುವ ಮನೆ, ಕಚೇರಿ, ಮಳಿಗೆಗಳು ಸೇರಿ 15ಕ್ಕೂ ಅಧಿಕ ಸ್ಥಳಗಳ ಮೇಲೆ ಶೋಧ ನಡೆಸಿ ದಾಖಲೆ ಪತ್ರಗಳನ್ನು ಜಪ್ತಿ ಮಾಡಿದ್ದರು.
ವಿಜಯನಗರ ಬಳಿಯ ಪ್ರಶಾಂತನಗರದಲ್ಲಿ ಡಾ.ಸಂಧ್ಯಾ ಪಾಟೀಲ್ ಮನೆ, ಕ್ಲಿನಿಕ್ ಮೇಲೆ ದಾಳಿ ನಡೆದಿದೆ. ಅರಮನೆ ರಸ್ತೆಯಲ್ಲಿ ಇರುವ ಗಜರಾಜ ಜುವೆಲರ್ಸ್ ಮಳಿಗೆ, ಶಾಂತಿನಗರದ ಉದ್ಯಮಿ ನವೀನ್, ಬಂಗಲೆ ಮೇಲೆ, ಸದಾಶಿವನಗರದ ಶ್ರೀ ಗಣೇಶ್ ಜ್ಯುವೆಲರ್ಸ್ ಮಳಿಗೆ ಮಾಲೀಕರಿಗೆ ಸೇರಿದ ಭೂಮಿಕಾ ಅಪಾರ್ಟ್​ವೆುಂಟ್​ನಲ್ಲಿ ಶೋಧ ನಡೆಸಿದ್ದರು. ಶೇಷಾದ್ರಿಪುರದಲ್ಲಿನ ಲೆಕ್ಕಪರಿಶೋಧಕರ ಕಚೇರಿ ಮೇಲೂ ದಾಳಿ ನಡೆಸಿ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದರು. ಇದಾದ ಮೇಲೆ ಅ.12ರಂದು ಕಾಫಿ ಬೋರ್ಡ್ ನಿರ್ದೇಶಕ, ಚಿನ್ನದಂಗಡಿ ಮಾಲೀಕರಿರ ಮೇಲೆ ಮತ್ತೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದರು. ಆರ್​ಎಂವಿಎಕ್ಸ್ ಸ್ಟೇಷನ್, ಮಲ್ಲೇಶ್ವರ, ಡಾಲರ್ಸ ಕಾಲನಿ, ಬಿ.ಎಲ್.ಸರ್ಕಲ್ ಸೇರಿದಂತೆ ನಗರದ 10ಕ್ಕೂ ಅಧಿಕ ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಶೋಧ ನಡೆಸಿದ್ದರು. ಇದೀಗ ಮಾಜಿ ಕಾಪೋರೇಟರ್ ದಂಪತಿಗೆ ಸೇರಿದ ಐದು ಕಡೆಗಳಲ್ಲಿ ಶೋಧ ನಡೆಸಲಾಗಿದೆ. ಕಳೆದ ಒಂದು ವಾರದಿಂದ ನಿರಂತರವಾಗಿ ಐಟಿ ಅಧಿಕಾರಿಗಳು ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಹವಾಲಾ ದಂಧೆ ಟಾರ್ಗೆಟ್:ಪಂಚರಾಜ್ಯಗಳ ಚುನಾವಣೆ ಘೋಷಣೆಯಾದ ಮೇಲೆ ಐಟಿ ದಾಳಿ ನಡೆಯುತ್ತಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ರಾಜ್ಯದಿಂದ ಚುನಾವಣೆಗೆ ಫಂಡಿಂಗ್ ಆಗುತ್ತಿದೆ ಎಂಬ ಆರೋಪ ರಾಜಕೀಯ ವಲಯದಲ್ಲಿ ಕೇಳಿಬರುತ್ತಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು, ಹವಾಲ ದಂಧೆ ಮೇಲೆ ನಿಗಾವಹಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಬೆಂಗಳೂರು:ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿರುವ 42 ಕೋಟಿ ರೂಪಾಯಿ ಕಂತೆ ಕಂತೆ ಹಣದ ಮೂಲವನ್ನು ಪ್ರಶ್ನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಇದು ‘ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ’ಯ ಕರಾಮತ್ತು ಎಂದು ಕಾಂಗ್ರೆಸ್ ಕಾಲೆಳೆದಿದ್ದಾರೆ.
