ಹುಬ್ಬಳ್ಳಿ:ಪಕ್ಷದ ವರಿಷ್ಠರ ಜೊತೆ ಚರ್ಚಿಸಿ ಸೂಕ್ತ ಸ್ಥಾನಮಾನ ನೀಡುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್​ ಭರವಸೆ ನೀಡಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಡಿಕೆಶಿ ಜೊತೆಗಿನ ಭೇಟಿ ನಂತರ ಮಾತನಾಡಿದ ಶೆಟ್ಟರ್​ ಅವರ ಜೊತೆ ಔಪಚಾರಿಕವಾದ ಮಾತುಕತೆಯಾಗಿದೆ ಉತ್ತರ ಕರ್ನಾಟಕ ಭಾಗದ ಸಂಘಟನೆ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆ ಕುರಿತು ಚರ್ಚಿಸಿದ್ಧೇವೆ ಪಕ್ಷವನ್ನ ಇನ್ನೂ ಹೆಚ್ಚಿನ ರೀತಿಯಲ್ಲಿ ಬಲ‌ಪಡಿಸುವ ನಿಟ್ಟಿನಲ್ಲಿ ಮಾತುಕತೆಯಾಗಿದೆ ಎಂದು ತಿಳಿಸಿದ್ದಾರೆ.
ಚುನಾವಣಾ ತಯಾರಿ ಬಗ್ಗೆ ಸೌಹಾರ್ದತೆಯಿಂದ ಮಾತುಕತೆ ನಡೆಸಿದ್ದೇವೆ ಅವರು ಸಹ ಕೆಲ ವಿಚಾರಗಳನ್ನು ಪ್ರಸ್ತಾಪಿಸಿದ್ಧಾರೆ. ಪಕ್ಷ ನನ್ನ ಜೊತೆಗಿದೆ ಅನ್ನೋ ಭರವಸೆಯನ್ನು ನೀಡಿದ್ದಾರೆ.
ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ತಯಾರಿ ನಡೆಸುವ ಕುರಿತು ಚರ್ಚಿಸಿದ್ದೇವೆ. ಪಕ್ಷ ಸಂಘಟನೆ ಕುರಿತು ಕೆಲವು ಸೂಚನೆಗಳನ್ನು ನೀಡಿದ್ದಾರೆ ಎಂದು ಶೆಟ್ಟರ್​ ಹೇಳಿದ್ದಾರೆ.
ಇನ್ನು ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಯಾಗುವ ಕುರಿತು ಪ್ರತಿಕ್ರಿಯಿಸಿ ಧಾರವಾದ ಕ್ಷೇತ್ರಕ್ಕೆ ನನ್ನನ್ನು ಅಭ್ಯರ್ಥಿಯಾಗಿಸುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ನಾನು ಕಾಂಗ್ರೆಸ್​ಗೆ ಸೇರ್ಪಡೆಯಾಗಿರುವುದರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಹೆಚ್ಚಿನ ಲಾಭವಾಗಿದೆ ಎಂದು ಮಾಜಿ ಸಿಎಂ ಜಗದೀಶ್​ ಉಪಮುಖ್ಯಮಂತ್ರಿ ಡಿಕೆಶಿ ಬಳಿಕ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
