ಬೆಂಗಳೂರು:ಕಳೆದ ವರ್ಷ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಟಿಕೆಟ್​ ಕೈತಪ್ಪಿದಕ್ಕೆ ಅಸಮಾಧಾನಗೊಂಡು ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಗುರುವಾರ ಮಾತೃಪಕ್ಷಕ್ಕೆ ಮರಳಿದ್ದು, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಆಶಿಸಿದ್ದಾರೆ.
ಬಿಜೆಪಪಿ ಕೇಂದ್ರ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಜಗದೀಶ್​ ಶೆಟ್ಟರ್​, ಪಕ್ಷ ನನಗೆ ಹಲವು ಜವಾಬ್ದಾರಿಗಳನ್ನು ನೀಡಿದ್ದರು ಕಾರಣಾಂತರಗಳಿಂದ ನಾನು ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದೆ ಎಂದು ಹೇಳಿದ್ದಾರೆ.
On re-joining BJP, former Karnataka CM Jagadish Shettar says, "The party gave me a lot of responsibilities in the past. Due to some issues, I went to the Congress party. In the last 8-9 months, there were a lot of discussions, also BJP workers asked me to come back to the BJP.…pic.twitter.com/Es7R7CqGgz
ಇದನ್ನೂ ಓದಿ:ಬಿಗ್​ಬಾಸ್​-ನಟ ಕಿಚ್ಚ ಸುದೀಪ್​ ಕುರಿತು ಹೇಳಿಕೆ; ಯಾರೋ ನನ್ನ ಮಾತುಗಳನ್ನು ತಿರುಚಿದ್ದಾರೆ ಎಂದ ರಕ್ಷಕ್​ ಬುಲೆಟ್​
ಈ ಹಿಂದೆ ಪಕ್ಷ (ಬಿಜೆ‍ಪಿ) ನನಗೆ ಹಲವು ಜಬಾಬ್ದಾರಿಗಳನ್ನು ವಹಿಸಿತ್ತು. ಆದರೆ ಕೆಲವು ಕಾರಣಗಳಿಂದಾಗಿ, ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೆ. ಕಳೆದ 8–9 ತಿಂಗಳಿನಿಂದ ಹಲವು ಚರ್ಚೆಗಳು ನಡೆದವು. ಪಕ್ಷಕ್ಕೆ ಮರಳಿ ಬರುವಂತೆ ಬಿಜೆಪಿ ಕಾರ್ಯಕರ್ತರು ಕೇಳಿಕೊಂಡಿದ್ದರು. ನಾನು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಬೇಕು ಎಂದು ಬಿ.ಎಸ್. ಯಡಿಯೂರಪ್ಪ ಹಾಗೂ ಬಿ.ವೈ. ವಿಜಯೇಂದ್ರ ಬಯಸಿದ್ದರು.
ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ದೇಶದ ಶಕ್ತಿಯನ್ನು ಹೆಚ್ಚಿಸಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತ ಶಕ್ತಿಶಾಲಿ ರಾಷ್ಟ್ರವಾಗಿದೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬ ನಂಬಿಕೆಯೊಂದಿಗೆ ಪಕ್ಷಕ್ಕೆ ಮರು ಸೇರ್ಪಡೆಯಾಗುತ್ತಿದ್ದೇನೆ ಎಂದು ಜಗದೀಶ್​ ಶೆಟ್ಟರ್​ ಬಿಜೆಪಿ ಸೇರ್ಪಡೆ ಬಳಿಕ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 10 =
Remember me
