ಬೆಂಗಳೂರು:ಚುನಾವಣೆಗೆ ನಿಲ್ಲಲು ಟಿಕೆಟ್ ಸಿಕ್ಕಿಲ್ಲ ಎಂದು ತೀವ್ರ ಬೇಸರಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಜಗದೀಶ ಶೆಟ್ಟರ್ ಅವರ ಮುಂದಿನ ನಿರ್ಧಾರ ಏನು ಎಂಬುದು ಇನ್ನೂ ಪ್ರಶ್ನಾರ್ಥಕವಾಗಿಯೇ ಇದೆ. ಈ ನಡುವೆ ಅವರು ಮನಸು ಬದಲಿಸುವರೇ ಎಂಬ ಕುತೂಹಲ ಕೂಡ ಮೂಡಿದೆ.
ಇದನ್ನೂ ಓದಿ:ಮಾಜಿ ಸಿಎಂ ಜಗದೀಶ ಶೆಟ್ಟರ್ ರಾಜೀನಾಮೆ; ಅವರ ಸಹೋದರ ಎಂಎಲ್​ಸಿ ಪ್ರದೀಪ್ ಶೆಟ್ಟರ್ ನಿಲುವೇನು?
ಇಂದು ಬೆಂಗಳೂರಿಗೆ ಆಗಮಿಸಿರುವ ಅವರು ತಮ್ಮ ಮುಂದಿನ ನಡೆಯ ಕುರಿತಂತೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದು, ಯಾವುದೇ ತೀರ್ಮಾನ ತಳೆಯಲು ಇನ್ನೂ ಎರಡು ದಿನ ಕಾಯುವುದಾಗಿ ಹೇಳಿದ್ದಾರೆ. ನಾನು ಇನ್ನೂ ಪ್ರಾಥಮಿಕ‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ನಾನು ಪಕ್ಷ ಕಟ್ಟಿ ಬೆಳಿಸಿದ್ದೇನೆ, ಮುಂದಿನ ನಡೆ ಬಗ್ಗೆ ಚರ್ಚೆ ಮಾಡುತ್ತೇನೆ, ಇವೆಲ್ಲವನ್ನೂ ನೋಡ್ಕೊಂಡು ಮುಂದಿನ ತೀರ್ಮಾನ ಮಾಡುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ:ಪಕ್ಷಕ್ಕಾಗಿ ದುಡಿದಿದ್ದಾನಂತೆ ಸೈಲೆಂಟ್ ಸುನೀಲ್; ಆತ ಪಕ್ಷದ ಸದಸ್ಯನೇ ಅಲ್ಲ ಎಂದ ಕಟೀಲ್
ಯಾವುದೇ ರೀತಿಯಲ್ಲೂ ನನ್ನ ನೋವಿಗೆ ಪರಿಹಾರ ಸಿಕ್ಕಿಲ್ಲ. ನನಗೆ ತುಂಬಾ ನೋವಾಗಿದೆ. ನಾನು ಕಟ್ಟಿ ಬೆಳಿಸಿದ ಪಕ್ಷದಿಂದ ಅನ್ಯಾಯವಾಗಿದೆ ಎಂದ ಅವರು, ಬಿಜೆಪಿಯಿಂದ ಕೇಂದ್ರ ಮಂತ್ರಿ ಮತ್ತು ರಾಜ್ಯಪಾಲರ ಹುದ್ದೆಗೆ ಆಫರ್ ಕೊಟ್ಟಿದ್ದಾರೆ ಎಂಬುದಕ್ಕೆ, ‘ನಾನು ಕೇಳಿದ್ದು ಎಂಎಲ್​ಎ ಟಿಕೆಟ್ ಅದನ್ನೇ ಕೊಟ್ಟಿಲ್ಲ, ಅವರೆಲ್ಲ ಯಾಕೆ ಹೀಗೆ ಮಾತಾಡುತ್ತಿದ್ದಾರೆ ಅಂತ ಅರ್ಥ ಮಾಡಿಕೊಳ್ಳಿ’ ಎಂದಿದ್ದಾರೆ. ಅಲ್ಲದೆ ಇವತ್ತಲ್ಲ ನಾಳೆ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.
2023ರ ಅಂತಿಮ ಮತದಾರರ ಪಟ್ಟಿ: ಇಲ್ಲಿದೆ ಜಿಲ್ಲಾವಾರು, ಕ್ಷೇತ್ರವಾರು ವಿವರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
