
ಬೆಂಗಳೂರು:ಜಲಜೀವನ್ ಮಿಷನ್ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಮೊದಲ ಆದ್ಯತೆ ನೀಡಿ ಪೂರ್ಣಗೊಳಿಸಬೇಕು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಸೂಚಿಸಿದ್ದಾರೆ.ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಯೋಜನೆಯ ಪರಾಮರ್ಶೆ ಮಾಡಿದ ಅವರು, ಧಾರವಾಡ ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಬಾರದಂತೆ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಯೋಜನೆ ಕುರಿತು ಅಧಿಕಾರಿಗಳು ಗಮನ ನೀಡಬೇಕು. ಜನಪ್ರತಿನಿಧಿಗಳ ಸಲಹೆ ಸಹಕಾರ ಪಡೆದು ಸಮಸ್ಯೆ ಬಗೆಹರಿಸಬೇಕು ಎಂದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕಾ ಖರ್ಗೆ ಅವರು ಮಾತನಾಡಿ, ಜಲಜೀವನ ಯೋಜನೆಗೆ ಸಂಬಂದಿಸಿದಂತೆ ಯಾವುದೇ ಸಮಸ್ಯೆ ಇದ್ದರೂ ತಮ್ಮ ಗಮನಕ್ಕೆ ತರಬಹುದು. ಕೂಡಲೇ ಆ ಸಮಸ್ಯೆ ಪರಿಹರಿಸುವ ಕೆಲಸ ಮಾಡುವುದಾಗಿ ತಿಳಿಸಿದರು.ಸಭೆಯಲ್ಲಿ ನವಲಗುಂದ ಕ್ಷೇತ್ರದ ಶಾಸಕರಾದ ಕೋನರೆಡ್ಡಿ, ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವರೂಪ, ಕೆ.ಯುಡಬ್ಲ್ಯು.ಡಿ.ಬಿ ಅಧಿಕಾರಿಗಳು ಮತ್ತು ಸಭೆಗೆ ಸಂಭಂದ ಪಟ್ಟ ಧಾರವಾಡ ಜಿಲ್ಲಾ ಹಿರಿಯ ಅಧಿಕಾರಿಗಳು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + nine =
Remember me
