ಹುಬ್ಬಳ್ಳಿ:ನನ್ನೊಬ್ಬನನ್ನ ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಷರತ್ತು ವಿಧಿಸಿ ಕಾಂಗ್ರೆಸ್ ಸೇರಿರಲಿಲ್ಲ. ಆದರೆ ನಾನು ಮಾಡಿದ ಸಂಘಟನೆ ನೋಡಿ ಹಲವಾರು ಜನ ನನಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದರು. ಆದರೆ ಸದ್ಯ ಒತ್ತಡ ಪರಿಸ್ಥಿತಿಯಿದೆ ಹೀಗಾಗಿ ಮುಂದೆ ಒಳ್ಳೆಯ ಸ್ಥಾನ ನೀಡುವ ಭರವಸೆ ಇದೆ. ಬೇರೆ ಬೇರೆ ಕಾರಣದಿಂದ ಸಚಿವ ಸ್ಥಾನ ನೀಡಿಲ್ಲ.ಇನ್ನೂ ಸಾಕಷ್ಟು ಅವಕಾಶಗಳಿವೆ ಅದನ್ನು ನೀಡುತ್ತಾರೆ ಅಂತ ಭರವಸೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಯಾವುದೇ ಚರ್ಚೆ ನಡೆದಿಲ್ಲ. ಕಾಂಗ್ರೆಸ್ ಪಾರ್ಟಿಗೆ ಅನ್ ಕಂಡೀಷನ್ ಆಗಿ ಬಂದಿದ್ದೇನೆ. ಕ್ಯಾಬಿನೆಟ್​​​ನಲ್ಲಿ ನಾನು ಮಿನಿಸ್ಟರ್ ಆಗಬೇಕು ಅನ್ನೋದು ಜನರ ಅಭಿಲಾಷೆ ಇತ್ತು. ಹಲವು ಕಾರಣದಿಂದ ಆಗಿಲ್ಲ. ಇನ್ನು ಹಲವಾರು ಸ್ಥಾನಮಾನಗಳಿವೆ. ಯಾವುದೇ ಸ್ಥಾನ ಕೊಟ್ರು ನಿಭಾಯಿಸಿ ಕೊಂಡು ಹೋಗುತ್ತೇನೆ. ಈಗಿನ ಸಂಪುಟ ರಚನೆ ನಂತರ ಕೂತು ಚರ್ಚಿಸುವ ಬಗ್ಗೆ ಮಾತಾಗಿದೆ. ವ್ಯಯಕ್ತಿಕವಾಗಿ ನಾನು ಯಾವುದೇ ಆಸೆ ವ್ಯಕ್ತಪಡಿಸಿಲ್ಲ. ನನ್ನೊಬ್ಬನನ್ನ ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ. ಯಾವರೀತಿ ಮುಂದೆ ಹೋಗಬೇಕು ಎಂಬ ಬಗ್ಗೆ ಕಾಂಗ್ರೆಸ್ ತೀರ್ಮಾನ ಮಾಡುತ್ತದೆ. ಕಾಂಗ್ರೆಸ್​ಗೆ ಜನ ಬೆಂಬಲ ನೀಡಿದ್ದಾರೆ ಎಂದಿದ್ದಾರೆ.
ಇದನ್ನೂ ಓದಿ:ಫ್ಯಾಷನ್ ಉದ್ಯಮಿಯೊಂದಿಗೆ ಎರಡನೇ ಮದುವೆಯಾದ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ!
