ಉಡುಪಿ:ಕರೊನಾ ಲಸಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದರೆ ನಿಮಗೆ ಒಳ್ಳೆಯದಾಗುವುದಿಲ್ಲ ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರಿಗೆ ಸಚಿವ ಮಾಧುಸ್ವಾಮಿ ತಿರುಗೇಟು ನೀಡಿದರು.
ವ್ಯಾಕ್ಸಿನ್ ಬೋಗಸ್ ಎಂದಿರುವ ಡಿ.ಕೆ ಶಿವಕುಮಾರ್​ ವಿರುದ್ಧ ವಾಗ್ದಾಳಿ ನಡೆಸಿದ ಮಾಧುಸ್ವಾಮಿ, ದೇಶದಲ್ಲಿ 80 ಕೋಟಿ ಜನಕ್ಕೆ ಉಚಿತ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಇದಕ್ಕಾಗಿ ರಾಜ್ಯ ಸರ್ಕಾರ 2000 ಕೋಟಿ ರೂಪಾಯಿ ತೆಗೆದಿಟ್ಟಿದೆ. ಡಿಕೆಶಿ ಪಾಪದ ಮಾತಿನಿಂದ ಯಾರಿಗೂ ಒಳ್ಳೆಯದಾಗುವುದಿಲ್ಲ. ಟೀಕೆ ಮಾಡುವುದನ್ನು ಮಾಡಿ ಅದು ನಿಮ್ಮ ಡ್ಯೂಟಿ ಎಂದು ಜರಿದರು.
ವಿರೋಧ ಪಕ್ಷದಲ್ಲಿ ನನಗಿಂತ ಚೆನ್ನಾಗಿ ಕೆಲಸ ಮಾಡಿದವರು ಯಾರು ಇಲ್ಲ. ನೈಸರ್ಗಿಕ ಆಪತ್ತಿನ ಕಾಲದಲ್ಲಿ ಎಲ್ಲವನ್ನು ಟೀಕೆ ಮಾಡಬಾರದು. ವ್ಯಾಕ್ಸಿನ್ ಉತ್ಪಾದನೆ ಮಾಡಲು ಕಂಪನಿಯವರಿಗೂ ಕಾಲಾವಕಾಶ ಬೇಕು. ಮುಂದಿನ ಮೂರು ತಿಂಗಳಲ್ಲಿ ರಾಜ್ಯದಲ್ಲಿ ಲಸಿಕೆ ಅಭಿಯಾನ ಮುಗಿಯುತ್ತದೆ. ಇದು ಡಿಕೆಶಿ ಅವರ ಬದುಕಿನ ಪ್ರಶ್ನೆ ಹೀಗಾಗಿ ವಿರೋಧ ಮಾಡುತ್ತಾರೆಂದು ಕಿಡಿಕಾರಿದರು.
ಬಿಜೆಪಿಗೆ ಯಾರಾದರೂ ಬರುವುದಿದ್ದರೆ ಬರಲಿ. ಬೇರೆ ಪಕ್ಷದಿಂದ ಬಿಜೆಪಿಗೆ ಬರುವುದಾದರೆ ಸ್ವಾಗತ. ವಿಸ್ತರಣೆ ರಾಜಕೀಯ ಎಲ್ಲಾ ಪಕ್ಷಗಳ ಉದ್ದೇಶ ಆಗಿರುತ್ತದೆ. ಕಾಂಗ್ರೆಸ್​ನಿಂದ ಯಾರಾದರೂ ಬರುವವರಿದ್ದರು ನಾವು ಸ್ವಾಗತಿಸುತ್ತೇವೆ ಎಂದು ಉಡುಪಿಯಲ್ಲಿ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿಕೆ ನೀಡಿದರು.(ದಿಗ್ವಿಜಯ ನ್ಯೂಸ್​)
ಪತ್ನಿಗೆ ಇಂಜಿನಿಯರ್ ನೀಡಿದ ಅಸಾಮಾನ್ಯ ಗಿಫ್ಟ್‌: ಮಹಿಳೆಯರಿಂದ ಜಾಲತಾಣದಲ್ಲಿ ಶ್ಲಾಘನೆಗಳ ಮಹಾಪೂರ

92 ವಿದೇಶಿಗರನ್ನು ಹೊತ್ತೊಯ್ಯುತ್ತಿದ್ದ ಫಿಲಿಪೈನ್ಸ್​ ಮಿಲಿಟರಿ ವಿಮಾನ ಪತನ: 17 ಮಂದಿ ದುರಂತ ಸಾವು

ನಕಲಿ ಐಡಿ, ಪ್ರೀತಿ, ಕೊಲೆ, ಆತ್ಮಹತ್ಯೆ! ಮಗು ಸೇರಿ ಮೂವರ ಪ್ರಾಣ ಕಸಿದ ಫೇಸ್​ಬುಕ್​ ಟೈಮ್​ ಪಾಸ್ ಲವ್​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