ಪಂಚರಾಜ್ಯ ಚುನಾವಣೆ ಘೊಷಣೆ ಆಗಿದ್ದೇ ತಡ, ರಾಜ್ಯದಲ್ಲಿ ಕುರುಡು ಕಾಂಚಾಣ ಕಂತೆ ಕಂತೆಯಾಗಿ ಕಾಟನ್ ಬಾಕ್ಸ್​ಗಳಲ್ಲಿ ಕುಣಿಯುತ್ತಿದೆ! ಅದೂ ಮಂಚದ ಕೆಳಗೆ!! ಐಟಿದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಪತ್ತೆಯಾದ ಹಣ ಯಾರದ್ದು? ಯಾರ ಹೆಣದ ಮೇಲೆ ಸಂಗ್ರಹಿಸಿದ ಪಾಪದ ಹಣವಿದು? ಈ ಪ್ರಶ್ನೆಗಳಿಗೆ ಉತ್ತರ ಬೇಕಿದೆ ಎಂದು ಹೇಳಿದ್ದಾರೆ. ಆಯ್ದ ಗುತ್ತಿಗೆದಾರರಿಗೆ ಬಿಬಿಎಂಪಿಯಿಂದ 650 ಕೋಟಿ ರೂ. ಬಿಡುಗಡೆಯಾದ ಬೆನ್ನಲ್ಲೇ ಈ 42 ಕೋಟಿ ರೂ. ಐಟಿ ಅಧಿಕಾರಿಗಳಿಗೆ ಸಿಕ್ಕಿಬೀಳುತ್ತದೆ. ಅಲ್ಲಿಗೆ ಕಲೆಕ್ಷನ್ ನಿಜ ಎಂದಾಯಿತು. ಅದು ಎಷ್ಟು ಪರ್ಸಂಟೇಜ್? ಅದರ ಹಿಂದೆ ಅಡಗಿ ಕೂತಿರುವ ಆದಿಪುರುಷರು ಯಾರು? ಎಂದು ಪ್ರಶ್ನಿಸಿದ್ದಾರೆ.
ತೆಲಂಗಾಣಕ್ಕೆ ಹೊರಟು ನಿಂತ ಹಣವೆ?:23 ಬಾಕ್ಸ್ ಗಳಲ್ಲಿ ತುಂಬಿಡಲಾಗಿದ್ದ ಈ ಇಡಗಂಟು ಪಕ್ಕದ ತೆಲಂಗಾಣಕ್ಕೆ ಹೊರಟು ನಿಂತಿತ್ತು ಎನ್ನುವುದು ಮಾಹಿತಿ. ಅಲ್ಲಿಗೆ ಚುನಾವಣೆಗಾಗಿ ಈ ಹಣವನ್ನು ಸಂಗ್ರಹ ಮಾಡಲಾಗಿತ್ತು ಎನ್ನುವುದು ಸತ್ಯ. ಈ ಕನಕ ಮಹಾಲಕ್ಷ್ಮಿಯ ಕಲೆಕ್ಷನ್​ಗೆ ‘ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ’ಯ ಕೈ ಕರಾಮತ್ತು ಎಂಬ ಇನ್ನೊಂದು ಮಾಹಿತಿ ಇದೆ. ಅಷ್ಟರಲ್ಲಿ ಐಟಿ ಇಲಾಖೆ ಮುಗಿಬಿದ್ದ ಪರಿಣಾಮ, ಗುಟ್ಟು ರಟ್ಟಾಗಿದೆ. ಈಗ ಹೇಳಿ ಸಿದ್ದರಾಮಯ್ಯನವರೇ, 42 ಕೋಟಿ ರೂ. ಬಗ್ಗೆ ಯಾವ ತನಿಖೆ ಮಾಡಿಸುತ್ತೀರಿ? ಎಂದು ಕಾಂಗ್ರೆಸ್ ಕಾಲೆಳೆದಿದ್ದಾರೆ.