ಒತ್ತಡದಲ್ಲಿ ಸ್ಥಾನಮಾನ ಕೊಡಲು ಆಗಲಿಲ್ಲ. ಲೋಕಸಭಾ ಚುನಾವಣೆಗೆ ಇನ್ನು ಒಂದು ವರ್ಷ ಇದೆ. ಕಾಂಗ್ರೆಸ್ ಯಾವ ಜವಾಬ್ದಾರಿ ನೀಡುತ್ತೆ ಅದನ್ನ ನಿಭಾಯಿಸುತ್ತೇನೆ. ಉತ್ತರ ಕರ್ನಾಟಕ ಭಾಗದ ನಾಯಕರಿಗೆ ಕೆಲವು ಪ್ರಮುಖ ಸ್ಥಾನ ಸಿಕ್ಕಿವೆ. ಸಾಕಷ್ಟು ಅವಕಾಶಗಳು ಉತ್ತರ ಕರ್ನಾಟಕದವರಿಗೆ ಸಿಕ್ಕಿವೆ. ಮುಂದಿನ ಕ್ಯಾಬಿನೆಟ್ ನಲ್ಲಿ ಒಂದು ನಿರ್ಧಾರ ಮಾಡುತ್ತೇವೆ. ಗ್ಯಾರೆಂಟಿ ಅನುಷ್ಠಾನ ಮಾಡಲು ಸ್ವಲ್ಪ ಸಮಯ ಬೇಕಾಗುತ್ತದೆ. ಪ್ರತಿಪಕ್ಷ ರಾಜಕೀಯವಾಗಿ ಬಳಸಿಕೊಳ್ತಾ ಇದ್ದಾರೆ. ಹೊಸ ಸರ್ಕಾರ ಬಂದಿದೆ. ರಾಜಕಾರಣದಲ್ಲಿ ತಾಳ್ಮೆ ಬೇಕಾಗುತ್ತದೆ. ಎಂ ಪಿ ಚುನಾವಣೆಗೆ ಯಾವ ರೀತಿ ತಯಾರಿ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆದಿದೆ ಎಂದು ತಿಳಿಸಿದ್ದಾರೆ.
ರಾಷ್ಟಪತಿಯನ್ನು ಕರಿಯಬೇಕಿತ್ತು. ನಾನು ಸುವರ್ಣ ಸೌಧ ಉದ್ಘಾಟನೆ ಮಾಡುವ ಅವಕಾಶ ಬಂತು. ನಾನು ರಾಷ್ಟಪತಿ ಪ್ರಣವ್ ಮುಖರ್ಜಿ ಅವರಿಗೆ ಕರದೇ ರಾಷ್ಟಪತಿಗಳನ್ನು ಕರೆಯಬೇಕು ಎಂಬುದು ಸರಿಯಾಗಿದೆ. ಶೆಟ್ಟರ್ ಸೋಲಿಗೆ ಕಾರಣ ವಿಚಾರ ಹಿರಿಯ ನಾಯಕರೊಂದಿಗೆ ಚರ್ಚೆ ಆಗಿಲ್ಲ. ಸವದಿ ಹಾಗೂ ನನಗೂ ಸಚಿವ ಸ್ಥಾನ ಸಿಗಬೇಕಿತ್ತು ಆದರೆ ಆಗಿಲ್ಲ. ಬಿಜೆಪಿಯಲ್ಲಿ ಪಕ್ಷ ಕಟ್ಟುವಂತವರು ಯಾರಿದ್ದಾರೆ? ರಾಜ್ಯದಲ್ಲಿ ಬಿಜೆಪಿಯನ್ನು ಈ ಪರಿಸ್ಥಿತಿ ತರಲು ಕಾರಣರಾದವರು ಈಗ ಎಲ್ಲಿದ್ದಾರೆ? ಇನ್ನೂ ನನ್ನ ಪ್ರಶ್ನೆಗೆ ಯಾರು ಉತ್ತರ ಕೊಟ್ಟಿಲ್ಲ. ಅವರೆಲ್ಲರೂ ಈಗ ನಾಪತ್ತೆಯಾಗಿದ್ದಾರೆ ಎಂದು ಪರೋಕ್ಷವಾಗಿ ಬಿಎಲ್ ಸಂತೋಷಗೆ ಶೆಟ್ಟರ್ ಟಾಂಗ್ ಕೊಟ್ಟಿದ್ದಾರೆ.
ವಿರೋಧ ಪಕ್ಷದ ನಾಯಕನ್ನನು ಆಯ್ಕೆ ಮಾಡಲು ಆಗಿಲ್ಲ. ರಾಷ್ಟ್ರೀಯ ಪಕ್ಷಕ್ಕೆ ಇಂತಹ ಪರಿಸ್ಥಿತಿ ಬರಬಾರದಿತ್ತು. ಆರ್ ಎಸ್ ಎಸ್, ಭಜರಂಗದಳ ಬ್ಯಾನ್ ಯಾರು ಮಾಡಿದ್ದಾರೆ. ನಾನು ಕಾಂಗ್ರೆಸ್ ಸರ್ಕಾರದ ವಕ್ತಾರ ಅಲ್ಲಾ ಎಂದು ಹೇಳಿದ್ದಾರೆ.
ಮದುವೆ ಮನೆಯಲ್ಲಿ ಸ್ಮಶಾನ ಮೌನ; ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದ ವಧು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 14 =
Remember me
