ಬೆಂಗಳೂರು: ಮಾಜಿ‌ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ಹರಿಹಾಯ್ದಿದ್ದು, ಬಿಜೆಪಿ ನಾಯಕರಿಗೆ ಮಾಡಲು ಕೆಲವಿಲ್ಲ‌ ಎಂದೂ ಕೆಣಕಿದ್ದಾರೆ.
ಸರ್ಕಾರ ನೂರು ದಿನ ಪೂರೈಸಿದ ಹಿನ್ನೆಲೆ‌ ಬಿಜೆಪಿ‌ ನಾಯಕರು ಸರ್ಕಾರದ ವಿರುದ್ಧ ಚಾರ್ಜ್ ಶೀಟ್ ಬಿಡುಗಡೆ ಮಾಡುತ್ತಿರುವುದಕ್ಕೆ ಶೆಟ್ಟರ್ ಸಿಡಿಮಿಡಿಗೊಂಡರು.
ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಟೀಕೆಗಳನ್ನು ಮಾಡಿಕೊಂಡಿದ್ದಾರೆ. ವಿರೋಧ ಪಕ್ಷವಾಗಿ ಏನೋ ಮಾಡಬೇಕೆಂದು ಮಾಡುತ್ತಿದ್ದಾರೆ. ಚಾರ್ಜ್ ಶೀಟ್ ಬಿಡುಗಡೆ ಮಾಡುವುದರಲ್ಲಿ ಅರ್ಥವಿಲ್ಲ. ಮೊದಲು ವಿರೋಧ ಪಕ್ಷದ ನಾಯಕರನ್ನು ನೇಮಕ‌ ಮಾಡಿಕೊಳ್ಳಲಿ. ಪಕ್ಷ ಬಿಡುವವರ ಬಗ್ಗೆ ಕಾಳಜಿ ವಹಿಸಲಿ ಎಂದು ಬುದ್ಧಿವಾದ ಹೇಳಿದರು.
ಜನತೆ ಆಶೀರ್ವಾದದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ನೂರು ದಿನಗಳಲ್ಲಿ ಮಹತ್ವದ ತೀರ್ಮಾನಗಳನ್ನು ಮಾಡಿದೆ. ಚುನಾವಣೆಯಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸುತ್ತಿದೆ ಎಂದರು.
ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ದೊರೆತಿದ್ದು, ದೊಡ್ಡ ಪ್ರಮಾಣದಲ್ಲಿ ಮಹಿಳೆಯರು ನೋಂದಣಿಯಾಗಿದ್ದಾರೆ. ಗ್ಯಾರಂಟಿ ಬಗ್ಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:ten + 6 =
Remember me
