ಮಂಗಳೂರು:ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರಾರ್ಥ ರಾಜ್ಯಕ್ಕೆ ಆಗಮಿಸಿರುವ ಅವರು ಪ್ರವೀಣ್ ಮನೆಗೆ ಭೇಟಿ ನೀಡಿದರು.
ಇದನ್ನೂ ಓದಿ:ಮದುವೆ ಆಮಂತ್ರಣ ಪತ್ರಿಕೆ ನೀಡಲು ಹೋಗಿದ್ದ ಸಹೋದರಿಯರಿಬ್ಬರ ಸಾವು!
ತುಂಬಾ ದುಃಖದಾಯಕ ಘಟನೆ ನಡೆದು ಹೋಗಿದೆ. ಎಸ್​ಡಿಪಿಐ ಮತ್ತು ಪಿಎಫ್ಐ ಈ ಹತ್ಯೆಯ ಹಿಂದಿದ್ದು, ಇದು ಖಂಡನೀಯ. ಈ ಘಟನೆ‌ ನಂತರ ಆ ಸಂಘಟನೆಯನ್ನು ನಿಷೇಧ ಮಾಡಲಾಯಿತು. ನಮ್ಮ ಸರ್ಕಾರ ನಿಷೇಧ ಮಾಡಿ ಎನ್ಐಎ ತನಿಖೆ ಮಾಡುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ:‘ತಿನ್ನಲ್ಲ, ತಿನ್ನೋಕೂ ಬಿಡಲ್ಲ’ ಎನ್ನುವ ಮೋದಿ ಅಕ್ಕಪಕ್ಕದಲ್ಲೇ ಇದ್ದಾರೆ ತಿನ್ನೋರು!: ಖರ್ಗೆ
ಪ್ರವೀಣ್ ಅವರ ಕುಟುಂಬಕ್ಕೆ ಸಂವೇದನಾಶೀಲ ಸರ್ಕಾರ ಎಲ್ಲವನ್ನೂ ಮಾಡಿದೆ. ಇಂಥ ಮಾನಸಿಕತೆ ವಿರುದ್ಧ ನಮ್ಮ ಹೋರಾಟ ನಿರ್ಣಾಯಕ ಘಟ್ಟದವರೆಗೂ ಮುಂದುವರಿಯಲಿದೆ. ನ್ಯಾಯ ಸಿಗುವವರೆಗೂ ಹೋರಾಟ ಇರಲಿದೆ. ಅವರ ಕುಟುಂಬ ಸದಸ್ಯರ ಜೊತೆ ನಮ್ಮ ಸರ್ಕಾರ ಇರಲಿದೆ. ನಾನು ಅವರಿಗೆ ಶ್ರದ್ಧಾಂಜಲಿ ಅರ್ಪಿಸಿ ‌ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ. ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ನ್ಯಾಯ ಸಿಗುವವರೆಗೂ ವಿರಮಿಸುವುದಿಲ್ಲ, ಅವರ ಬಲಿದಾನ ಎಂದಿಗೂ ವ್ಯರ್ಥ ಆಗುವುದಿಲ್ಲ ಎಂದೂ ನಡ್ಡಾ ಹೇಳಿದರು.
ನೀವೆಷ್ಟು ಕೇಳ್ತೀರೋ ಅಷ್ಟು ಹಾಡುತ್ತೇನೆ, ನೀವು ಹೇಳಿದಷ್ಟು ಡ್ಯಾನ್ಸ್ ಮಾಡುತ್ತೇನೆ: ನಟ ಶಿವರಾಜಕುಮಾರ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
