ಬೆಂಗಳೂರು:ಸೃಜನ ಸಾಂಸ್ಕೃತಿಕ ಸಮೂಹದ ವತಿಯಿಂದ ಜಯನಗರ ನ್ಯಾಷನಲ್ ಕಾಲೇಜಿನ ಎಚ್ ಎನ್ ಕಲಾಕ್ಷೇತ್ರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ 22ನೇ ಗುರುವಂದನಾ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನೆರೆದಿದ್ದವರ ಮನಸೂರೆಗೊಂಡಿತು. ಸೃಜನದ ವಿದ್ಯಾರ್ಥಿಗಳ ಸಮೂಹ ಗಾಯನ ಮತ್ತು ನೃತ್ಯ ಪ್ರದರ್ಶನಗಳು ನೆರೆದಿದ್ದ ಪ್ರೇಕ್ಷಕರ ಮೆಚ್ಚುಗೆ ಗಳಿಸಿದವು.
ಸಮಾರಂಭದಲ್ಲ್ಲಿ ನಿವೃತ್ತ ಪೊಲೀಸ್ ಆಯುಕ್ತ ಭಾಸ್ಕರರಾವ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.93ಕ್ಕೂ ಅಧಿಕ ಅಂಕ ಗಳಿಸಿದ 19 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿಗಳು ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಿದರು.
ಸೃಜನ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ನರಹರಿ ದೀಕ್ಷಿತ್‌ರವರು ಮುಖ್ಯ ಅತಿಥಿಗಳನ್ನು ಹಾಗೂ ನೆರೆದಿದ್ದ ಪ್ರೇಕ್ಷಕರನ್ನು ಸ್ವಾಗತಿಸಿದರು. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.97.8 ಅಂಕ ಪಡೆದು ಸಾಧನೆ ಗೈದ ರಾಜೀವ್ ದೀಕ್ಷಿತ್ ಪ್ರತಿಭಾ ಪುರಸ್ಕೃತರ ಪರವಾಗಿ ಮತ್ತು ಪಾರ್ವತಿ ದೀಕ್ಷಿತ್ ಪೋಷಕರ ಪರವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸೃಜನ ಸಂಗೀತ ಶಾಲೆಯ ವಿದ್ಯಾರ್ಥಿಗಳು ಮತ್ತು ಪೋಷಕರು ಪಾಲ್ಗೊಂಡಿದ್ದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + ten =
Remember me
