ಬೆಂಗಳೂರು:ರಮೇಶ್​ ಜಾರಕಿಹೊಳಿ ಸೆಕ್ಸ್​ ಸಿಡಿ ಪ್ರಕರಣ ಸಂಬಂಧ ದೂರುದಾರ ದಿನೇಶ್​ ಕಲ್ಲಹಳ್ಳಿ ಇಂದು(ಶುಕ್ರವಾರ) ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆಗೆ ವಿಚಾರಣೆಗೆ ಹಾಜರಾದರು.
ರಮೇಶ್​ ಜಾರಕಿಹೊಳಿ ಅವರದ್ದು ಎನ್ನಲಾದ ಸೆಕ್ಸ್​ ವಿಡಿಯೋ ಸಮೇತ ಸಂತ್ರಸ್ತ ಯುವತಿಗೆ ನ್ಯಾಯ ಕೊಡಿಸಬೇಕು. ಈ ಪ್ರಕರಣದ ಸತ್ಯಾಸತ್ಯತೆ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾ.2ರಂದು ಪೊಲೀಸ್​ ಠಾಣೆಗೆ ಸಾಮಾಜಿಕ ಕಾರ್ಯಕರ್ತ ದಿನೇಶ್​ ಕಲ್ಲಹಳ್ಳಿ ದೂರು ನೀಡುವ ಮೂಲಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿಸಿದ್ದಾರೆ. ಈ ಪ್ರಕರಣ ಕುರಿತು ನಿನ್ನೆಯೇ ವಿಚಾರಣೆಗೆ ಹಾಜರಾಗುವಂತೆ ದಿನೇಶ್​ ಕಲ್ಲಹಳ್ಳಿಗೆ ಪೊಲೀಸರು ನೋಟಿಸ್ ನೀಡಿದ್ದರಾದರೂ, ಅವರು ಬಂದಿರಲಿಲ್ಲ.ಇದನ್ನೂ ಓದಿರಿಸೆಕ್ಸ್​ ವಿಡಿಯೋದಲ್ಲಿ ರಮೇಶ್​ ಜಾರಕಿಹೊಳಿಯ ಮಚ್ಚೆ ಹುಡುಕಿದ ಮಹೇಶ್​ ಕುಮಟಳ್ಳಿ!
‘ರಮೇಶ್​ ಜಾರಕಿಹೊಳಿ ಸಿಡಿ ಬಯಲು ಮಾಡಿದ ನನಗೆ ಬೆದರಿಕೆ‌ ಕರೆಗಳು ಬರುತ್ತಿವೆ. ನನಗೆ ಸೂಕ್ತ ಭದ್ರತೆ ಬೇಕಾಗಿದೆ. ಹೀಗಾಗಿ ವಿಚಾರಣೆಗೆ ಮಾ.4ರಂದು ಹಾಜರಾಗಲು ಸಾಧ್ಯವಾಗಿಲ್ಲ. ಇದೇ ತಿಂಗಳ 9ರಂದು ಹಾಜರಾಗುತ್ತೇನೆ’ ಎಂದಿದ್ದ ದಿನೇಶ್ ಕಲ್ಲಹಳ್ಳಿ, ಮರುದಿನವೇ(ಮಾ.5) ವಿಚಾರಣೆಗೆ ಹಾಜರಾದರು.ಇದನ್ನೂ ಓದಿರಿಜಾರಕಿಹೊಳಿ ಸೆಕ್ಸ್​ ಸಿಡಿ‌ ಪ್ರಕರಣ 5 ಕೋಟಿ ರೂಪಾಯಿಗೆ ಡೀಲ್​!
ನಿನ್ನೆ ಭದ್ರತೆ ಕೊರತೆ ಹಿನ್ನೆಲೆ ವಿಚಾರಣೆಗೆ ಬರಲು ಆಗಲಿಲ್ಲ. ಇಂದು ಪೊಲೀಸರು ಭದ್ರತೆ ನೀಡಿದ್ದಾರೆ. ಹಾಗಾಗಿ ಕಬ್ಬನ್ ಪಾರ್ಕ್ ಠಾಣೆಗೆ ಹಾಜರಾಗಿದ್ದೇನೆ ಎಂದು ಇದೇ ವೇಳೆ ಮಾಧ್ಯಮದವರಿಗೆ ದಿನೇಶ್​ ಕಲ್ಲಹಳ್ಳಿ ಹೇಳಿದರು.
ದಿನೇಶ್ ಕಲ್ಲಹಳ್ಳಿ ನೀಡಿದ ದೂರಿನಲ್ಲಿ ಸೂಕ್ತ ವಿವರಗಳಿಲ್ಲ ಹಾಗೂ ಅಲ್ಲದೆ ಸಂತ್ರಸ್ತ ಯುವತಿ ಬಗ್ಗೆ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಠಾಣೆಗೆ ಬರಬೇಕೆಂದು ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ಸೆಕ್ಸ್​ ವಿಡಿಯೋದಲ್ಲಿ ರಮೇಶ್​ ಜಾರಕಿಹೊಳಿಯ ಮಚ್ಚೆ ಹುಡುಕಿದ ಮಹೇಶ್​ ಕುಮಟಳ್ಳಿ!

ಜಾರಕಿಹೊಳಿ ಸೆಕ್ಸ್​ ಸಿಡಿ ರಿಲೀಸ್​ಗೂ ಮುನ್ನ ದಿನೇಶ್ ಕಲ್ಲಹಳ್ಳಿ ಲಾಡ್ಜ್​ಗೆ ಹೋಗಿದ್ದೇಕೆ? ಸಿಸಿ ಕ್ಯಾಮರಾದಲ್ಲಿ ಸೆರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