ಹೈಕಮಾಂಡ್​ಗೆ ಹಬ್ಬ:ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೈಕಮಾಂಡ್​ಗೆ ಹಬ್ಬ. ಈಗಲೂ ಅದೇ ಆಗುತ್ತಿದೆ. ಪಂಚರಾಜ್ಯಗಳ ಚುನಾವಣೆಗಾಗಿ ಕರ್ನಾಟಕಕ್ಕೆ ಕನ್ನ ಹೊಡೆಯಲಾಗಿದೆ. ವೋಟು ಕೊಟ್ಟ ತಪ್ಪಿಗೆ ಕಾಂಗ್ರೆಸ್ ಉಂಡು ಹೋಗುತ್ತಿದೆ, ಕೊಂಡು ಹೋಗುತ್ತಿದೆ. ಇದು ಕನ್ನಡಿಗರ ಕರ್ಮ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ರಾಜಕೀಯ ಉದ್ದೇಶವಿಲ್ಲದೆ ದೇಶದಲ್ಲಿ ಐಟಿ ದಾಳಿ ನಡೆಯುವುದಿಲ್ಲ. ಕೇವಲ ನಮ್ಮಲ್ಲಿ ಮಾತ್ರ ಅಲ್ಲ ಬೇರೆ ರಾಜ್ಯಗಳಲ್ಲೂ ರಾಜಕೀಯ ಪ್ರೇರಿತ ಐಟಿ ದಾಳಿ ಆಗುತ್ತಿವೆ. ಕಮೀಷನ್ ಹಣದ ವಿಚಾರವಾಗಿ ನನಗೇನು ಗೊತ್ತಿಲ್ಲ.,
| ಡಿ.ಕೆ ಶಿವಕುಮಾರ್, ಡಿಸಿಎಂ
ಬೆಂಗಳೂರು:ಪಂಚರಾಜ್ಯಗಳ ಚುನಾವಣೆ ಖರ್ಚಿಗಾಗಿ ಕಾಂಗ್ರೆಸ್ ಹೈಕಮಾಂಡ್​ಗೆ ಕರ್ನಾಟಕ ಕಲೆಕ್ಷನ್ ಪಾಯಿಂಟ್ ಆಗಿದೆ. ಇದಕ್ಕೆ ಪೂರಕವಾದ ಬೆಳವಣಿಗೆ ನಡೆದಿದೆ ಎಂದು ಮಾಜಿ ಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಆರೋಪಿಸಿದರು.
ಭ್ರಷ್ಟಾಚಾರಮುಕ್ತ ಹಾಗೂ ಪಾರದರ್ಶಕ ಆಡಳಿತ ನೀಡುತ್ತೇವೆ ಎಂದು ಚುನಾವಣೆಯಲ್ಲಿ ಕಾಂಗ್ರೆಸ್ ಹೇಳಿತ್ತು. ಅಧಿಕಾರಕ್ಕೆ ಬಂದ ನಾಲ್ಕು ತಿಂಗಳಲ್ಲೇ ಸರ್ಕಾರದ ಮುಖವಾಡ ಕಳಚಿಬಿದ್ದಿದೆ ಎಂದು ಟೀಕಿಸಿದರು. ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಸುಳ್ಳು ಆರೋಪ ಹೊರಿಸಿದರು. ಅಧಿಕಾರಕ್ಕೆ ಬಂದ ತನಿಖೆ ನೆಪದಲ್ಲಿ ಮುಗಿದ ಕಾಮಗಾರಿಗಳ ಬಿಲ್ ಪಾವತಿ ವಿಳಂಬ ಮಾಡುತ್ತಿದ್ದು, ಕಮಿಷನ್​ಗೆ ಒತ್ತಡ ಹೇರಲಾಗುತ್ತಿದೆ ಎಂದು ಕೆಲವು ಗುತ್ತಿಗೆದಾರರು ರಾಜ್ಯಪಾಲರಿಗೆ ದೂರು ಸಲ್ಲಿಸಿದರು.
ಕೈಗೆ ಸಂಬಂಧ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ವೇಳೆ ಗುತ್ತಿಗೆದಾರ ಅಂಬಿಕಾಪತಿ ನಿವಾಸದಲ್ಲಿ 42 ಕೋಟಿ ರೂ. ನಗದು ಪತ್ತೆ ಹಚ್ಚಿದ್ದಾರೆ. ಈ ಹಣಕ್ಕೂ ಕೈಗೂ ನೇರ ಸಂಬಂಧವಿದ್ದು, ಆಂತರಿಕವಾದ ನಂಟಿದೆ ಅಶ್ವತ್ಥ ನಾರಾಯಣ ಗಂಭೀರ ಆರೋಪ ಮಾಡಿದರು. ಪಂಚರಾಜ್ಯಗಳ ಚುನಾವಣೆ ಖರ್ಚಿಗಾಗಿ ಈ ಹಣ ಸಾಗಿಸುವ ಹವಣಿಕೆಯಲ್ಲಿದ್ದರು ಎನ್ನಲಾಗಿದ್ದು, ಹೈಕಮಾಂಡ್ ತೃಪ್ತಿಪಡಿಸಲು ರಾಜ್ಯ ನಾಯಕರು ಸಾಕಷ್ಟು ಕಸರತ್ತು ನಡೆಸುತ್ತಿರುವಂತಿದೆ ಎಂದು ಕಾಲೆಳೆದರು.
ಯಾವುದಕ್ಕೂ ನಾಳೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದಾ?; ವ್ಯಕ್ತಿಯೊಬ್ಬರಿಂದ ಆತಂಕಕಾರಿ ಪೋಸ್ಟ್​!

ಮಂಚದಡಿಯಲ್ಲಿ ಕೋಟಿಗಟ್ಟಲೆ ಹಣ!; ತಿರುಗುಬಾಣ ಆಗಲಿದೆಯೇ 40% ಕಮಿಷನ್ ಪ್ರಕರಣ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + fifteen =
Remember me
