ಬಳ್ಳಾರಿ: ಕಾಕತಾಳೀಯವೋ ಏನೋ… ಮಾಜಿ ಸಚಿವ ಜನಾರ್ದನ ರೆಡ್ಡಿ ರಾಜಕೀಯದಲ್ಲಿ ಮತ್ತೆ ಸಕ್ರಿಯ ಆಗುತ್ತಿದ್ದಂತೆ ಅಕ್ರಮ ಗಣಿಗಾರಿಕೆ ಪ್ರಕರಣಗಳಿಗೆ ವೇಗ ಸಿಕ್ಕಿದಂತಾಗಿದೆ. ಸುಪ್ರಿಂ ಕೋರ್ಟ್​​ ಸೂಚನೆ ಮೇರೆಗೆ ಇಂದಿನಿಂದ ಸಿಬಿಐ ವಿಶೇಷ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳ ತ್ವರಿತ ವಿಚಾರಣೆ ನಡೆಸಲಿದೆ.
ಹೈದ್ರಾಬಾದ್​​ನಲ್ಲಿರುವ ಸಿಬಿಐ ವಿಶೇಷ ಕೋರ್ಟ್​ನಲ್ಲಿ ಪ್ರಮುಖ ಸಾಕ್ಷಿಗಳ ವಿಚಾರಣೆ‌ ಇಂದಿನಿಂದ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಮುಖ ಸಾಕ್ಷಿ ಉದ್ಯಮಿ ಟಪಾಲ್ ಏಕಾಂಬರಂಗೆ ನ್ಯಾಯಾಲಯಕ್ಕೆ​​ಗೆ ಹಾಜರಾಗುವಂತೆ ಸಮನ್ಸ್​​ ನೀಡಿದೆ. ಬಳ್ಳಾರಿ ಜಿಲ್ಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಸಾಕ್ಷಿಗಳಿದ್ದು, ನ್ಯಾಯಾಲಯ ಒಬ್ಬರ ನಂತರ ಒಬ್ಬರ ವಿಚಾರಣೆ ನಡೆಸಲಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ತಿಂಗಳಲ್ಲಿ ವಿಚಾರಣೆ ಮುಗಿಸುವಂತೆ ಸುಪ್ರೀಂ ಕೋರ್ಟ್ ಸಿಬಿಐ ನ್ಯಾಯಾಲಯಕ್ಕೆ ಸೂಚನೆ ನೀಡಿತ್ತು. ಹೀಗಾಗಿ, ಇದೀಗ ​12 ವರ್ಷಗಳ ಹಿಂದಿನ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಮತ್ತೆ ವೇಗ ಬಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
