ಹಾಸನ:ಮದ್ಯದಂಗಡಿ ಲೈಸೆನ್ಸ್ ವಿವಾದ ಸಂಬಂಧ ಶಾಸಕ ಕೆ.ಎಂ ಶಿವಲಿಂಗೇಗೌಡ, ಎಚ್.ಕೆ ಸುರೇಶ್ ಜನತಾ ದರ್ಶನ ಕಾರ್ಯಕ್ರಮದ ವೇದಿಕೆ ಮೇಲೆಯೇ ಪರಸ್ಪರ ಕಿತ್ತಾಡಿಕೊಂಡಿದ್ದಾರೆ.
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಇಂದು ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮದ್ಯದ ಅಂಗಡಿ ತೆರೆದ ವಿಚಾರವಾಗಿ ಶಾಸಕರಾದ ಕೆ.ಎಂ.ಶಿವಲಿಂಗೇಗೌಡ ಮತ್ತು ಹೆಚ್​.ಕೆ.ಸುರೇಶ್ ಕಿತ್ತಾಡಿಕೊಂಡಿದ್ದಾರೆ. ಬಳಿಕ ಮಧ್ಯಪ್ರವೇಶಿಸಿದ ಅಧಿಕಾರಿಗಳು ಶಾಸಕರನ್ನು ಸಮಾಧಾನಪಡಿಸಿದರು.
ಜನತಾ ದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದ ಶಾಸಕ ಸುರೇಶ್ ಅವರು, ಮದ್ಯದಂಗಡಿ ತೆರೆದು ಹೆಣ್ಣುಮಕ್ಕಳ ತಾಳಿ ಕಿತ್ತುಕೊಳ್ಳುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಉತ್ತರ ನೀಡಿದ ಶಿವಲಿಂಗೇಗೌಡ, ಜನ ಸೇರಿಸುವವನು ನಾನು, ನೀನು‌ ಹದಿನೈದು ಜನ ಕರೆದುಕೊಂಡು ಬಂದು ಸಭೆ ಹಾಳು ಮಾಡಲು ಬಂದಿದ್ದೀಯಾ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಸಿಟ್ಟಾದ ಸುರೇಶ್, ನನಗೂ ಜಾವಗಲ್ ಗ್ರಾಮ ಸೇರುತ್ತದೆ, ನನಗೂ ಹಕ್ಕಿದೆ ಎಂದು ಹೇಳಿದ ಸುರೇಶ್, ಮದ್ಯದಂಗಡಿ ತೆರೆದಿರುವವನು ಶಿವಲಿಂಗೇಗೌಡರ ಸ್ನೇಹಿತ ಎಂದು ಮೈಕ್​ ಹಿಡಿದು ಆರೋಪಿಸಿದ್ದಾರೆ. ಇದರಿಂದ ಕೆರಳಿದ ಶಿವಲಿಂಗೇಗೌಡ ಅವರು, ಓವರ್ ಆಗಿ ಆಡಬೇಡ. ನಮ್ಮ ಸರ್ಕಾರ ಬಂದು ಐದು ತಿಂಗಳು ಆಯ್ತು ಒಂದು ಮದ್ಯದಂಗಡಿಗೂ‌ ಅನುಮತಿ ನೀಡಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ತೆರೆದಿದ್ದಾರೆ ಎಂದು ಆರೋಪಿಸಿದರು.
ಶಾಸಕರ ನಡುವಿನ ಗಲಾಟೆಯಿಂದ ಇಬ್ಬರ ಕಾರ್ಯಕರ್ತರ ನಡುವೆಯೂ ಗದ್ದಲ ಗಲಾಟೆ ಶುರುವಾಯಿತು. ಮೊದಲು ಭಾಷಣ ಮಾಡಿದ ಶಾಸಕ ಶಿವಲಿಂಗೇಗೌಡ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಜನರೆದುರೇ ಇಬ್ಬರು ಶಾಸಕರು ಪರಸ್ಪರ ಬೈದಾಡಿಕೊಳ್ಳುತ್ತಿದ್ದರೂ ಎಲ್ಲವನ್ನೂ‌ ನೋಡುತ್ತಾ ಉಸ್ತುವಾರಿ ಕೆ.ಎನ್.ರಾಜಣ್ಣ ಸುಮ್ಮನೆ ಕುಳಿತಿದ್ದರು.
40,000 ಫ್ರೆಶರ್‌ಗಳನ್ನು ನೇಮಿಸಿಕೊಳ್ಳಲಿದೆ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + seventeen =
Remember me
