| ಮಹೇಶ್ ವಿಜಾಪುರ ಬೆಳಗಾವಿಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ಬೆಳಗಾವಿ ಪವರ್​ಹೌಸ್ ರಾಜಕಾರಣ ಮತ್ತೆ ಸದ್ದು ಮಾಡುವ ಲಕ್ಷಣಗಳು ಕಾಣತೊಡಗಿದೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ 20 ಶಾಸಕರೊಂದಿಗೆ ಮೈಸೂರು ದಸರಾ ನೋಡಲು ಪ್ರವಾಸ ಯೋಜನೆ ರೂಪಿಸಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದ ಗುಪ್ತನಡೆ ಸ್ಪೋಟವಾಗುತ್ತಿದ್ದಂತೆ ಸಾರ್ವಜನಿಕ ಕಾರ್ಯಕ್ರಮದ ನೆಪದಲ್ಲಿ ನೇರವಾಗಿ ಜಾರಕಿಹೊಳಿ ಸಹೋದರರ ಪ್ರಾಬಲ್ಯ ಇರುವ ಬೆಳಗಾವಿ ಜಿಲ್ಲೆಗೆ ಬುಧವಾರ ದೌಡಾಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಡೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಬುಧವಾರ ರಾತ್ರಿ ಡಿಕೆಶಿ ಇಲ್ಲಿಯೇ ವಾಸ್ತವ್ಯಹೂಡಿದ್ದು, ಅವರ ಈ ನಡೆ ಮತ್ತಷ್ಟು ಕುತೂಹಲ ಕೆರಳಿಸಿದೆ.
ಏನೋ ನಡೆಯುತ್ತಿದೆ!:ಬೆಳಗಾವಿಗೆ ಕಾಲಿಡುತ್ತಿದ್ದಂತೆ ‘ಸಚಿವ ಸತೀಶ್ ಜಾರಕಿಹೊಳಿ ಮತ್ತು ನಮ್ಮ ನಡುವೆ ಯಾವುದೇ ಮುನಿಸಿಲ್ಲ. 136 ಶಾಸಕರೂ ಒಗ್ಗಟ್ಟಾಗಿದ್ದೇವೆ’ ಎಂದು ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದರೂ ಇಬ್ಬರ ನಡುವೆ ಏನೋ ಇದೆ ಎನ್ನುವ ಚರ್ಚೆಯೇ ಹೆಚ್ಚಾಗಿ ಕೇಳಿ ಬರುತ್ತಿದೆ. ‘ಬೆಳಗಾವಿ ಜಿಲ್ಲೆಯಲ್ಲಿ ಅಧಿಕಾರಿಗಳ ವರ್ಗಾವಣೆಯಲ್ಲೂ ಹಸ್ತಕ್ಷೇಪ ನಡೆಯುತ್ತಿದೆ. ನಾನು ವರ್ಗಾಯಿಸಿದ ಅಧಿಕಾರಿಗಳು ಹಿಂದಿನ ಬಾಗಿಲಿನಿಂದ ಮತ್ತದೇ ಸ್ಥಳಕ್ಕೆ ಬರುತ್ತಿದ್ದಾರೆ’ ಎಂದು ಸತೀಶ್ ಪರೋಕ್ಷವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದಿಟ್ಟುಕೊಂಡು ಡಿ.ಕೆ.ಶಿವಕುಮಾರ್ ವಿರುದ್ಧ ಅಸಮಾಧಾನದ ಬಾಣ ಬಿಟ್ಟಿದ್ದರು. ಈಗ 20ಕ್ಕೂ ಅಧಿಕ ಶಾಸಕರನ್ನು ಒಗ್ಗೂಡಿಸಿ ಮೈಸೂರು ದಸರಾ ನೋಡಲು ಹೊರಟಿದ್ದು ‘ಏನೋ ನಡೆಯುತ್ತಿದೆ’ ಎನ್ನುವುದಕ್ಕೆ ಇಂಬು ನೀಡುತ್ತಿದೆ. ಅದಲ್ಲದೆ, ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಶಾಸಕ ಲಕ್ಷ್ಮಣ ಸವದಿ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಿಸಲಾಗುತ್ತದೆ ಎಂಬ ಗುಸುಗುಸು ಸುದ್ದಿಯೂ ಸತೀಶ್ ಅಸಮಾಧಾನಕ್ಕೆ ಕಾರಣ ಎನ್ನಲಾಗಿದೆ.
