ಬಳ್ಳಾರಿ:ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ ಸೋಮವಾರ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ. ಈ ಸಂಬಂಧ ರಾಜ್ಯ ಸರ್ಕಾರ ರಾಜ್ಯಪತ್ರದ ಮೂಲಕ ಅಂತಿಮ ಅಧಿಸೂಚನೆ ಹೊರಡಿಸಿದೆ. 2020ರ ಡಿ.14ರಂದು ಕರಡು ಅಧಿಸೂಚನೆ ಹೊರಡಿಸಿ ಆಕ್ಷೇಪಣೆ ಹಾಗೂ ಸಲಹೆ ಆಹ್ವಾನಿಸಲಾಗಿತ್ತು. ಇವುಗಳನ್ನು ಪರಿಗಣಿಸಿ ಬಳ್ಳಾರಿ ಜಿಲ್ಲೆಯ ಸರಹದ್ದುಗಳನ್ನು ಮಾರ್ಪಡಿಸಿ ವಿಜಯನಗರ ಜಿಲ್ಲೆ ರಚಿಸಲಾಗಿದೆ. ಆರು ತಾಲೂಕುಗಳಾದ ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನ ಹಡಗಲಿ ಹಾಗೂ ಹರಪನಹಳ್ಳಿ ಒಳಗೊಂಡು ಹೊಸಪೇಟೆ ಕೇಂದ್ರಸ್ಥಾನವಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದಿದೆ. ವಿಜಯನಗರ ಜಿಲ್ಲೆಯು ಪೂರ್ವಕ್ಕೆ ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆ, ಪಶ್ಚಿಮಕ್ಕೆ ಗದಗ ಮತ್ತು ಹಾವೇರಿ ಜಿಲ್ಲೆ, ಉತ್ತರಕ್ಕೆ ಕೊಪ್ಪಳ ಜಿಲ್ಲೆ, ದಕ್ಷಿಣಕ್ಕೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕುಗಳ ಸರಹದ್ದು ಹೊಂದಿರಲಿದೆ.
ಬಳ್ಳಾರಿ, ಕುರುಗೋಡು, ಸಿರಗುಪ್ಪ, ಕಂಪ್ಲಿ ಮತ್ತು ಸಂಡೂರು ಈ ಐದು ತಾಲೂಕುಗಳು ಬಳ್ಳಾರಿ ಜಿಲ್ಲೆಯಲ್ಲಿ ಮುಂದುವರಿಯಲಿವೆ. ಬಳ್ಳಾರಿ ಜಿಲ್ಲೆಯು ಪೂರ್ವ ಮತ್ತು ದಕ್ಷಿಣಕ್ಕೆ ಆಂಧ್ರಪ್ರದೇಶ, ಪಶ್ಚಿಮಕ್ಕೆ ವಿಜಯನಗರ ಜಿಲ್ಲೆ, ಉತ್ತರಕ್ಕೆ ರಾಯಚೂರು ಜಿಲ್ಲೆಯ ಸರಹದ್ದು ಹೊಂದಿರಲಿದೆ. ಈ ಅಧಿಸೂಚನೆಯು ರಾಜ್ಯಪತ್ರದಲ್ಲಿ ಪ್ರಕಟವಾದ ದಿನದಿಂದಲೇ ಜಾರಿಗೆ ಬರಲಿದೆ ಎಂದು ಕಂದಾಯ ಇಲಾಖೆಯ ಭೂ ಮಾಪನ ವಿಭಾಗದ ಅಧೀನ ಕಾರ್ಯದರ್ಶಿ ವಿ.ಟಿ.ರಾಜ್ಯಶ್ರೀ ರಾಜ್ಯಪಾಲರ ಹೆಸರಿನಲ್ಲಿ ರಾಜ್ಯಪತ್ರ ಪ್ರಕಟಿಸಿದ್ದಾರೆ.
ನಮ್ಮ ಬಹಳ ದಿನಗಳ ಬೇಡಿಕೆ ಈಡೇರಿದೆ. ನಮ್ಮ ಸಂಕಲ್ಪ ಹಾಗೂ ವಿರೂಪಾಕ್ಷೇಶ್ವರನ ಆಶೀರ್ವಾದದಿಂದ ವಿಜಯನಗರ ಜಿಲ್ಲೆ ರಚನೆಯಾಗಿದೆ. ವಿಜಯನಗರ ವೈಭವವನ್ನು ಸಂಭ್ರಮದಿಂದ ಆಚರಿಸಲಾಗುವುದು. ದೊಡ್ಡಮಟ್ಟದಲ್ಲಿ ವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜಿಸಿ ಸಿಎಂ ಯಡಿಯೂರಪ್ಪ, ಸಚಿವರು ಹಾಗೂ ಕೇಂದ್ರದ ನಾಯಕರನ್ನು ಆಹ್ವಾನಿಸಲಾಗುವುದು.
|ಆನಂದ ಸಿಂಗ್ಮೂಲಸೌಕರ್ಯ, ಹಜ್ ಮತ್ತು ವಕ್ಪ್ ಸಚಿವ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one + 3 =
Remember me
