ಬಳ್ಳಾರಿ:ಗಣಿಧಣಿ ಜನಾರ್ದನ ರೆಡ್ಡಿ ಇದೀಗ ತಮ್ಮದೇ ಹೊಸ ಪಕ್ಷ ಕಟ್ಟಲು ರೆಡಿಯಾಗಿದ್ದು, ಆ ಮೂಲಕ ಮುಂದಿನ ಚುನಾವಣೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ರಾಜಕೀಯ ನೆಲೆ ಕಂಡುಕೊಳ್ಳಲು ಮುಂದಾಗಿದ್ದಾರೆ. ಈ ಸಂಬಂಧ ನಾಳೆಯೇ ರೆಡ್ಡಿ ಆಪ್ತರು ಚುನಾವಣಾ ಆಯೋಗಕ್ಕೆ ತೆರಳಲಿರುವುದು ತಿಳಿದುಬಂದಿದೆ.
ರಾಜಕೀಯ ನೆಲೆ ಕಂಡುಕೊಳ್ಳಲು ಚಿಂತನೆ ನಡೆಸಿರುವ ಗಾಲಿ ಜನಾರ್ದನ ರೆಡ್ಡಿ, ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಹೊಸ ಪಕ್ಷವನ್ನು ಕಟ್ಟಲು ಮುಂದಾಗಿದ್ದು, ಈ ಸಂಬಂಧ ನಾಳೆ ಅವರ ಆಪ್ತರು ದೆಹಲಿಗೆ ತೆರಳಿ ಚುನಾವಣಾ ಆಯೋಗಕ್ಕೆ ಹೊಸ ಪಕ್ಷದ ಹೆಸರು ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ.
ಒಂದೆಡೆ ಹೊಸ ಪಕ್ಷ ಸ್ಥಾಪನೆಗೆ ಚುರುಕಿನ ಚಟುವಟಿಕೆ ನಡೆಯುತ್ತಿದ್ದರೆ, ಇನ್ನೊಂದೆಡೆ ರೆಡ್ಡಿ ಪತ್ನಿ ಅರುಣಾ ಡಿ.14ರಂದು ಗಂಗಾವತಿಯಲ್ಲಿ ನೂತನ ಗೃಹ ಪ್ರವೇಶ ಮಾಡಲಿದ್ದಾರೆ. ಎಲ್ಲವೂ ಅಂದುಕೊಂಡಂತೆಯೇ ಆದಲ್ಲಿ ರೆಡ್ಡಿ ಗಂಗಾವತಿಯಿಂದ ಹಾಗೂ ಅವರ ಪತ್ನಿ ಗದಗದಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ. ಮಾತ್ರವಲ್ಲ, ರೆಡ್ಡಿ ತಮ್ಮ ಹೊಸ ಪಕ್ಷದ ಮೂಲಕ ರಾಜ್ಯದ 30 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದಾರೆ ಎಂದೂ ಹೇಳಲಾಗಿದೆ.
ಬೆಂಗಳೂರಿನಲ್ಲಿಯೇ ಇರುವ ರೆಡ್ಡಿಯನ್ನು ಬೇರೆ ಪಕ್ಷದವರು ಸಂಪರ್ಕಿಸಲು ಯತ್ನಿಸುತ್ತಿದ್ದು, ಬೇರೆ ಬೇರೆ ಜಿಲ್ಲೆಯ ಟಿಕೆಟ್ ಆಕಾಂಕ್ಷಿಗಳಿಂದಲೂ ರೆಡ್ಡಿಯೊಂದಿಗೆ ಮಾತುಕತೆ ನಡೆಯುತ್ತಿದೆ. ಆರಂಭದಲ್ಲಿ ನೂತನ ಪಕ್ಷವನ್ನು ರೆಡ್ಡಿಯ ಆಪ್ತರು ನಿರ್ವಹಿಸಲಿದ್ದಾರೆ ಎನ್ನಲಾಗುತ್ತಿದೆ.
‘ನನ್ನನ್ನು ಪೊಲೀಸರೇ ಸಾಯಿಸ್ತಾರೆ, ನ್ಯಾಯ ಕೊಡಿಸಿ’ ಎಂದು ಅಲವತ್ತುಕೊಂಡ ಯುವಕ!
ಗುಟ್ಟಾಗಿ ಸೊಸೆಯ ಬೆಡ್​ರೂಮ್​ಗೆ ಹೋಗುತ್ತಿದ್ದ ಅತ್ತೆ; ಪ್ರೆಗ್ನೆನ್ಸಿ ಟೆಸ್ಟ್​ ಪಾಸಿಟಿವ್ ಪತ್ತೆ!; ನಿಜಕ್ಕೂ ಆಗಿದ್ದೇನು?
ಮತ್ತೆ ಕನ್ನಡಾಭಿಮಾನ ಮೆರೆದ ರಿಷಬ್​ ಶೆಟ್ಟಿ; ಈ ಸಲ ಮಾತಿಗೆ ಸೀಮಿತವಾಗದೆ ಕನ್ನಡದಲ್ಲೇ ಬರೆದ್ರು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
