ಹುಬ್ಬಳ್ಳಿ:ಕಾಂಗ್ರೆಸ್​ ನಾಯಕತ್ವ ದುರ್ಬಲವಾಗಿದೆ, ಸಿದ್ದರಾಮಯ್ಯ ದುರ್ಬಲ ನಾಯಕ ಎಂದು ಬೃಹತ್​ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್​ ಹೇಳಿದರು.
ಬಿ.ಎಸ್​.ಯಡಿಯೂರಪ್ಪನವರು ದುರ್ಬಲ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯನವರು ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್​ ಗುಂಡೂರಾವ್​ ರಾಜೀನಾಮೆ ನೀಡಿ ಹಲವು ದಿನಗಳೇ ಕಳೆದರೂ ಆ ಸ್ಥಾನಕ್ಕೆ ಸೂಕ್ತರನ್ನು ನೇಮಕ ಮಾಡುವ ಶಕ್ತಿ ಕಾಂಗ್ರೆಸ್​ಗಿಲ್ಲ. ಕಾಂಗ್ರೆಸ್​ ಹೈಕಮಾಂಡ್ ಮೊದಲು ತನ್ನ ದೌರ್ಬಲ್ಯ ಸರಿಪಡಿಸಿಕೊಳ್ಳಲಿ ಎಂದು ಹೇಳಿದರು.
ಸಚಿವ ಸಂಪುಟದ ಬಗ್ಗೆ ಮಾತನಾಡಿದ ಅವರು, ಈಗಾಗಲೇ ಸಂಪುಟ ವಿಸ್ತರಣೆಯಾಗಿದೆ. ಖಾತೆ ಹಂಚಿಕೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಬಿಟ್ಟ ವಿಚಾರ ಎಂದರು.ಹೊರಟ್ಟಿಗೆ ಬಹಿರಂಗ ಆಹ್ವಾನ
ಮಾಜಿ ಸಚಿವ, ವಿಧಾನಪರಿಷತ್​ ಸದಸ್ಯ ಬಸವರಾಜ್​ ಹೊರಟ್ಟಿಯವರಿಗೆ ಬಿಜೆಪಿಗೆ ಬರುವಂತೆ ಜಗದೀಶ್​ ಶೆಟ್ಟರ್​ ಬಹಿರಂಗವಾಗಿ ಆಹ್ವಾನ ನೀಡಿದರು.
ಇಬ್ಬರೂ ನಾಯಕರು ಹುಬ್ಬಳ್ಳಿಯ ಖಾಸಗಿ ಹೋಟೆಲ್​ಗೆ ಖಾಸಗಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದರು.ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಹೊರಟ್ಟಿ, ನನಗೆ ಇದುವರೆಗೂ ಬಿಜೆಪಿಯಿಂದ ಯಾರೂ ಆಹ್ವಾನ ನೀಡಿಲ್ಲ ಎಂದರು.
ಪಕ್ಕದಲ್ಲಿಯೇ ನಿಂತಿದ್ದ ಜಗದೀಶ್​ ಶೆಟ್ಟರ್​ ಅವರು ಅದಕ್ಕೆ ಪ್ರತಿಕ್ರಿಯೆ ನೀಡುತ್ತ, ಹೊರಟ್ಟಿಯವರು ಹಿರಿಯ ರಾಜಕಾರಣಿ. ಅವರೇ ಒಪ್ಪಿ ಬಿಜೆಪಿಗೆ ಬರುವುದಾದರೆ ಖಂಡಿತ ಸ್ವಾಗತಿಸುತ್ತೇವೆ ಎಂದು ಹೇಳಿದರು.ಆದರೆ ಸದ್ಯಕ್ಕೆ ಯಾವುದೇ ನಿರ್ಧಾರ ಇಲ್ಲ, ಮುಂದೆ ನೋಡೋಣ ಎಂದು ಹೊರಟ್ಟಿ ಹೇಳಿದರು. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 3 =
Remember me
