ಬೆಂಗಳೂರು:ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ಅಶ್ಲೀಲ ಸಿಡಿ ಪ್ರಕರಣದ ಕುರಿತಂತೆ ‘ಸಂತ್ರಸ್ತ’ ಯುವತಿ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡು ಹೇಳಿಕೆ ನೀಡಿದ್ದು, ”ಪ್ರಕರಣದಲ್ಲಿ ನನ್ನ ಬಲಿಪಶು ಮಾಡಲಾಗಿದ್ದು, ಗೃಹ ಸಚಿವರು ನನಗೆ ಹಾಗೂ ನನ್ನ ಕುಟುಂಬಕ್ಕೆ ರಕ್ಷಣೆ ನೀಡಬೇಕು” ಎಂದು ಮನವಿ ಮಾಡಿಕೊಂಡಿದ್ದಾಳೆ.
ಅಜ್ಞಾತ ಸ್ಥಳದಿಂದ 34 ಸೆಕೆಂಡ್​ನ ವಿಡಿಯೋ ಮಾಡಿ ಹರಿ ಬಿಟ್ಟಿರುವ ಯುವತಿ, ”ರಮೇಶ್ ಜಾರಕಿಹೊಳಿ ಅವರು ನನಗೆ ಕೆಲಸ ಕೊಡಿಸುವುದಾಗಿ ನಂಬಿಸಿ, ನನ್ನನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಇದರಿಂದ ನನ್ನ ಮಾನ ಮರ್ಯಾದೆ ಊರು ತುಂಬಾ ಹರಾಜಾಗಿದೆ. ನನ್ನ ಮನೆ ಹತ್ತಿರ ಬಂದು ಯಾರೋರೊ ಏನೇನೋ ಹೇಳಿದ್ದಾರೆ. ನನ್ನ ತಂದೆ ತಾಯಿ ಹಾಗೂ ನಾನು ಮೂರ್ನಾಲ್ಕು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದೇವೆ. ಆ ಅಶ್ಲೀಲ ವಿಡಿಯೋ ಹೇಗೆ ಮಾಡಿದಾರೋ ನನಗೆ ಗೊತ್ತಿಲ್ಲ. ದಯವಿಟ್ಟು ನನಗೆ ರಕ್ಷಣೆ ನೀಡಬೇಕು” ಎಂದು ಯುವತಿ ವಿಡಿಯೋದಲ್ಲಿ ಹೇಳಿದ್ದಾಳೆ.
ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ಅಶ್ಲೀಲ ಸಿಡಿ ಪ್ರಕರಣದ ಕುರಿತಂತೆ ಸಂತ್ರಸ್ತ ಯುವತಿ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡು ಹೇಳಿಕೆ ನೀಡಿದ್ದು, ''ಪ್ರಕರಣದಲ್ಲಿ ನನ್ನ ಬಲಿಪಶು ಮಾಡಲಾಗಿದ್ದು, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ನನಗೆ ಹಾಗೂ ನನ್ನ ಕುಟುಂಬಕ್ಕೆ ರಕ್ಷಣೆ ನೀಡಬೇಕು'' ಎಂದು ಮನವಿ ಮಾಡಿಕೊಂಡಿದ್ದಾಳೆ.pic.twitter.com/V2LMyGgb93
— Vijayavani (@VVani4U)March 13, 2021

ಇದೇ ಮೊದಲ ಬಾರಿಗೆ ಯುವತಿಯೇ ಮುಂದೆ ಬಂದು ಸಾರ್ವಜನಿಕವಾಗಿ ಹೇಳಿಕೆ ನೀಡಿರುವುದು ರಮೇಶ್ ಜಾರಕಿಹೊಳಿ ಸಿಡಿ ಕೇಸ್​ಗೆ ಸ್ಪೋಟಕ ತಿರುವು ಸಿಕ್ಕಿದೆ. ಇನ್ನು ಇಂದಷ್ಟೇ ರಮೇಶ್ ಜಾರಕಿಹೊಳಿ ಅವರು ಬೆಂಗಳೂರಿನ ಸದಾಶಿವನಗರ ಪೊಲೀಸ್​ ಠಾಣೆಯಲ್ಲಿ ಸಿಡಿ ಕೇಸ್​ ಕುರಿತಂತೆ ದೂರು ನೀಡಿದ್ದರು.
ಕಾಂಗ್ರೆಸ್​​ನ ಲಕ್ಷಾಂತರ ಕಾರ್ಯಕರ್ತರು ಬೀದಿಗಿಳಿದರೆ ತಡೆಯಲು ಯಾವ ಪೊಲೀಸರಿಂದಲೂ ಸಾಧ್ಯವಿಲ್ಲ, ಮುಂದೆ ನಮ್ದೇ ಅಧಿಕಾರ ಎಚ್ಚರಿಕೆ: ಸಿದ್ದರಾಮಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 14 =
Remember me
