ವಿಜಯಪುರ:ಪ್ರಧಾನಮಂತ್ರಿ ಜನೌಷಧ ಕೇಂದ್ರವನ್ನು ಹಳ್ಳಿ ಹಳ್ಳಿಗೆ ತೆಗೆದುಕೊಂಡು ಹೋಗಲು ಚಿಂತನೆ ನಡೆದಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಹೇಳಿದರು.
ಕಿತ್ತೂರು ರಾಣಿ ಚನ್ನಮ್ಮ ಸಮುದಾಯ ಭವನದಲ್ಲಿ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಹಕಾರ ಸಪ್ತಾಹ ದಿನಾಚರಣೆ ಹಾಗೂ ಸಪ್ತಾಹದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕರೊನಾ ಸಂದರ್ಭ ಜನೌಷಧ ಕೇಂದ್ರಗಳಿಂದ ಜನರಿಗೆ ಸಾಕಷ್ಟು ಅನುಕೂಲವಾಗಿದೆ. ಹೀಗಾಗಿ ಇನ್ನೂ 600 ಜನೌಷಧ ಕೇಂದ್ರ ಸ್ಥಾಪಿಸಬೇಕೆಂಬ ಬೇಡಿಕೆ ಇದೆ. ಆದರೆ ಸಹಕಾರ ಕ್ಷೇತ್ರದಿಂದ ಹಳ್ಳಿ ಹಳ್ಳಿಗಳಿಗೆ ಜನೌಷಧ ಕೇಂದ್ರ ತೆಗೆದುಕೊಂಡು ಹೋಗಲು ಚಿಂತನೆ ನಡೆದಿದೆ ಎಂದು ತಿಳಿಸಿದರು. ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಈವರೆಗೆ ಸಹಕಾರ ರತ್ನ ಪ್ರಶಸ್ತಿ ನೀಡಲಾಗುತ್ತಿದ್ದು, ಇನ್ಮುಂದೆ ಸಣ್ಣ ಸಿದ್ದರಾಮೇಗೌಡ ಪಾಟೀಲರ ಹೆಸರಿನಲ್ಲಿ ಪ್ರತಿ ವರ್ಷ ಹತ್ತು ಸಾಧಕರಿಗೆ ಪ್ರಶಸ್ತಿ ನೀಡಲಾಗುವುದು ಎಂದರು.
ಕರೊನಾ ಹಿನ್ನೆಲೆ ರಾಜ್ಯದ ನಾಲ್ಕು ಸಹಕಾರಿ ವಿಭಾಗದಿಂದ ಆರ್ಥಿಕ ಸ್ಪಂದನ ಕಾರ್ಯಕ್ರಮ ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು. ಎಲ್ಲ ಸಂಘ ಸಂಸ್ಥೆಗಳಿಂದ ವಿಶೇಷ ಸಾಲ ಸೌಲಭ್ಯ ನೀಡಲಾಗಿದೆ. ಕೇಂದ್ರ ಸರ್ಕಾರ ಆತ್ಮ ನಿರ್ಭರ ಯೋಜನೆಯಡಿ 20 ಲಕ್ಷ ಕೋಟಿ ರೂ. ಘೊಷಣೆ ಮಾಡಿದ್ದು, ಆ ಪೈಕಿ 4750 ಕೋಟಿ ರೂ. ಸಹಕಾರಿ ಇಲಾಖೆಗೆ ನೀಡಿದೆ ಎಂದರು. ರಾಜ್ಯ ಸರ್ಕಾರ ಎಲ್ಲ ಸಹಕಾರಿಗಳ ಮೂಲಕ 1200 ಕೋಟಿ ರೂ. ಸಾಲ ನೀಡುವುದಾಗಿ ಘೊಷಿಸಿದ್ದು, ಆ ಪೈಕಿ 600 ಕೋಟಿ ರೂ. ಸಾಲ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದರು. ಶಾಸಕರಾದ ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ, ಬಸನಗೌಡ ಪಾಟೀಲ ಯತ್ನಾಳ ಇತರರು ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
