ಬೆಂಗಳೂರು:ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ಎಂಎಲ್​ಸಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ.  ಈ ಹೊಸ್ತಿಲಿಲ್ಲ ರಾಜೀನಾಮೆ ಪತ್ರ ವೈರಲ್​​ ಆಗಿದೆ.
ರಾಜೀನಾಮೆ ಪತ್ರದಲ್ಲಿ ಏನಿದೆ?:ಕರ್ನಾಟಕ ವಿಧಾನಪರಿಷತ್ತು ಸದಸ್ಯತ್ವಕ್ಕೆ ಈ ದಿನ ನಾನು ನನ್ನ ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಬೇಕಾಗಿ ವಿನಂತಿ. ಇಲ್ಲಿಯವರೆಗೆ ತಾವು ನೀಡಿದ ಸಹಕಾರಕ್ಕಾಗಿ ವಂದನೆಗಳು ಎಂದು ಬರೆದಿದ್ದಾರೆ.
ಪಕ್ಷ ಸೇರ್ಪಡೆಗೂ ಮುನ್ನ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಹಾಗೂ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಜೀನಾಮೆಗೂ ಮುನ್ನ ಶೆಟ್ಟರ್ ಅವರು ಹೊರಟ್ಟಿಗೆ ಕರೆ ಮಾಡಿ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದರು. ಈ ವೇಳೆ ಪತ್ರದ ಮೂಲಕ ಬೇಡ, ನೇರವಾಗಿ ಬಂದು ರಾಜೀನಾಮೆ ನೀಡುವಂತೆ ಸೂಚಿಸಿದ್ದರು.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿ, ವೈ ವಿಜಯೇಂದ್ರ, ಕೇಂದ್ರ ಸಚಿವ ಭುಪೇಂದ್ರ ಯಾದವ್​, ರಾಜೀವ್​ ಚಂದ್ರಶೇಖರ್​ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಮಲಗಿದ್ದಲ್ಲೇ ಹೃದಯಾಘಾತದಿಂದ ಪ್ರಾಣ ಬಿಟ್ಟ ಡಿಡಿಪಿಯು ಕೃಷ್ಣಪ್ಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 12 =
Remember me
