ಬೆಂಗಳೂರು:ಕರೊನಾ ವೈರಸ್​ ಸೋಂಕಿಗೆ ತಡೆನೀಡಲು ಪ್ರಧಾನಿ ನರೇಂದ್ರ ಮೋದಿ ಜನತಾ ಕರ್ಪ್ಯೂಗೆ ಆದೇಶ ನೀಡಿರುವ ಪರಿಣಾಮ ಬೆಂಗಳೂರಿನ ರಸ್ತೆಗಳೆಲ್ಲಾ ಖಾಲಿ ಖಾಲಿಯಾಗಿದೆ. ಆದರೆ, ಇದೇ ಖಾಲಿ ರಸ್ತೆ ಯುವಕನೊಬ್ಬನ ಪ್ರಾಣವನ್ನು ತೆಗೆದುಕೊಂಡಿದೆ.
ಹೌದು, ಬಿಕೋ ಎನ್ನುತ್ತಿರುವ ರಸ್ತೆಯನ್ನು ನೋಡಿದ ಯುವಕನೊಬ್ಬ ತನ್ನ ಬೈಕ್​ ಕ್ರೇಜ್​ನಿಂದಾಗಿ ವೇಗದ ಚಾಲನೆ ಮಾಡಿ ಅಪಘಾತಕ್ಕೀಡಾಗಿದ್ದಾನೆ. ಬೆಂಗಳೂರಿನ ಕೆ.ಆರ್.ಮಾರುಕಟ್ಟೆ ಫ್ಲೈ ಓವರ್ ಮೇಲೆ ಘಟನೆ ನಡೆದಿದೆ.
ಯುವಕ ಹೆಸರು ಪತ್ತೆಯಾಗಿಲ್ಲ. ಬೌನ್ಸ್ ಬೈಕ್​ನಲ್ಲಿ ಮೈಸೂರು ರಸ್ತೆಯಿಂದ ಬೆಂಗಳೂರು ಮಾರ್ಗವಾಗಿ ಬರುತ್ತಿದ್ದ. ಟ್ರಾಫಿಕ್ ಇಲ್ಲದ ಕಾರಣ ಅತೀ ವೇಗವಾಗಿ ಚಾಲನೆ ಮಾಡಿಕೊಂಡು ಬರುವಾಗ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವದಿಂದ ಬೈಕ್ ಸವಾರ ಸ್ಥಳದಲ್ಲೆ ಸಾವಿಗೀಡಾಗಿದ್ದಾನೆ.(ದಿಗ್ವಿಜಯ ನ್ಯೂಸ್​)
ಕರೊನಾ ವೈರಸ್​ ಸೋಂಕಿತ ಬಾಲಿವುಡ್​ ಗಾಯಕಿ ವಿರುದ್ಧ ವೈದ್ಯರಿಂದ ಸ್ಪೋಟಕ ಮಾಹಿತಿ ಬಹಿರಂಗ

ವಿದೇಶಕ್ಕೆ ತೆರಳದವರಿಗೂ ಬಂತು ಕರೊನಾ ವೈರಸ್; ಟ್ರಾವೆಲ್ ಹಿಸ್ಟರಿ ಇಲ್ಲದ ಇಬ್ಬರಲ್ಲಿ ಸೋಂಕು ದೃಢ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − six =
Remember me
