ಬೆಂಗಳೂರು:ಮಸ್ಕಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ 15,000ಕ್ಕೂ ಹೆಚ್ಚು ಮತಗಳ ಅಂತರದಿಂದ ಮುನ್ನಡೆ ಸಾಧಿಸುತ್ತಿದ್ದಂತೆಯೇ‌ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಹಾಗೂ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೋಲು- ಗೆಲುವು ಸಮಭಾವದಿಂದ ಸ್ವೀಕರಿಸೋಣವೆಂದು ಟ್ವೀಟ್ ಮಾಡಿದ್ದಾರೆ.
ಮತಗಳ ಎಣಿಕೆ ಮುಗಿದು ಅಧಿಕೃತ ಫಲಿತಾಂಶ ಪ್ರಕಟವಾಗುವ ಮುನ್ನವೇ ಜನಾದೇಶಕ್ಕೆ ತಲೆಬಾಗುತ್ತಾ ಸೋಲು-ಗೆಲುವು ಸಮಭಾವದಿಂದ ಸ್ವೀಕರಿಸೋಣ. ಮಸ್ಕಿ ಕ್ಷೇತ್ರದ ಕಾರ್ಯಕರ್ತರು ಎದೆಗುಂದುವುದು ಬೇಡವೆಂದು ಹುರಿದುಂಬಿಸಿದ್ದಾರೆ.
ಕ್ಷೇತ್ರದ ಚುನಾವಣಾ ಉಸ್ತುವಾರಿಗಳಲ್ಲಿ ಒಬ್ಬರಾದ ಬಿ.ವೈ.ವಿಜಯೇಂದ್ರ ತಮ್ಮದೇ ಆದ ತಂಡ ರಚಿಸಿಕೊಂಡು ಕೆ.ಆರ್.ಪೇಟೆ ಹಾಗೂ ಶಿರಾ ಮಾದರಿಯಲ್ಲಿ ಕಾರ್ಯತಂತ್ರ ರೂಪಿಸಿದ್ದನ್ನು ಸ್ಮರಿಸಬಹುದು.
ಜನಾದೇಶಕ್ಕೆ ತಲೆಬಾಗುತ್ತಾ ಚುನಾವಣೆಗಳಲ್ಲಿ ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸೋಣ. ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ.ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮಮೇಲಿದೆ. ಕಾರ್ಯಕರ್ತನಾಗಿ ಸದಾ ನಿಮ್ಮೊಂದಿಗಿರುವೆ.ಬಿಜೆಪಿ ಬೆಂಬಲಿಸಿದ ಮತದಾರ ಬಂಧುಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವೆ.🙏
— Vijayendra Yeddyurappa (@BYVijayendra)May 2, 2021

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
