ರಾಯಚೂರು:ಮಾಜಿ ಸಚಿವ, ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರು ಇಂದು ಮಂತ್ರಾಲಯದ ಶ್ರೀ ಗುರುರಾಘವೇಂದ್ರರ ಸನ್ನಿಧಾನಕ್ಕೆ ಪತ್ನಿ ಅರುಣಾಲಕ್ಷ್ಮೀ ಜತೆ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ.
ಎರಡು ವರ್ಷಗಳ ಹಿಂದೆ ರಾಯರ ಮಠಕ್ಕೆ ಆಗಮಿಸಿದ್ದ ರೆಡ್ಡಿ, ಅದಾದ ಮೇಲೆ ಇಂದೇ ಮತ್ತೆ ಭೇಟಿ ನೀಡಿದ್ದು, ರಾಯರ ಬೃಂದಾವನಕ್ಕೆ ಪತ್ನಿಯೊಂದಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಾತ್ರವಲ್ಲದೆ ಕ್ಷೇತ್ರದ ಮಹಾತ್ಮೆ, ರಾಯರ ಕೃಪೆ ಕುರಿತು ತಮ್ಮ ಅಭಿಪ್ರಾಯವನ್ನು ಹೇಳಿಕೊಂಡಿದ್ದಾರೆ.
ರಾಯರ ಆರಾಧನೆಯಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿರುವುದು ನನ್ನ ಪೂರ್ವಜನ್ಮದ ಪುಣ್ಯದ ಫಲ. ಕಳೆದ ಹತ್ತು ವರ್ಷಗಳ ಕಾಲ ನನ್ನ ಹುಟ್ಟೂರಿಗೆ ಬರಲಾಗದೆ ವನವಾಸದ ರೀತಿಯ ಸಂಕಷ್ಟ ಅನುಭವಿಸಿದೆ. ಅದರಿಂದ ಪಾರು ಮಾಡಿದ್ದು ರಾಘವೇಂದ್ರ ಸ್ವಾಮಿಗಳ ಪವಾಡ ಎಂದ ಅವರು ನಾನು ಮಂತ್ರಾಲಯದ ರಾಯರ ಪರಮಭಕ್ತ. ಯಾವಾಗಲೂ ಅದರಲ್ಲೂ ಸಂಕಷ್ಟದ ಗಳಿಗೆಯಲ್ಲಿ ರಾಘವೇಂದ್ರ ಸ್ವಾಮಿಗಳನ್ನು ಪ್ರಾರ್ಥಿಸುತ್ತೇನೆ ಎಂದರು.
ಇದನ್ನೂ ಓದಿ:ಕೋಚ್ ಕಾಶಿನಾಥ್​ ನಾಯ್ಕ್​ ಮನೆಗೆ ತೆರಳಿ ಗುರುವಂದನೆ ಸಲ್ಲಿಸಿದ ನೀರಜ್​ ಚೋಪ್ರಾ
ರಾಯರ ಅನುಗ್ರಹದಿಂದಲೇ ಇಂದು 350ನೇ ಆರಾಧನೆಯಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿದೆ ಎಂಬುದರಲ್ಲಿ ವಿಶ್ವಾಸವಿದೆ ಎಂಬುದಾಗಿ ಹೇಳಿದ ರೆಡ್ಡಿ, ರಾಜಕೀಯ ವಿಚಾರದ ಕುರಿತು ಮಾತನಾಡುವುದಿಲ್ಲ ಎಂದು ಹೇಳಿದರು. ಇನ್ನು ಸಕ್ರಿಯ ರಾಜಕಾರಣಕ್ಕೆ ಮರಳುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆ ಬಗ್ಗೆ ಈ ಏನೂ ಹೇಳಲ್ಲ ಎನ್ನುವ ಮೂಲಕ ಆ ವಿಷಯವನ್ನು ಗುಟ್ಟಾಗಿಯೇ ಇರಿಸಿದರು.

ದಂಪತಿಯ ಕೊಲೆ, ಬಾಡಿಗೆಗೆ ಇದ್ದಿದ್ದವನೇ ಕೊಲೆಗಾರ; ವರಮಹಾಲಕ್ಷ್ಮೀ ಹಬ್ಬದಂದು ನಡೆದಿದ್ದ ಡಬಲ್​ ಮರ್ಡರ್​

ಇವರು ಅಂಥಿಂಥ ಕಳ್ಳರಲ್ಲ: ಇವರ ಬಳಿ ಇತ್ತು ಕೋಟಿ ರೂಪಾಯಿ ಮೌಲ್ಯದ ಪುರಾತನ ರತ್ನ!

ನಾನು ಟೈಟಾಗಿದ್ದೇನೆ ಗೊತ್ತಾಗಿಲ್ಲ, ಇನ್ನೊಂದು ಕಾರ್ಡ್ ನಂಬರ್ ಕೊಡಿ ಎಂದ; 730 ರೂಪಾಯಿ ವೈನ್‌ಗೆ 1.79 ಲಕ್ಷ ರೂ. ಧೋಖಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
