ಬೆಂಗಳೂರು:ರಾಜಧಾನಿ ಬೆಂಗಳೂರಿನಲ್ಲಿ ಸಾರ್ವಜನಿಕರು ಪೊಲೀಸರಿಂದ ಬಗೆಹರಿಯಬಹುದಾದ ಕುಂದು-ಕೊರತೆಗಳಿದ್ದಲ್ಲಿ ನೇರವಾಗಿ ಪೊಲೀಸ್ ಕಮಿಷನರ್ ಅವರನ್ನೇ ಭೇಟಿ ಆಗಬಹುದು. ಈ ಕುರಿತು ಖುದ್ದು ಆಯುಕ್ತರೇ ಮಾಹಿತಿ ಹಂಚಿಕೊಂಡಿದ್ದಾರೆ.
ಮಾಸಿಕ ಜನಸಂಪರ್ಕ ಸಭೆ ಕುರಿತ ಮಾಹಿತಿ ಹಂಚಿಕೊಂಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಈ ವಿಷಯ ತಿಳಿಸಿದ್ದಾರೆ. ನಾನು ಕೇಂದ್ರ ವಿಭಾಗದವರು ಕುಮಾರಕೃಪಾ ರಸ್ತೆಯ ಗಾಂಧಿಭವನದ ವಿನೋಬಾ ಸಭಾಂಗಣದಲ್ಲಿ ಆಯೋಜಿಸಿರುವ ಈ ತಿಂಗಳ ಮಾಸಿಕ ಜನಸಂಪರ್ಕ ಸಭೆಯಲ್ಲಿ ಭಾಗವಹಿಸಿಸಲಿದ್ದೇನೆ. ಸಾರ್ವಜನಿಕರು ತಮ್ಮ ಕುಂದುಕೊರತೆ ಅಥವಾ ಸಲಹೆಗಳು ಇದ್ದಲ್ಲಿ ಸಂಪರ್ಕಿಸಬಹುದು. ಹಿಂದಿನ ಸಲದಂತೆ ಈ ಸಲವೂ ಇತರ ಇಲಾಖೆಯ ಅಧಿಕಾರಿಗಳನ್ನು ಕೂಡ ಆಹ್ವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ:ಹಬ್ಬದ ದಿನವೇ ಏನಿದು ‘ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ’!?
ಆ. 27ರ ಭಾನುವಾರ ಬೆಳಗ್ಗೆ 11ರಿಂದ ಮಧ್ಯಾಹ್ನ 1ರ ವರೆಗೆ ಈ ಜನಸಂಪರ್ಕ ಸಭೆ ನಡೆಯಲಿದೆ. ಇಲ್ಲಿ ಮಾತ್ರವಲ್ಲದೆ ನಗರದ ಎಲ್ಲ ಠಾಣೆಗಳಲ್ಲೂ ಸಹ ಈ ಜನಸಂಪರ್ಕ ಸಭೆಗಳು ಇದೇ ಸಮಯದಲ್ಲಿ ನಡೆಯಲಿದ್ದು ಸಾರ್ವಜನಿಕರು ತಮ್ಮ ಹತ್ತಿರದ ಠಾಣೆಗಳಿಗೆ ಹೋಗಿ ಕೂಡ ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ತಿಳಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದಲ್ಲದೆ, ನಗರದ ಎಲ್ಲ ಠಾಣೆಗಳಲ್ಲೂ ಸಹ ಈ ಜನಸಂಪರ್ಕ ಸಭೆಗಳು ಇದೇ ಸಮಯದಲ್ಲಿ ನಡೆಯಲಿದ್ದು ಸಾರ್ವಜನಿಕರು ತಮ್ಮ ಹತ್ತಿರದ ಠಾಣೆಗಳಿಗೆ ಹೋಗಿ ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ತಿಳಿಸಬಹುದಾಗಿದೆ.https://t.co/wtnCHgCG4c— CP Bengaluru ಪೊಲೀಸ್ ಆಯುಕ್ತ ಬೆಂಗಳೂರು (@CPBlr)August 25, 2023
ಇದಲ್ಲದೆ, ನಗರದ ಎಲ್ಲ ಠಾಣೆಗಳಲ್ಲೂ ಸಹ ಈ ಜನಸಂಪರ್ಕ ಸಭೆಗಳು ಇದೇ ಸಮಯದಲ್ಲಿ ನಡೆಯಲಿದ್ದು ಸಾರ್ವಜನಿಕರು ತಮ್ಮ ಹತ್ತಿರದ ಠಾಣೆಗಳಿಗೆ ಹೋಗಿ ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ತಿಳಿಸಬಹುದಾಗಿದೆ.https://t.co/wtnCHgCG4c
ಒಬ್ಬ ಮಗನಿದ್ರೂ ಮತ್ತೆ ಗಂಡು ಮಗುವಾಗಿಲ್ಲ ಅಂತ ಮಕ್ಕಳ ಸಹಿತ ಬಾವಿಗೆ ಹಾರಿದ್ಲು; ಮೂವರು ಮಕ್ಕಳೂ ಸಾವು, ತಾಯಿ ಬಚಾವ್!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
