ಬೆಂಗಳೂರು:ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಹೈಗ್ರೌಂಡ್ಸ್ ಬಳಿಯಿರುವ ಕೆಜಿಎಫ್ ಬಾಬು ಮನೆಗೆ ದಾಳಿ ಮಾಡಿದ್ದಾರೆ. ಕೆಜಿಎಫ್ ಬಾಬು ನಿವಾಸದ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಕೆಜಿಎಫ್ ಬಾಬು ಸೇರಿದಂತೆ ರಾಜ್ಯದ ವಿವಿಧೆಡೆ ಕೆಲ ಕಾಂಗ್ರೆಸ್ ನಾಯಕರ ಮನೆ ಮೇಲೆಯೂ ಐಟಿ ದಾಳಿ ನಡೆದಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಗೊಂದಲ ಸೃಷ್ಟಿ ಬೇಡ, ಚನ್ನಪಟ್ಟಣದಲ್ಲಿ ಸಮರ್ಥ ಅಭ್ಯರ್ಥಿ ಇದ್ದಿದ್ದರೆ ಮಂಡ್ಯದಿಂದ ಸ್ಪರ್ಧಿಸುತ್ತಿದ್ದೆ; ಎಚ್​ಡಿಕೆ
ಐಟಿ ಅಧಿಕಾರಿಗಳು ಕೆಜಿಎಫ್‌ ಬಾಬುಗೆ ಸೇರಿದ ರಕ್ಸಾನಾ ಪ್ಯಾಲೇಸ್‌ ಹಾಗೂ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಆದಾಯ ತೆರಿಗೆ ವಂಚನೆ ಹಿನ್ನೆಲೆ ಐಟಿ ಅಧಿಕಾರಿಗಳು ಕೆಜಿಎಫ್ ಬಾಬು ಮನೆಗೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗದೆ. ಆದಾಯ ತೆರಿಗೆ ವಂಚನೆಯಡಿ, ಕಳೆದ ವರ್ಷ ಕೆಜಿಎಫ್‌ ಬಾಬು ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಇದನ್ನೂ ಓದಿ:ಕದನ ಕಣದಲ್ಲಿ ತೊಡೆತಟ್ಟಿದ ಕೋಟಿವೀರರು; ಇಲ್ಲಿದೆ ಶತಕೋಟ್ಯಧೀಶ ರಾಜಕಾರಣಿಗಳ ಒಟ್ಟು ಆಸ್ತಿ ವಿವರ…
ಕೆಜಿಎಫ್‌ ಬಾಬು ಈ ಬಾರಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದರು. ಕಾಂಗ್ರೆಸ್​ನಿಂದ ಟಿಕೆಟ್ ಪಡೆಯಲು ಸಾಕಷ್ಟು ಕಸರತ್ತು ನಡೆಸಿದ್ದರು. ಆದರೆ ತನ್ನ ಬಹಿರಂಗ ಹೇಳಿಕೆಗಳ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅಸಮಾಧಾನಕ್ಕೂ ಕಾರಣವಾಗಿದ್ದರು. ಅಂತಿಮವಾಗಿ ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಅಮಾನತು ಮಾಡಿತ್ತು. ಇದೀಗ ಚುನಾವಣೆಯಲ್ಲಿ ಚಿಕ್ಕಪೇಟೆ ಕ್ಷೇತ್ರದಿಂದ ಕೆಜಿಎಫ್ ಬಾಬು ಪತ್ನಿ ಶಾಝಿಯಾ ತರನ್ನುಮ್‌ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
