ಬೆಳಗಾವಿ:ಜೈನಮುನಿಯೊಬ್ಬರು ಬಸದಿಯಿಂದ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದು, ಭಕ್ತರದಲ್ಲಿ ತೀವ್ರ ಆತಂಕ ಉಂಟಾಗಿದೆ. ಅವರು ನಾಪತ್ತೆಯಾಗಿರುವುದು ನಿನ್ನೆಯೇ ಬೆಳಕಿಗೆ ಬಂದಿದ್ದರೂ ಇನ್ನೂ ಯಾವುದೇ ಸುಳಿವು ಪತ್ತೆಯಾಗಿಲ್ಲ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಹಿರೇಕೋಡಿ ಗ್ರಾಮದ ನಂದಿಪರ್ವತ ಜೈನ ಆಶ್ರಮದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾದವರು. ಮೊನ್ನೆ ರಾತ್ರಿ ಹತ್ತರ ವರೆಗೆ ಆಶ್ರಮದ ತಮ್ಮ ಕೋಣೆಯಲ್ಲೇ ಇದ್ದ ಸ್ವಾಮೀಜಿ, ನಿನ್ನೆ ಬೆಳಗ್ಗೆ 8ರಿಂದ ನಾಪತ್ತೆ ಆಗಿದ್ದಾರೆ. ನಿನ್ನೆ ಬೆಳಗ್ಗೆ ಭಕ್ತರು ಆಶ್ರಮಕ್ಕೆ ಆಗಮಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಇದನ್ನೂ ಓದಿ:ಪ್ರೀತಿಸಿ ಮನೆ ಬಿಟ್ಟು ಹೋಗಿ ಮದ್ವೆಯಾದ ಮಗಳು; ನೊಂದು ಪ್ರಾಣ ಕಳ್ಕೊಂಡ ತಾಯಿ!
ಕಾಮಕುಮಾರ ನಂದಿ ಮಹಾರಾಜರು ಕಳೆದ 15 ವರ್ಷಗಳಿಂದ ನಂದಿಪರ್ವತದಲ್ಲಿ ವಾಸವಿದ್ದರು. ಅವರ ಪಿಂಚಿ, ಕಮಂಡಲು ಹಾಗೂ ಮೊಬೈಲ್​​ಫೋನ್​ ಅವರ ವಾಸದ ಕೋಣೆಯಲ್ಲೇ ಇದೆ. ಜೈನಮುನಿಗಳು ಎಲ್ಲೇ ಹೋಗಬೇಕಿದ್ದರೂ ಪಿಂಚಿ-ಕಮಂಡಲು ತಗೆದುಕೊಂಡು ಹೋಗುವ ಪ್ರತೀತಿ. ಆದರೆ ಅವರ ಪಿಂಚಿ-ಕಮಂಡಲು ಕೋಣೆಯಲ್ಲಿಯೇ ಇರುವುದರಿಂದ ಭಕ್ತರಲ್ಲಿ ಆತಂಕ ಉಂಟಾಗಿದೆ. ಆಶ್ರಮಕ್ಕೆ ಸಂಬಂಧಿಸಿದ ಕೆಲವು ದಾಖಲೆ ಪತ್ರ ಸಹ ನಾಪತ್ತೆಯಾಗಿದೆ.
ಇದನ್ನೂ ಓದಿ:ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ
ನಿನ್ನೇ ಇಡೀ ದಿನ ಜೈನ ಆಶ್ರಮದ ಸುತ್ತಮುತ್ತ ಭಕ್ತರಿಂದ ಹುಡುಕಾಟ ನಡೆಸಲಾಗಿದ್ದು, ಇಂದು ಚಿಕ್ಕೋಡಿ ಪೊಲೀಸ್ ಠಾಣೆಗೆ ನಾಪತ್ತೆಯಾದ ಬಗ್ಗೆ ದೂರು ನೀಡಲಾಗಿದೆ. ಆಚಾರ್ಯ ಕಾಮಕುಮಾರ ನಂದಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭೀಮಪ್ಪ ಉಗಾರೆ ದೂರು ನೀಡಿದ್ದಾರೆ.
ಇದು ಸಿಂಗಲ್​ ಆಗಿರುವವರಿಂದ ಮಿಂಗಲ್ ಆಗಲು ಗ್ರೀನ್​ ಸಿಗ್ನಲ್; ಪೇರಿಂಗ್ ಆಗಲೆಂದೇ ಪಿಯರ್ ರಿಂಗ್, ಏನಿದು ಹೊಸ ಟ್ರೆಂಡ್?

ಪೆಟ್ರೋಲ್ ಪ್ರತಿ ಲೀಟರ್​ಗೆ 15 ರೂಪಾಯಿಯಂತೆ ಸಿಗಬಲ್ಲದು: ಕೇಂದ್ರ ಸಚಿವ ನಿತಿನ್ ಗಡ್ಕರಿ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:nineteen + two =
Remember me
