ಬೆಂಗಳೂರು:ರಾಜ್ಯದ ವಿವಿಧ ಭಾಗಗಳಿಂದ ನಾಗರಿಕರು ಬೆಂಗಳೂರಿಗೆ ಆಗಮಿಸಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಿರುವುದು ಸಾಮಾನ್ಯ. ಆದರೆ ಇದನ್ನು ತಪ್ಪಿಸಿ ಜಿಲ್ಲಾ ಮಟ್ಟದಲ್ಲೇ ಜನತಾ ದರ್ಶನ ನಡೆಸಲು ಸರ್ಕಾರ ಸಜ್ಜಾಗಿದೆ.
ಜನ ದೂರದಿಂದ ಬರುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿಯೇ ಪ್ರತಿ ತಿಂಗಳು ಅಹವಾಲು ಆಲಿಸಿ, ಸೂಕ್ತ ಪರಿಹಾರವನ್ನು ಒದಗಿಸಲು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನ ಹಮ್ಮಿಕೊಳ್ಳಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಸೆ.25 ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿಗಳು, ಸಿಇಒಗಳು, ಜಿಲ್ಲಾ ಪೊಲೀಸ್ ವರಿಷ್ಠರಿಗೆ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಸೂಚಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಯಾ ಜಿಲ್ಲಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಸೆ.25 ರಂದು ಜನತಾ ದರ್ಶನ ಕಾರ್ಯಕ್ರಮಕ್ಕೆ ರೂಪುರೇಷೆ ಸಿದ್ಧಪಡಿಸಿಕೊಳ್ಳಬೇಕು. ಆಯಾ ಜಿಲ್ಲೆಯ ಜನರಿಗೆ ಜನತಾ ದರ್ಶನ ನಡೆಯುವ ಸ್ಥಳ, ಸಮಯ ಇತ್ಯಾದಿಗಳನ್ನು ಮುಂಚಿತವಾಗಿಯೇ ತಿಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ನೋಡಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.
ಇದನ್ನು ಓದಿ:
ಕಂದಾಯ ಇಲಾಖೆಯಲ್ಲಿ ದಕ್ಷತೆ ಹೆಚ್ಚಳಕ್ಕೆ ವಿಶೇಷ ಸಲಹಾ ಸಮಿತಿ ರಚನೆ

ಜನತಾ ದರ್ಶನದಂದು ಜಿಲ್ಲಾ ಮಟ್ಟದ ಎಲ್ಲ ಹಾಗೂ ಪ್ರತಿ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಹಾಜರಿದ್ದು, ಸಾರ್ವಜನಿಕರಿಂದ ಸ್ವೀಕೃತವಾದ ಎಲ್ಲಾ ಅರ್ಜಿಗಳು/ ಮನವಿಗಳನ್ನು ಈಗಾಗಲೇ ಚಾಲ್ತಿಯಲ್ಲಿರುವ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ(ಐಪಿಜಿಆರ್‌ಎಸ್) ತಂತ್ರಾಂಶದಲ್ಲಿ ದಾಖಲಿಸಬೇಕು ಹಾಗೂ ಅರ್ಜಿಗಳ ವಿಲೇವಾರಿಯನ್ನು ನಿರ್ವಹಿಸಬೇಕು. ಸಂಬಂಧಿಸಿದ ಅರ್ಜಿಗಳನ್ನು ಜಾಗ್ರತೆಯಿಂದ ಹಾಗೂ ಸಹಾನುಭೂತಿಯಿಂದ ಪರಿಶೀಲಿಸಿ ಕಾಲಾವಧಿಯೊಳಗೆ ನಿಯಮಾನುಸಾರ ಪರಿಹಾರೋಪಾಯಗಳನ್ನು ಒದಗಿಸುವ ಕುರಿತು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ.
ತಾಲೂಕು ಮಟ್ಟದಲ್ಲಿ ಡಿಸಿ ಜನತಾದರ್ಶನ
ಪ್ರತಿ ತಿಂಗಳೂ ಜನತಾ ದರ್ಶನವನ್ನು ಜಿಲ್ಲಾ ಮಟ್ಟದಲ್ಲಿ ಹಮ್ಮಿಕೊಳ್ಳಬೇಕು. ಜಿಲ್ಲಾಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮೆ ತಮ್ಮ ಜಿಲ್ಲಾ ವ್ಯಾಪ್ತಿಯ ಒಂದು ತಾಲ್ಲೂಕನ್ನು ಆಯ್ಕೆ ಮಾಡಿಕೊಂಡು ತಾಲೂಕು ಮಟ್ಟದಲ್ಲಿ ಜನತಾದರ್ಶನ ಕಾರ್ಯಕ್ರಮ ನಡೆಸಬೇಕು ಎಂದು ಸೂಚಿಸಲಾಗಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × five =
Remember me
