ಬೆಂಗಳೂರು:ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ಐಟಿ ಅಧಿಕಾರಿಗಳು ರಾಜ್ಯದ ಹಲವೆಡೆ ದಾಳಿ ನಡೆಸಿ, ಅಕ್ರಮಗಳನ್ನು ಬಯಲಿಗೆಳೆಯುತ್ತಿದ್ದಾರೆ. ಇದೀಗ ಮೈಸೂರಿನಲ್ಲಿ ಕೆ.ಸುಬ್ರಹ್ಮಣ್ಯ ರೈ ಎಂಬುವವರ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ಗೆ ಬಡಿದ ರಣಹದ್ದು; ಗ್ಲಾಸ್​ ಪುಡಿಪುಡಿ, ತಪ್ಪಿದ ಅನಾಹುತ
ಐಟಿ ಅಧಿಕಾರಿಗಳು ಕೆ.ಸುಬ್ರಹ್ಮಣ್ಯ ರೈ ಎಂಬುವವರ ಮನೆಗೆ ದಾಳಿ ನಡೆಸಿ, ಅವರ ಮನೆಯಂಗಳದಲ್ಲಿದ್ದ ಗಿಡದಲ್ಲಿ ನೇತು ಹಾಕಿದ್ದ ಒಂದು ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಖಚಿತ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಬಿಜೆಪಿ ಸರ್ಕಾರ ಅಭಿವೃದ್ಧಿ ಕೆಲಸ ಮಾಡದೆ ದುರಾಸೆ, ಲೂಟಿಯಲ್ಲಿ ತೊಡಗಿದೆ: ಪ್ರಿಯಾಂಕಾ ಗಾಂಧಿ
ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಮರದಲ್ಲಿ ನೇತು ಹಾಕಿದ್ದ ಹಣವನ್ನು ವಶಪಡಿಸಿಕೊಂಡಿರುವ ಫೋಟೋಗಳು ಸದ್ಯ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಐಟಿ ದಾಳಿಗೆ ಒಳಗಾಗಿರುವ ಸುಬ್ರಹ್ಮಣ್ಯ ರೈ ಅವರು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಸಹೋದರ ಎಂದು ತಿಳಿದು ಬಂದಿದೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:19 − 5 =
Remember me
