ಬೆಂಗಳೂರು:ಯುವಜನರಿಗೆ ವೃತ್ತಿಪರ ಶಿಕ್ಷಣ ಹಾಗೂ ಉದ್ಯೋಗಾವಕಾಶ ಕಲ್ಪಿಸುವುದು, ಗ್ರಾಮೀಣ ಮಹಿಳೆಯರು ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಲು ಪೂರಕವಾದ ಎರಡು ಒಪ್ಪಂದಗಳಿಗೆ ಸರ್ಕಾರ ಸಹಿ ಹಾಕಿದೆ. ಐಟಿಐ ಪರೀಕ್ಷೆಯ ಸುಧಾರಣೆ ಹಾಗೂ ಗ್ರಾಮೀಣ ಮಹಿಳೆಯರಿಗೆ ಹೈನುಗಾರಿಕೆ ಮೂಲಕ ಜೀವನೋಪಾಯ ಕಲ್ಪಿಸಿಕೊಡುವ ಕ್ಷೀರ ಸಂಜೀವಿನಿ ಯೋಜನೆಗಳು ಈ ಒಪ್ಪಂದದಲ್ಲಿವೆ. ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸಮಕ್ಷಮದಲ್ಲಿ ಸೋಮವಾರ ಬೆಂಗಳೂರಿನಲ್ಲಿ ಸಂಬಂಧಿತ ಅಧಿಕಾರಿಗಳು ಒಡಂಬಡಿಕೆಗೆ ಸಹಿ ಹಾಕಿದರು.
ಐಟಿಐ ಮತ್ತು ಪರೀಕ್ಷಾ ಪ್ರಾಧಿಕಾರ: ಐಟಿಐ (ಎನ್​ಸಿವಿಟಿ ಮತ್ತು ಎಸ್​ಸಿವಿಟಿ) ಪರೀಕ್ಷೆಗಳನ್ನು ರಾಜ್ಯ ವೃತ್ತಿಪರ ತರಬೇತಿ ಸಂಸ್ಥೆ ಬದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೂಲಕ ನಿರ್ವಹಿಸುವುದು ಈ ಒಪ್ಪಂದದ ಉದ್ದೇಶ. ಈ ಒಪ್ಪಂದಕ್ಕೆ ಕೌಶಲಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್ ಹಾಗೂ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರ್​ನಾಯಕ್ ಸಹಿ ಹಾಕಿ, ಉಪಮುಖ್ಯಮಂತ್ರಿ ಸಮಕ್ಷಮದಲ್ಲಿ ದಾಖಲೆ ವಿನಿಮಯ ಮಾಡಿಕೊಂಡರು.
ವೃತ್ತಿಪರ ತರಬೇತಿ ಸಂಸ್ಥೆ ನಡೆಸುತ್ತಿದ್ದ ಐಟಿಐ ಪರೀಕ್ಷೆ ಬಗ್ಗೆ ತೀವ್ರ ಆಕ್ಷೇಪಗಳಿದ್ದವು. ಪರೀಕ್ಷೆಯೂ ಪಾರದರ್ಶಕವಾಗಿ ನಡೆಯುತ್ತಿರಲಿಲ್ಲ ಎಂಬ ದೂರುಗಳೂ ಇದ್ದವು. ಈ ಹಿನ್ನೆಲೆಯಲ್ಲಿ ಐಟಿಐ ಪರೀಕ್ಷೆ ನಡೆಸುವ ಅಧಿಕಾರವನ್ನು ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಲಾಗುತ್ತಿದೆ. ಈ ಕುರಿತು ಮಾಹಿತಿ ನೀಡಿದ ಅಶ್ವತ್ಥನಾರಾಯಣ, ಇನ್ನುಮುಂದೆ ಕೈಗಾರಿಕಾ ತರಬೇತಿ ಇಲಾಖೆ ಸಹಕಾರದೊಂದಿಗೆ ಪರೀಕ್ಷೆ ಪ್ರವೇಶ ಪತ್ರಗಳ ಮುದ್ರಣ, ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವುದು, ಆಯಾ ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಪರೀಕ್ಷೆಗಳನ್ನು ನಡೆಸುವುದು, ಉತ್ತರ ಪತ್ರಿಕೆಗಳ ಮೌಲ್ಯಮಾಪನ, ಫಲಿತಾಂಶ ಪ್ರಕಟಣೆ ಇತ್ಯಾದಿ ಕಾರ್ಯಗಳನ್ನು ಪರೀಕ್ಷಾ ಪ್ರಾಧಿಕಾರವೇ ಮಾಡುತ್ತದೆ ಎಂದು ತಿಳಿಸಿದರು.
ಸ್ತ್ರೀಯರಿಗೆ ಕ್ಷೀರ ಸಂಜೀವಿನಿ
ಕ್ಷೀರ ಸಂಜೀವಿನಿ ಯೋಜನೆಯ ಒಪ್ಪಂದ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ-ಸಂಜೀವಿನಿ ಹಾಗೂ ಕೆಎಂಎಫ್ ನಡುವೆ ಏರ್ಪಟ್ಟಿದೆ. ಈ ಒಪ್ಪಂದಕ್ಕೆ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ-ಸಂಜೀವಿನಿಯ ನಿರ್ದೇಶಕಿ ಚಾರುಲತಾ ಹಾಗೂ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಸತೀಶ್ ಸಹಿ ಹಾಕಿದರು. ಈಗಾಗಲೆ ಈ ಯೋಜನೆಯ ಮೊದಲ ಹಂತ ಜಾರಿಯಾಗಿದ್ದು, 2ನೇ ಹಂತಕ್ಕಾಗಿ ಒಡಂಬಡಿಕೆ ಆಗಿದೆ. ಇದರ ಬಗ್ಗೆ ಮಾಹಿತಿ ನೀಡಿದ ಡಿಸಿಎಂ ಅಶ್ವತ್ಥನಾರಾಯಣ, ಮೊದಲ ಹಂತದಲ್ಲಿ ಗ್ರಾಮೀಣ ಪ್ರದೇಶದ ಒಟ್ಟು ಹತ್ತು ಸಾವಿರದಷ್ಟು ಬಡ ಮತ್ತು ಕಡುಬಡ ಕುಟುಂಬಗಳ ಮಹಿಳೆಯರನ್ನು ಗುರುತಿಸಿ, 9,945 ಹೈನು ರಾಸು ಖರೀದಿಸಿ ವಿಮೆ ಮಾಡಿ ಮಾಡಿಸಲಾಗಿದೆಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − five =
Remember me