ಜಾತಿ ರಾಜಕಾರಣಕ್ಕೆ ಬಲ:ಈ ಹಿಂದೆ ಪಿಎಲ್​ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ನೇಮಕ ವಿಷಯವಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ ನಡುವಿನ ಅಸಮಾಧಾನ ನಂತರ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ನಡುವೆ ರಾಜಕೀಯ ಸಮರ ಆರಂಭಗೊಂಡು ಅಂದಿನ ಸಮ್ಮಿಶ್ರ ಸರ್ಕಾರ ಉರುಳಿಸಿತ್ತು. ಈಗ ಮತ್ತೆ ಜಿಲ್ಲಾ ರಾಜಕಾರಣದಲ್ಲಿ ಪ್ರಭಾವ ಉಳಿಸಿಕೊಳ್ಳುವ ವಿಷಯವಾಗಿ ಬಣ ರಾಜಕಾರಣ ಆರಂಭಗೊಳ್ಳುತ್ತಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಜತೆಗೆ ಪ್ರಭಾವಿ ಸ್ಥಾನಕ್ಕಾಗಿ ಕಾಯುತ್ತಿರುವ ಅಥಣಿ ಶಾಸಕ ಲಕ್ಷ್ಮಣ ಸವದಿ ಒಡನಾಟ ಹೆಚ್ಚುತ್ತಿದ್ದು, ಲಿಂಗಾಯತ ಶಾಸಕರು ಒಟ್ಟಾಗುತ್ತಿದ್ದಾರೆ. ಹಾಗಾಗಿ, ಸತೀಶ್ ಕೂಡ ಆಂತರಿಕವಾಗಿ ತಮ್ಮನ್ನು ಬೆಂಬಲಿಸುವ ಶಾಸಕರನ್ನು ಒಟ್ಟುಗೂಡಿಸಿ ಶಕ್ತಿ ಪ್ರದರ್ಶಿಸುವ ಸಿದ್ಧತೆ ನಡೆಸಿದ್ದಾರೆ ಎನ್ನುತ್ತಿವೆ ರಾಜಕೀಯ ಮೂಲಗಳು.
ಇತ್ತೀಚೆಗಷ್ಟೇ ಸತೀಶ್ ಜಾರಕಿಹೊಳಿ ನನ್ನನ್ನು ಭೇಟಿ ಮಾಡಿದ್ದರು. ಅಭಿವೃದ್ಧಿ ವಿಷಯಗಳ ಕುರಿತು ಸಾಕಷ್ಟು ಸಮಯ ರ್ಚಚಿಸಿದ್ದೇವೆ. ಆದರೆ, ಶಾಸಕರ ಜತೆ ಪ್ರವಾಸದ ಕುರಿತು ಮಾತನಾಡಿಲ್ಲ. ಹುಕ್ಕೇರಿ ಹಿರೇಮಠದ ದಸರಾ ಉತ್ಸವದಲ್ಲಿ ಭಾಗವಹಿಸಲು ಬೆಳಗಾವಿಗೆ ಬಂದಿದ್ದೇನೆ. ಇದು ಖಾಸಗಿ ಕಾರ್ಯಕ್ರಮವಾಗಿರುವುದರಿಂದ ಸಚಿವರು, ಶಾಸಕರಿಗೆ ಮಾಹಿತಿ ಕೊಟ್ಟಿಲ್ಲ.
| ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ
ಪಕ್ಷದಲ್ಲಿ ಅಭದ್ರತೆ ಕಾಡುತ್ತಿದೆ ಎಂಬ ಕಾರಣಕ್ಕೆ ಬೇಸರಗೊಂಡು ಬಿಜೆಪಿಯ ಬಹಳಷ್ಟು ಮಾಜಿ ಸಚಿವರು, ಮಾಜಿ ಶಾಸಕರು ನನ್ನನ್ನು ಸಂರ್ಪಸಿ ಪಕ್ಷ ಬಿಡುವುದಾಗಿ ಹೇಳಿಕೊಂಡಿದ್ದಾರೆ. ನಾನು ಪಕ್ಷ ಬಿಡುವುದಾಗಿ ಎಲ್ಲೂ ಹೇಳಿಕೊಂಡಿಲ್ಲ, ಬಿಡುವುದೂ ಇಲ್ಲ.
| ಎಂ.ಪಿ.ರೇಣುಕಾಚಾರ್ಯ, ಮಾಜಿ ಸಚಿವ
ಬೆಂಗಳೂರು: ಬಿಜೆಪಿಯವರು ಏನು ಆಫರ್ ಕೊಡುತ್ತಿದ್ದಾರೆ ಅನ್ನುವುದನ್ನೂ ನಮ್ಮ ಶಾಸಕರು ಹೇಳಿದ್ದಾರೆ. ನಮ್ಮ ಬಳಿ ಪ್ರತಿಯೊಂದು ಮಾಹಿತಿ ಇದೆ. ಯಾರನ್ನೆಲ್ಲ ಭೇಟಿಯಾಗಿದ್ದಾರೆ ಎಂಬುದನ್ನು ಅಧಿವೇಶನದಲ್ಲಿ ಹೇಳಿಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಬಿಜೆಪಿ ಮತ್ತು ಜೆಡಿಎಸ್​ನವರು ಹತಾಶೆಯ ಅಂತಿಮ ಸ್ಥಿತಿ ತಲುಪಿದ್ದಾರೆ. ಅವರಿಗೆ ಡಾಕ್ಟರ್​ಗಳೇ ಮೇಜರ್ ಆಪರೇಷನ್ ಮಾಡಬೇಕು ಎಂದರು.
ಅರಿಶಿನ-ಕುಂಕುಮ ಬಳಸದೆ ಆಯುಧಪೂಜೆ ಮಾಡಿ: ಸರ್ಕಾರದಿಂದ ಹೊಸ ಆದೇಶ

#NoBindiNoBusiness | ಹಿಂದೂಗಳಿಂದ ಮತ್ತೆ ಅಭಿಯಾನ, ಟ್ರೆಂಡ್ ಆಯ್ತು ಕ್ಯಾಂಪೇನ್..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 13 =
Remember me
